ವಯನಾಡಿನಲ್ಲಿ ಮಮತಾ ಬ್ಯಾನರ್ಜಿಯಿಂದ ಪ್ರಿಯಾಂಕಾ ಗಾಂಧಿ ಪರ ಪ್ರಚಾರ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕಾಂಗ್ರೆಸ್ ಪಕ್ಷದೊಂದಿಗಿನ ಭಿನ್ನಾಭಿಪ್ರಾಯವನ್ನು ಬದಿಗಿಟ್ಟು ವಯನಾಡು ಲೋಕಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಪ್ರಿಯಾಂಕಾ ಗಾಂಧಿ ವಾದ್ರಾ ಪರವಾಗಿ ಪ್ರಚಾರ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ವಯನಾಡಿನಲ್ಲಿ ಮಮತಾ ಬ್ಯಾನರ್ಜಿಯಿಂದ ಪ್ರಿಯಾಂಕಾ ಗಾಂಧಿ ಪರ ಪ್ರಚಾರ
ಮಮತಾ ಬ್ಯಾನರ್ಜಿ - ಪ್ರಿಯಾಂಕಾ ಗಾಂಧಿ
Follow us
ಸುಷ್ಮಾ ಚಕ್ರೆ
|

Updated on: Jun 21, 2024 | 9:17 PM

ನವದೆಹಲಿ: ಕಾಂಗ್ರೆಸ್ ಪಕ್ಷದ ಜೊತೆ ಟಿಎಂಸಿ (TMC) ಆಗಾಗ ಮುಸುಕಿನ ಗುದ್ದಾಟ ನಡೆಸುತ್ತಲೇ ಇರುತ್ತದೆ. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ (Lok Sabha Elections 2024) ಕಾಂಗ್ರೆಸ್ ನೇತೃತ್ವದ ಇಂಡಿಯಾ ಬಣದ (INDIA Bloc) ಜೊತೆ ಕೈಜೋಡಿಸಿದ್ದ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆ ಸೇರಿದಂತೆ ಇತರೆ ಚುನಾವಣೆಗಳಲ್ಲಿ ಏಕಾಂಗಿಯಾಗಿ ಸ್ಪರ್ಧೆ ಮಾಡುವ ಹೇಳಿಕೆ ನೀಡಿತ್ತು. ಈ ಮೂಲಕ ಕಾಂಗ್ರೆಸ್ ಜೊತೆಗಿನ ಮೈತ್ರಿ ಲೋಕಸಭಾ ಚುನಾವಣೆಗೆ ಸೀಮಿತ ಎಂದು ಘೋಷಿಸಿತ್ತು. ಇದೀಗ ರಾಹುಲ್ ಗಾಂಧಿಯಿಂದ (Rahul Gandhi) ತೆರವಾಗಿರುವ ವಯನಾಡು ಲೋಕಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಪ್ರಿಯಾಂಕಾ ಗಾಂಧಿ ವಾದ್ರಾ (Priyanka Gandhi) ವಿರುದ್ಧ ಮಮತಾ ಬ್ಯಾನರ್ಜಿ ಪ್ರಚಾರ ಮಾಡಲು ಒಪ್ಪಿದ್ದಾರೆ ಎನ್ನಲಾಗಿದೆ.

ವಯನಾಡಿನಿಂದ ಚುನಾವಣಾ ಕಣಕ್ಕೆ ಧುಮುಕಲಿರುವ ಪ್ರಿಯಾಂಕಾ ಗಾಂಧಿ ಪರವಾಗಿ ಪ್ರಚಾರಕ್ಕೆ ಬರುವಂತೆ ಮಮತಾ ಬ್ಯಾನರ್ಜಿಗೆ ಕಾಂಗ್ರೆಸ್ ಮನವಿ ಮಾಡಿತ್ತು. ಕಾಂಗ್ರೆಸ್‌ನ ಮನವಿಗೆ ದೀದಿ ಒಪ್ಪಿಗೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಹಿರಿಯ ಕಾಂಗ್ರೆಸ್ ನಾಯಕ ಪಿ. ಚಿದಂಬರಂ ಅವರು ಕೋಲ್ಕತ್ತಾದ ರಾಜ್ಯ ಸಚಿವಾಲಯದಲ್ಲಿ ಮಮತಾ ಬ್ಯಾನರ್ಜಿ ಅವರೊಂದಿಗೆ ಸಭೆ ನಡೆಸಿದ ನಂತರ ಈ ಬೆಳವಣಿಗೆ ನಡೆದಿದೆ. ಚಿದಂಬರಂ ಅವರು ಪ್ರಿಯಾಂಕಾ ಗಾಂಧಿಯವರ ರಾಯಭಾರಿಯಾಗಿ ಬಂದಿದ್ದರು ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: Rahul Gandhi: ರಾಯ್​ಬರೇಲಿಯನ್ನು ಆಯ್ಕೆ ಮಾಡಿಕೊಂಡ ರಾಹುಲ್ ಗಾಂಧಿ; ವಯನಾಡಿನಿಂದ ಪ್ರಿಯಾಂಕಾ ಗಾಂಧಿ ಸ್ಪರ್ಧೆ

ಟಿಎಂಸಿ ವರಿಷ್ಠರಾದ ಮಮತಾ ಬ್ಯಾನರ್ಜಿ ಕಾಂಗ್ರೆಸ್ ವಿರುದ್ಧ ಅಸಮಾಧಾನಗೊಂಡಿದ್ದಾರೆ ಮತ್ತು ಕಾಂಗ್ರೆಸ್-ಟಿಎಂಸಿ ಮೈತ್ರಿ ಮಾತುಕತೆ ಸ್ಥಗಿತಕ್ಕೆ ರಾಜ್ಯ ಪಕ್ಷದ ಮುಖ್ಯಸ್ಥ ಅಧೀರ್ ಚೌಧುರಿ ಅವರನ್ನು ವಿಶೇಷವಾಗಿ ದೂಷಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿ TMCಯ ಭಾರೀ ಗೆಲುವಿನ ನಂತರ, ಅಲ್ಲಿ ಅದು 42 ಲೋಕಸಭಾ ಸ್ಥಾನಗಳಲ್ಲಿ 29 ಸ್ಥಾನಗಳನ್ನು ಪಡೆದುಕೊಂಡಿತು.

ಚುನಾವಣಾ ಪೂರ್ವ ಘರ್ಷಣೆಯ ನಂತರ ತೃಣಮೂಲ ಕಾಂಗ್ರೆಸ್ ಮತ್ತು ಇಂಡಿಯಾ ಮೈತ್ರಿಕೂಟದ ನಡುವೆ ಎಲ್ಲವೂ ಚೆನ್ನಾಗಿದೆ ಎಂಬ ಬಲವಾದ ಸಂಕೇತವನ್ನು ರವಾನಿಸಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ವಯನಾಡಿನಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಪರ ಚುನಾವಣಾ ಪ್ರಚಾರಕ್ಕೆ ಸಿದ್ಧರಾಗಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್​ ಫ್ಯಾಮಿಲಿ ಬಿಸಿನೆಸ್; ವಯನಾಡಿನಿಂದ ಪ್ರಿಯಾಂಕಾ ಗಾಂಧಿ ಸ್ಪರ್ಧೆಗೆ ಬಿಜೆಪಿ ಲೇವಡಿ

ಮಮತಾ ಬ್ಯಾನರ್ಜಿ ಅವರು ಪ್ರಿಯಾಂಕಾ ಗಾಂಧಿ ಪರವಾಗಿ ಪ್ರಚಾರ ಮಾಡಲು ಸಿದ್ಧರಿರುವುದು ಮಾತ್ರವಲ್ಲದೆ, ಕಳೆದ ಡಿಸೆಂಬರ್‌ನಲ್ಲಿ ನಡೆದ ಇಂಡಿಯಾ ಮೈತ್ರಿಕೂಟದ ಸಭೆಯಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾರಾಣಸಿಯಿಂದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸ್ಪರ್ಧಿಸಬೇಕು ಎಂದು ಸಲಹೆ ನೀಡಿದ್ದರು ಎಂದು ತೃಣಮೂಲ ಕಾಂಗ್ರೆಸ್ ಮೂಲಗಳು ತಿಳಿಸಿವೆ. ಆದರೆ, ಪ್ರಿಯಾಂಕಾ ಗಾಂಧಿ ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ