Presidential polls: ರಾಷ್ಟ್ರಪತಿ ಚುನಾವಣೆ: ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ವಿರೋಧ ಪಕ್ಷಗಳ ಬಿಸಿ ಬಿಸಿ ಚರ್ಚೆ

ರಾಷ್ಟ್ರಪತಿ ಚುನಾವಣೆ ಸನ್ನಿಹಿತವಾಗುತ್ತಿದ್ದು ಈ ಕುರಿತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಹಾಗೂ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ವಿರೋಧ ಪಕ್ಷಗಳ ಬಿಸಿ ಬಿಸಿ ಚರ್ಚೆ ಇಂದು ನಡೆಯಲಿದೆ.

Presidential polls: ರಾಷ್ಟ್ರಪತಿ ಚುನಾವಣೆ: ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ವಿರೋಧ ಪಕ್ಷಗಳ ಬಿಸಿ ಬಿಸಿ ಚರ್ಚೆ
Mamata Banerjee
Follow us
TV9 Web
| Updated By: ನಯನಾ ರಾಜೀವ್

Updated on:Jun 15, 2022 | 11:14 AM

ರಾಷ್ಟ್ರಪತಿ ಚುನಾವಣೆ( Presidential Election)ಸನ್ನಿಹಿತವಾಗುತ್ತಿದ್ದು ಈ ಕುರಿತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಹಾಗೂ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ವಿರೋಧ ಪಕ್ಷಗಳ ಬಿಸಿ ಬಿಸಿ ಚರ್ಚೆ ಇಂದು ನಡೆಯಲಿದೆ. ಆದರೆ ಲಭ್ಯವಾಗಿರುವ ಮಾಹಿತಿ ಪ್ರಕಾರ ತೆಲಂಗಾಣ ರಾಷ್ಟ್ರ ಸಮಿತಿ(ಟಿಆರ್​ಎಸ್) ತನ್ನ ಪಕ್ಷದ ಯಾವುದೇ ಪ್ರತಿನಿಧಿಯನ್ನು ಕಳುಹಿಸಿಲ್ಲ.

ರಾಮನಾಥ್ ಕೋವಿಂದ್ ಅವರ ಅಧಿಕಾರವಧಿ ಜುಲೈ 24ಕ್ಕೆ ಅಂತ್ಯಗೊಳ್ಳುತ್ತಿದ್ದು, ಅವರ ಮುಂದಿನ ಉತ್ತರಾಧಿಕಾರಿ ಯಾರಾಗುತ್ತಾರೆ ಎಂಬ ಕುತೂಹಲ ಎಲ್ಲರಲ್ಲಿದೆ. ದೆಹಲಿಯಲ್ಲಿ ಮಧ್ಯಾಹ್ನ 3 ಗಂಟೆಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ಪ್ರಾದೇಶಿಕ ಪಕ್ಷಗಳ ಮುಖ್ಯಸ್ಥರ ಸಭೆ ನಡೆಯಲಿದ್ದು 22 ವಿರೋಧ ಪಕ್ಷಗಳನ್ನು ಅವರು ಸಭೆಗೆ ಆಹ್ವಾನಿಸಿದ್ದಾರೆ ಎನ್ನಲಾಗಿದೆ.

ಸಭೆಯಲ್ಲಿ ಡಿಎಂಕೆಯ ಟಿಆರ್ ಬಾಲು, ಶಿವಸೇನೆಯ ಸುಭಾಷ್ ದೇಸಾಯಿ, ಆರ್‌ಎಲ್‌ಡಿಯ ಜಯಂತ್ ಚೌಧರಿ ಮತ್ತು ಮೆಹಬೂಬಾ ಮುಫ್ತಿ ಅವರು ಭಾಗವಹಿಸಲಿದ್ದಾರೆ. ಜಾರ್ಖಂಡ್ ಮುಕ್ತಿ ಮೋರ್ಚಾ ಮುಖ್ಯಸ್ಥ ಮತ್ತು ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಕೂಡ ಭಾಗವಹಿಸಲಿದ್ದಾರೆ.

ಆಡಳಿತ ಪಕ್ಷ ಹಾಗೂ ಪ್ರತಿಪಕ್ಷಗಳೆಲ್ಲವೂ ಒಟ್ಟಾಗಿ ಯಾವ ಅಭ್ಯರ್ಥಿಯನ್ನು ರಾಷ್ಟ್ರಪತಿ ಕಣಕ್ಕೆ ನಿಲ್ಲಿಸಬಹುದು ಎಂಬ ಚರ್ಚೆ ದಟ್ಟವಾಗಿದೆ. ಸಭೆಯಲ್ಲಿ ಭಾಗವಹಿಸಲು ಕರ್ನಾಟಕದಿಂದ ಪ್ರಾದೇಶಿಕ ಪಕ್ಷ ಜೆಡಿಸ್​ನ ನಾಯಕರಾದ ಹೆಚ್ ಡಿ ದೇವೇಗೌಡ ಮತ್ತು ಹೆಚ್ ಡಿ ಕುಮಾರಸ್ವಾಮಿ ಈಗಾಗಲೇ ದೆಹಲಿಗೆ ತೆರಳಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಕೆಲವು ಎಡಪಕ್ಷಗಳು ಮಮತಾ ಸಭೆಗೆ ಗೈರಾಗಲಿವೆ, ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಮತ್ತು ಸಿಪಿಐ ಪ್ರಧಾನ ಕಾರ್ಯದರ್ಶಿ ಡಿ ರಾಜಾ ಅವರು ಉನ್ನತ ನಾಯಕತ್ವ ಸಭೆಗೆ ಹಾಜರಾಗುವುದಿಲ್ಲ ಎಂದು ಹೇಳಲಾಗುತ್ತಿದೆ.

ದೇಶದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:14 am, Wed, 15 June 22

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್