ನವದೆಹಲಿಯಲ್ಲಿ ಇಂದು ನಡೆಯಲಿರುವ ಒಂದು ರಾಷ್ಟ್ರ ಒಂದು ಚುನಾವಣೆ ಕುರಿತು ಸಭೆಯಿಂದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ(Mamata Banerjee) ಹೊರಗುಳಿಯಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ನಾನು ನನ್ನ ನವದೆಹಲಿ ಪ್ರವಾಸವನ್ನು ರದ್ದುಗೊಳಿಸಿದ್ದೇನೆ. ಫೆಬ್ರವರಿ 8 ರಂದು ರಾಜ್ಯ ಬಜೆಟ್ ಅನ್ನು ವಿಧಾನಸಭೆಯಲ್ಲಿ ಮಂಡಿಸಲಾಗುವುದು ಮತ್ತು ಎರಡು ದಿನಗಳು ಮಾತ್ರ ಬಾಕಿ ಉಳಿದಿವೆ. ಈ ಪರಿಸ್ಥಿತಿಯಲ್ಲಿ ನಾನು ಭೇಟಿಯನ್ನು ರದ್ದುಗೊಳಿಸಬೇಕಾಯಿತು ಎಂದು ಮಮತಾ ಬ್ಯಾನರ್ಜಿ ಸುದ್ದಿಗಾರರಿಗೆ ತಿಳಿಸಿದರು.
ಸಮಿತಿಯ ಮುಖ್ಯಸ್ಥ ಮತ್ತು ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಸಭೆಗೆ ಗೈರುಹಾಜರಾಗಿರುವ ಬಗ್ಗೆ ತಿಳಿಸಿರುವುದಾಗಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ತಿಳಿಸಿದ್ದಾರೆ. ಈ ಬಗ್ಗೆ ನಾನು ಈಗಾಗಲೇ ಕೋವಿಂದ್ ಜಿ ಅವರೊಂದಿಗೆ ಮಾತನಾಡಿದ್ದೇನೆ ಎಂದು ಅವರು ಹೇಳಿದರು.
ಅವರ ಅನುಪಸ್ಥಿತಿಯಲ್ಲಿ ಸಂಸದರಾದ ಸುದೀಪ್ ಬಂಡೋಪಾಧ್ಯಾಯ ಮತ್ತು ಕಲ್ಯಾಣ್ ಬ್ಯಾನರ್ಜಿ ಅವರು ಸಭೆಯಲ್ಲಿ ತೃಣಮೂಲ ಕಾಂಗ್ರೆಸ್ ಅನ್ನು ಪ್ರತಿನಿಧಿಸಲಿದ್ದಾರೆ ಎಂದು ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ. ಪಶ್ಚಿಮ ಬಂಗಾಳ ವಿಧಾನಸಭೆಯ ಬಜೆಟ್ ಅಧಿವೇಶನ ಇಂದು ಮುಂಜಾನೆ ಆರಂಭವಾಗಿದ್ದು, ಜನವರಿ 8 ರಂದು (ಗುರುವಾರ) ರಾಜ್ಯ ಬಜೆಟ್ ಮಂಡನೆಯಾಗುವ ಸಾಧ್ಯತೆಯಿದೆ.
ಮತ್ತಷ್ಟು ಓದಿ: ತೃಣಮೂಲ ಸಂಸ್ಥಾಪನಾ ದಿನ; ಜನರ ಹಕ್ಕುಗಳನ್ನು ಕಾಪಾಡುವ ಹೋರಾಟ ಮುಂದುವರಿಸುವೆ: ಮಮತಾ ಬ್ಯಾನರ್ಜಿ
ಪ್ರಸ್ತುತ ಸಾಂವಿಧಾನಿಕ ಚೌಕಟ್ಟನ್ನು ಪರಿಗಣಿಸಿ ಲೋಕಸಭೆ, ರಾಜ್ಯ ವಿಧಾನಸಭೆಗಳು, ಪುರಸಭೆಗಳು ಮತ್ತು ಪಂಚಾಯತ್‌ಗಳಿಗೆ ಏಕಕಾಲದಲ್ಲಿ ಚುನಾವಣೆಗಳನ್ನು ನಡೆಸಲು ಶಿಫಾರಸುಗಳನ್ನು ಪರಿಶೀಲಿಸುವ ಮತ್ತು ಪ್ರಸ್ತಾಪಿಸುವ ಕೆಲಸವನ್ನು ಒನ್ ನೇಷನ್ ಒನ್ ಎಲೆಕ್ಷನ್ಸ್ ಸಮಿತಿಗೆ ವಹಿಸಲಾಗಿದೆ.
ಕಳೆದ ವಾರ, ಉನ್ನತ ಮಟ್ಟದ ಸಮಿತಿಯ ನೇತೃತ್ವ ವಹಿಸಿರುವ ಮಾಜಿ ರಾಷ್ಟ್ರಪತಿ ಕೋವಿಂದ್, ದೇಶದಲ್ಲಿ ಏಕಕಾಲದಲ್ಲಿ ಚುನಾವಣೆ ನಡೆಸುವ ಸಾಧ್ಯತೆಯ ಕುರಿತು ಕೈಗಾರಿಕಾ ಸಂಸ್ಥೆ ಮತ್ತು ಮಾಜಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳೊಂದಿಗೆ ಸಮಾಲೋಚನೆ ನಡೆಸಿದರು.
ಕೋವಿಡ್ ಅವರು ಕಲ್ಕತ್ತಾ ಹೈಕೋರ್ಟ್‌ನ ಮಾಜಿ ಮುಖ್ಯ ನ್ಯಾಯಮೂರ್ತಿ ಪ್ರಕಾಶ್ ಶ್ರೀವಾಸ್ತವ, ಬಾಂಬೆ ಹೈಕೋರ್ಟ್‌ನ ಮಾಜಿ ಮುಖ್ಯ ನ್ಯಾಯಮೂರ್ತಿ ಆರ್‌ಡಿ ಧನುಕಾ ಮತ್ತು ದೆಹಲಿ ಹೈಕೋರ್ಟ್‌ನ ಮಾಜಿ ಮುಖ್ಯ ನ್ಯಾಯಮೂರ್ತಿ ಅಜಿತ್ ಪ್ರಕಾಶ್ ಶಾ ಅವರೊಂದಿಗೆ ಸಮಾಲೋಚನೆ ನಡೆಸಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ