ದೀದಿ ರಾಜಕಾರಣ ಅಪಾಯದ ಮಟ್ಟವನ್ನೂ ಮೀರಿದೆ, ಮೃತದೇಹಗಳನ್ನು ಮುಂದಿಟ್ಟು ಪಾಲಿಟಿಕ್ಸ್​ ಮಾಡೋದು ಅವರ ಹಳೇ ಅಭ್ಯಾಸ: ಪ್ರಧಾನಿ ಮೋದಿ

ಇಂದು ಪಶ್ಚಿಮಬಂಗಾಳದಲ್ಲಿ ಒಂದೆಡೆ 5ನೇ ಹಂತದ ಮತದಾನ ನಡೆಯುತ್ತಿದ್ದರೆ, ಇನ್ನೊಂದೆಡೆ ಪ್ರಧಾನಿ ನರೇಂದ್ರ ಮೋದಿ ಅಸಾನ್ಸೋಲ್​​ನಲ್ಲಿ ಪ್ರಚಾರ ನಡೆಸಿದ್ದಾರೆ. ಈ ವೇಳೆ ಮಮತಾ ಬ್ಯಾನರ್ಜಿ ವಿರುದ್ಧ ಹರಿಹಾಯ್ದ ಅವರು, ಪಶ್ಚಿಮ ಬಂಗಾಳದಲ್ಲಿ ಈ ಬಾರಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಇಲ್ಲಿನ ಜನರ ನಿರೀಕ್ಷೆಗಳಿಗೆ ತಕ್ಕಂತೆ ಕೆಲಸ ಮಾಡಲಾಗುವುದು ಎಂದರು.

ದೀದಿ ರಾಜಕಾರಣ ಅಪಾಯದ ಮಟ್ಟವನ್ನೂ ಮೀರಿದೆ, ಮೃತದೇಹಗಳನ್ನು ಮುಂದಿಟ್ಟು ಪಾಲಿಟಿಕ್ಸ್​ ಮಾಡೋದು ಅವರ ಹಳೇ ಅಭ್ಯಾಸ: ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ
Follow us
Lakshmi Hegde
|

Updated on:Apr 17, 2021 | 3:38 PM

ಕೋಲ್ಕತ್ತ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಪ್ರಧಾನಿ ನರೇಂದ್ರ ಮೋದಿಯವರು ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದಾರೆ. ಪಶ್ಚಿಮ ಬಂಗಾಳಕ್ಕೆ ಬೇಕಿರುವುದು ಡಬಲ್ ಎಂಜಿನ್​ ಸರ್ಕಾರವೇ ಹೊರತು, ಅಭಿವೃದ್ಧಿಯನ್ನು ತಡೆ ಹಿಡಿಯುವ ಸರ್ಕಾರವಲ್ಲ ಎಂದು ಹೇಳಿದ್ದಾರೆ. ಇಂದು ಅಸನ್ಸೋಲ್​​ನಲ್ಲಿ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಈ ಬಾರಿ ಬಿಜೆಪಿ ಪಶ್ಚಿಮ ಬಂಗಾಳದಲ್ಲಿ ಅಧಿಕಾರಕ್ಕೆ ಬಂದರೆ ಇಲ್ಲಿನ ಜನರಿಗೆ ಅಗತ್ಯ ಇರುವ ಎಲ್ಲ ಯೋಜನೆಗಳನ್ನೂ ಜಾರಿಗೊಳಿಸುವುದಾಗಿ ತಿಳಿಸಿದರು.

ಇಂದು ಪಶ್ಚಿಮ ಬಂಗಾಳದಲ್ಲಿ ಒಂದೆಡೆ 5ನೇ ಹಂತದ ಮತದಾನ ನಡೆಯುತ್ತಿದ್ದರೆ, ಇನ್ನೊಂದೆಡೆ ಪ್ರಧಾನಿ ನರೇಂದ್ರ ಮೋದಿ ಅಸಾನ್ಸೋಲ್​​ನಲ್ಲಿ ಪ್ರಚಾರ ನಡೆಸಿದ್ದಾರೆ. ಈ ವೇಳೆ ಮಮತಾ ಬ್ಯಾನರ್ಜಿ ವಿರುದ್ಧ ಹರಿಹಾಯ್ದ ಅವರು, ಪಶ್ಚಿಮ ಬಂಗಾಳದಲ್ಲಿ ಈ ಬಾರಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಇಲ್ಲಿನ ಜನರ ನಿರೀಕ್ಷೆಗಳಿಗೆ ತಕ್ಕಂತೆ ಕೆಲಸ ಮಾಡಲಾಗುವುದು. ಈಗಿನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪಶ್ಚಿಮ ಬಂಗಾಳ ಜನರು ಮತ್ತು ಕೇಂದ್ರಸರ್ಕಾರದ ಅಭಿವೃದ್ಧಿ ಯೋಜನೆಗಳ ನಡುವೆ ಗೋಡೆಯಾಗಿ ನಿಂತಿದ್ದಾರೆ. ಕೇಂದ್ರದಿಂದ ಸಿಗುವ ಅನುಕೂಲಗಳಿಂದ ಪಶ್ಚಿಮ ಬಂಗಾಳದ ಜನರನ್ನು ವಂಚಿತರನ್ನಾಗಿ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಈ ಪ್ರದೇಶಕ್ಕೆ ಭಾರತದ ಕೈಗಾರಿಕಾ ಕೇಂದ್ರವಾಗುವ ಎಲ್ಲ ರೀತಿಯ ಸಾಮರ್ಥ್ಯ ಹಿಂದಿನಿಂದಲೂ ಇದೆ. ಸೈಕಲ್​ನಿಂದ ರೈಲಿನವರೆಗೆ, ಪೇಪರ್​ನಿಂದ ಸ್ಟೀಲ್​, ಅಲ್ಯೂಮಿನಿಯಂನಿಂದ ಗಾಜಿನ ತಯಾರಿಕೆವರೆಗೆ ಎಲ್ಲ ರೀತಿಯ ಕಾರ್ಖಾನೆಗಳೂ ಇಲ್ಲಿದ್ದು, ದೇಶದ ಎಲ್ಲ ಭಾಗಗಳಿಂದಲೂ ಜನರು ಉದ್ಯೋಗ ಅರಸಿ ಇಲ್ಲಿಗೆ ಬರುತ್ತಿದ್ದರು. ಆದರೆ ದೀದಿಯವರಿಂದಾಗಿ ಇಲ್ಲಿದ್ದವರೆಲ್ಲ ಬೇರೆಕಡೆಗೆ ವಲಸೆ ಹೋಗುವಂತಾಗಿದೆ. ಮಾ ಮಾತಿ ಮಾನುಷ್( ತಾಯಿ, ತಾಯ್ನೆಲ, ಜನರು)​ ಎಂದು ಬಾಯಲ್ಲಿ ಹೇಳುವ ಮಮತಾ ಬ್ಯಾನರ್ಜಿ, ಇಲ್ಲಿ ಮಾಫಿಯಾ ರಾಜ್​ ಆಗಿದ್ದಾರೆ ಎಂದು ವ್ಯಂಗ್ಯವಾಡಿದರು.

ಕೇಂದ್ರ ಸರ್ಕಾರದ ಬಹುತೇಕ ಮುಖ್ಯ ಸಭೆಗಳಲ್ಲಿ ಮಮತಾ ಬ್ಯಾನರ್ಜಿಯವರು ಭಾಗವಹಿಸದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ನರೇಂದ್ರ ಮೋದಿ, ಕೊವಿಡ್​-19 ನಿರ್ವಹಣೆ ಸೇರಿ ಹಲವು ವಿಚಾರಗಳ ಬಗ್ಗೆ ಚರ್ಚಿಸಲು ಕೇಂದ್ರ ಸರ್ಕಾರ ಎಲ್ಲ ರಾಜ್ಯ ಸರ್ಕಾರದ ಮುಖ್ಯಮಂತ್ರಿಗಳೊಂದಿಗೆ ಆಗಾಗ ಸಭೆ ನಡೆಸುತ್ತದೆ. ಆದರೆ ದೀದಿ ಯಾವ ಮೀಟಿಂಗ್​​ನಲ್ಲೂ ಪಾಲ್ಗೊಳ್ಳುವುದಿಲ್ಲ. ಇಲ್ಲಿನ ಜನರ ಬೇಕು-ಬೇಡಗಳನ್ನು ಹೇಳುವುದಿಲ್ಲ. ಪ್ರತಿ ಬಾರಿಯೂ ಒಂದಲ್ಲ ಒಂದು ಕಾರಣವನ್ನು ನೀಡುತ್ತಾರೆ ಎಂದು ಹೇಳಿದರು. ಅಷ್ಟೇ ಅಲ್ಲ, ಮಮತಾ ಬ್ಯಾನರ್ಜಿಯವರ ರಾಜಕಾರಣ ಬರೀ ಪ್ರತಿಭಟನೆಗಳಿಗಷ್ಟೇ ಸೀಮಿತವಾಗಿಲ್ಲ. ಪ್ರತೀಕಾರ, ದ್ವೇಷದ ಅಪಾಯಕಾರಿ ಮಟ್ಟವನ್ನೂ ಮೀರಿದೆ ಎಂದು ಹೇಳಿದರು. ಕೂಚ್​ ಬಿಹಾರ್​ನಲ್ಲಿ ಮತದಾನ ವೇಳೆ ಜನರು ಮೃತಪಟ್ಟಿದ್ದನ್ನು ದೀದಿ ತನ್ನ ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ. ಹೀಗೆ, ಮೃತದೇಹಗಳೊಂದಿಗೆ ರಾಜಕಾರಣ ಮಾಡುವುದು ಅವರ ಹಳೇ ಅಭ್ಯಾಸ ಎಂದು ವ್ಯಂಗ್ಯವಾಡಿದರು.

ಇದನ್ನೂ ಓದಿ: Coronavirus News Live Updates: ಕರ್ನಾಟಕದಲ್ಲಿ ವ್ಯಾಪಿಸುತ್ತಿದೆ 2ನೇ ಅಲೆ, ಆಸ್ಪತ್ರೆಗಳಲ್ಲಿ ಬೆಡ್​ಗಳಿಗೆ ಕೊರತೆ

ಕದ್ದ ರಿವಾಲ್ವರ್ ತೋರಿಸಿ ಸಾಲು ಸಾಲು ದರೋಡೆ; ಮಂಗಳೂರು ಪೊಲೀಸರ ಬಲೆಗೆ ಬಿತ್ತು ಕರ್ನಾಟಕದ ಅತಿ ದೊಡ್ಡ ಕಳ್ಳರ ತಂಡ

Published On - 3:37 pm, Sat, 17 April 21

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್