ವೈದ್ಯಕೀಯ ವಿದ್ಯಾರ್ಥಿನಿ ಅತ್ಯಾಚಾರ ಪ್ರಕರಣ, ಸಿಬಿಐಗೆ ಒಪ್ಪಿಸಲಾಗುವುದು ಎಂದ ಮಮತಾ

ಕೋಲ್ಕತ್ತಾದಲ್ಲಿ ನಡೆದ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ, ಕೊಲೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಾತನಾಡಿದ್ದು, ಪೊಲೀಸರಿಗೆ ಬರುವ ಭಾನುವಾರದ ವರೆಗೆ ಗಡುವು ನೀಡಲಾಗಿದ್ದು, ಇಲ್ಲದಿದ್ದರೆ ತನಿಖೆಯನ್ನು ಸಿಬಿಐಗೆ ಒಪ್ಪಿಸಲಾಗುತ್ತದೆ ಎಂದು ಹೇಳಿದ್ದಾರೆ.ಕೋಲ್ಕತ್ತಾ ಪೊಲೀಸ್ ಕಮಿಷನರ್ ಅವರಿಂದ ಘಟನೆಯ ಬಗ್ಗೆ ನನಗೆ ತಿಳಿದಾಗ, ತಕ್ಷಣ ಮತ್ತು ಕ್ಷಿಪ್ರ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ ಎಂದು ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಆಸ್ಪತ್ರೆಯಲ್ಲಿ ನರ್ಸ್‌ಗಳು ಮತ್ತು ಭದ್ರತಾ ಸಿಬ್ಬಂದಿ ಇದ್ದರೂ ಘಟನೆ ಹೇಗೆ ನಡೆಯಿತು ಎಂಬುದು ಅರ್ಥವಾಗುತ್ತಿಲ್ಲ.

ವೈದ್ಯಕೀಯ ವಿದ್ಯಾರ್ಥಿನಿ ಅತ್ಯಾಚಾರ ಪ್ರಕರಣ, ಸಿಬಿಐಗೆ ಒಪ್ಪಿಸಲಾಗುವುದು ಎಂದ ಮಮತಾ
ಮಮತಾ ಬ್ಯಾನರ್ಜಿImage Credit source: Hindustan Times
Follow us
ನಯನಾ ರಾಜೀವ್
|

Updated on: Aug 12, 2024 | 3:04 PM

ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯ ವಿದ್ಯಾರ್ಥಿನಿ, ಕಿರಿಯ ವೈದ್ಯೆ ಮೇಲಿನ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಬಂಗಾಳ ಪೊಲೀಸರಿಗೆ ಗಡುವು ನೀಡಿದ್ದಾರೆ. ಆದಷ್ಟು ಬೇಗ ಆರೋಪಿಗಳನ್ನು ಬಂಧಿಸುವಂತೆ ಪೊಲೀಸರಿಗೆ ಸೂಚಿಸಲಾಗಿದೆ ಎಂದು ಸೋಮವಾರ ತಿಳಿಸಿದರು.

ಭಾನುವಾರದೊಳಗೆ ಪ್ರಕರಣವನ್ನು ಭೇದಿಸಲು ಪೊಲೀಸರಿಗೆ ಸಾಧ್ಯವಾಗದಿದ್ದರೆ, ನಾವು ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸುತ್ತೇವೆ ಎಂದಿದ್ದಾರೆ. ಕೋಲ್ಕತ್ತಾ ಪೊಲೀಸ್ ಕಮಿಷನರ್ ಅವರಿಂದ ಘಟನೆಯ ಬಗ್ಗೆ ನನಗೆ ತಿಳಿದಾಗ, ತಕ್ಷಣ ಮತ್ತು ಕ್ಷಿಪ್ರ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ ಎಂದು ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಆಸ್ಪತ್ರೆಯಲ್ಲಿ ನರ್ಸ್‌ಗಳು ಮತ್ತು ಭದ್ರತಾ ಸಿಬ್ಬಂದಿ ಇದ್ದರೂ ಘಟನೆ ಹೇಗೆ ನಡೆಯಿತು ಎಂಬುದು ಅರ್ಥವಾಗುತ್ತಿಲ್ಲ. ಪ್ರಕರಣ ಸಂಬಂಧ ತ್ವರಿತ ನ್ಯಾಯಾಲಯ ಸ್ಥಾಪಿಸಲಾಗುವುದು ಎಂದರು. ಪೊಲೀಸರು, ಶ್ವಾನ ದಳ, ವಿಧಿವಿಜ್ಞಾನ ವಿಭಾಗ ಹಾಗೂ ಇತರೆ ತಂಡಗಳು ಕಾರ್ಯಾಚರಣೆ ನಡೆಸುತ್ತಿವೆ. ಆರೋಪಿಗಳ ಪತ್ತೆಗೆ ತನಿಖೆ ಆರಂಭಿಸಲಾಗಿದೆ. ಭಾನುವಾರದೊಳಗೆ ಪ್ರಕರಣವನ್ನು ಇತ್ಯರ್ಥಪಡಿಸಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ. ಇದು ಆಗದಿದ್ದರೆ ಈ ಪ್ರಕರಣವನ್ನು ನಾವು ನಮ್ಮ ಕೈಯಲ್ಲಿ ಇಟ್ಟುಕೊಳ್ಳುವುದಿಲ್ಲ. ಅದನ್ನು ಸಿಬಿಐಗೆ ಒಪ್ಪಿಸುತ್ತೇವೆ.

ಇನ್ನು ಆಸ್ಪತ್ರೆಗೆ ಬರುವವರ ಹೆಸರನ್ನು ರಿಜಿಸ್ಟರ್‌ನಲ್ಲಿ ದಾಖಲಿಸಲಾಗುವುದು ಎಂದು ಉತ್ತರ ವಿಭಾಗದ ಡಿಸಿಪಿ ಅಭಿಷೇಕ್ ಗುಪ್ತಾ ಹೇಳಿದ್ದಾರೆ. ಅನಗತ್ಯ ವ್ಯಕ್ತಿಗಳು ಆಸ್ಪತ್ರೆಗೆ ಪ್ರವೇಶಿಸುವುದಿಲ್ಲ. ವೈದ್ಯರು ಹೆಚ್ಚಿನ ಭದ್ರತೆಗೆ ಒತ್ತಾಯಿಸಿದ್ದಾರೆ. ಆಸ್ಪತ್ರೆಯ ಸುತ್ತಲಿನ ಕಾವಲುಗಾರರಿಗೆ ಗುರುತಿನ ಚೀಟಿಗಳನ್ನು ನೀಡಲಾಗಿದೆ, ಅವರು ಕರ್ತವ್ಯದಲ್ಲಿರುವಾಗ ಅವರು ಯಾವಾಗಲೂ ಅದನ್ನು ಧರಿಸಿರಬೇಕು.

ಮತ್ತಷ್ಟು ಓದಿ: ಕೋಲ್ಕತ್ತಾ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಪ್ರಕರಣ, ಪ್ರತಿಭಟನೆ, ಪ್ರಾಂಶುಪಾಲರು ರಾಜೀನಾಮೆ

ಮೃತರು ಮೆಡಿಕಲ್ ಕಾಲೇಜಿನ ಚೆಸ್ಟ್ ಮೆಡಿಸಿನ್ ವಿಭಾಗದ ದ್ವಿತೀಯ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿ ಮತ್ತು ತರಬೇತಿ ವೈದ್ಯರಾಗಿದ್ದರು. ಶುಕ್ರವಾರ ಬೆಳಗ್ಗೆ ವೈದ್ಯಕೀಯ ಕಾಲೇಜಿನ ನಾಲ್ಕನೇ ಮಹಡಿಯಲ್ಲಿರುವ ಸೆಮಿನಾರ್ ಹಾಲ್‌ನಿಂದ ವೈದ್ಯರೊಬ್ಬರ ಅರೆನಗ್ನ ಶವ ಪತ್ತೆಯಾಗಿದ್ದು ಸಂಚಲನ ಮೂಡಿಸಿತ್ತು. ಸ್ಥಳದಿಂದ ಮೃತರ ಮೊಬೈಲ್ ಫೋನ್ ಮತ್ತು ಲ್ಯಾಪ್ ಟಾಪ್ ವಶಪಡಿಸಿಕೊಳ್ಳಲಾಗಿದೆ. ಪ್ರಾಥಮಿಕ ಮರಣೋತ್ತರ ಪರೀಕ್ಷೆ ವರದಿಯಲ್ಲಿ ಮಹಿಳಾ ವೈದ್ಯೆಯ ಮೇಲೆ ಅತ್ಯಾಚಾರ ನಡೆದಿರುವುದು ಬೆಳಕಿಗೆ ಬಂದಿದೆ.

ಮೃತ ಮಹಿಳಾ ವೈದ್ಯೆಯ ಬಾಯಿ ಮತ್ತು ಎರಡೂ ಕಣ್ಣುಗಳ ಮೇಲೆ ಗಾಯಗಳಾಗಿವೆ ಎಂದು ಪ್ರಾಥಮಿಕ ಮರಣೋತ್ತರ ಪರೀಕ್ಷೆಯ ವರದಿ ಹೇಳುತ್ತದೆ. ಖಾಸಗಿ ಭಾಗಗಳಲ್ಲಿ ರಕ್ತದ ಗುರುತುಗಳು ಮತ್ತು ಮುಖದ ಮೇಲೆ ಉಗುರು ಗುರುತುಗಳು ಕಂಡುಬಂದಿವೆ.

ತುಟಿಗಳು, ಕುತ್ತಿಗೆ, ಹೊಟ್ಟೆ, ಎಡ ಪಾದದ ಮತ್ತು ಬಲಗೈ ಬೆರಳಿನ ಮೇಲೆ ಗಾಯದ ಗುರುತುಗಳಿವೆ. ಮಹಿಳಾ ವೈದ್ಯೆಯ ಹತ್ಯೆಯ ನಂತರ ವೈದ್ಯಕೀಯ ಕಾಲೇಜಿನ ವೈದ್ಯರು ಮತ್ತು ವಿದ್ಯಾರ್ಥಿಗಳು ನಿರಂತರವಾಗಿ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್