AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈಲಿನಲ್ಲಿ ಮಹಿಳಾ ಪೊಲೀಸ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ ವ್ಯಕ್ತಿ ಎನ್​ಕೌಂಟರ್​ನಲ್ಲಿ ಸಾವು

ರೈಲಿನಲ್ಲಿ ಮಹಿಳಾ ಪೊಲೀಸ್​ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ ವ್ಯಕ್ತಿ ಎನ್​ಕೌಂಟರ್​ನಲ್ಲಿ ಸಾವನ್ನಪ್ಪಿದ್ದಾನೆ. ಕಳೆದ ತಿಂಗಳು ರೈಲ್ವೆ ಕಂಪಾರ್ಟ್​ಮೆಂಟ್​ನಲ್ಲಿ ವ್ಯಕ್ತಿಯೊಬ್ಬ ಮಹಿಳಾ ಪೊಲೀಸ್ ಅಧಿಕಾರಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ ಆರೋಪಿ ಅಯೋಧ್ಯೆಯಲ್ಲಿ ಪೊಲೀಸ್​ ಎನ್​ಕೌಂಟರ್​ನಲ್ಲಿ ಸಾವನ್ನಪ್ಪಿದ್ದಾನೆ. ಎನ್​ಕೌಂಟರ್​ ವೇಳೆ ಇತರೆ ಇಬ್ಬರು ವ್ಯಕ್ತಿಗಳಿಗೆ ಗುಂಡು ತಗುಲಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಉತ್ತರ ಪ್ರದೇಶ ಪೊಲೀಸ್ ಮತ್ತು ಲಕ್ನೋ ವಿಶೇಷ ಕಾರ್ಯಪಡೆ (ಎಸ್‌ಟಿಎಫ್) ಜಂಟಿ ತಂಡವು ಶುಕ್ರವಾರ ಇನಾಯತ್ ನಗರ ಪ್ರದೇಶದಲ್ಲಿ ಎನ್‌ಕೌಂಟರ್ ಆರಂಭಿಸಿತ್ತು.

ರೈಲಿನಲ್ಲಿ ಮಹಿಳಾ ಪೊಲೀಸ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ ವ್ಯಕ್ತಿ ಎನ್​ಕೌಂಟರ್​ನಲ್ಲಿ ಸಾವು
ಪೊಲೀಸ್Image Credit source: NDTV
Follow us
ನಯನಾ ರಾಜೀವ್
|

Updated on: Sep 22, 2023 | 10:42 AM

ರೈಲಿನಲ್ಲಿ ಮಹಿಳಾ ಪೊಲೀಸ್​ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ ವ್ಯಕ್ತಿ ಎನ್​ಕೌಂಟರ್​ನಲ್ಲಿ ಸಾವನ್ನಪ್ಪಿದ್ದಾನೆ. ಕಳೆದ ತಿಂಗಳು ರೈಲ್ವೆ ಕಂಪಾರ್ಟ್​ಮೆಂಟ್​ನಲ್ಲಿ ವ್ಯಕ್ತಿಯೊಬ್ಬ ಮಹಿಳಾ ಪೊಲೀಸ್ ಅಧಿಕಾರಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ ಆರೋಪಿ ಅಯೋಧ್ಯೆಯಲ್ಲಿ ಪೊಲೀಸ್​ ಎನ್​ಕೌಂಟರ್​ನಲ್ಲಿ ಸಾವನ್ನಪ್ಪಿದ್ದಾನೆ. ಎನ್​ಕೌಂಟರ್​ ವೇಳೆ ಇತರೆ ಇಬ್ಬರು ವ್ಯಕ್ತಿಗಳಿಗೆ ಗುಂಡು ತಗುಲಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಉತ್ತರ ಪ್ರದೇಶ ಪೊಲೀಸ್ ಮತ್ತು ಲಕ್ನೋ ವಿಶೇಷ ಕಾರ್ಯಪಡೆ (ಎಸ್‌ಟಿಎಫ್) ಜಂಟಿ ತಂಡವು ಶುಕ್ರವಾರ ಇನಾಯತ್ ನಗರ ಪ್ರದೇಶದಲ್ಲಿ ಎನ್‌ಕೌಂಟರ್ ಆರಂಭಿಸಿತ್ತು.

ಎನ್‌ಕೌಂಟರ್ ವೇಳೆ ಆರೋಪಿ ಅನೀಶ್ ಎಂಬಾತನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದ್ದು. ಆಜಾದ್ ಖಾನ್ ಮತ್ತು ವಿಶಂಭರ್ ದಯಾಳ್ ಎಂದು ಗುರುತಿಸಲಾದ ಇತರ ಇಬ್ಬರು ಗಾಯಗೊಂಡವರಲ್ಲಿ  ಒಬ್ಬರು ಆಗಸ್ಟ್ 30 ರಂದು ಮಹಿಳಾ ಪೋಲೀಸ್ ಮೇಲಿನ ದಾಳಿಯೊಂದಿಗೆ ಸಂಪರ್ಕ ಹೊಂದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಕಲಂದರ್ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿ ರತನ್ ಶರ್ಮಾ ಕೂಡ ಎನ್‌ಕೌಂಟರ್‌ನಲ್ಲಿ ಗಾಯಗೊಂಡಿದ್ದಾರೆ. ಆಗಸ್ಟ್ 30 ರಂದು ಅಯೋಧ್ಯಾ ನಿಲ್ದಾಣದ ಸರಯು ಎಕ್ಸ್‌ಪ್ರೆಸ್‌ನ ರೈಲು ಕಂಪಾರ್ಟ್‌ಮೆಂಟ್‌ನಲ್ಲಿ ಮಹಿಳಾ ಕಾನ್‌ಸ್ಟೆಬಲ್ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದನ್ನು ರೈಲ್ವೆ ಪೊಲೀಸ್ ಅಧಿಕಾರಿಗಳು ಪತ್ತೆಮಾಡಿದ್ದರು.

ಅವರ ಮುಖಕ್ಕೆ ಹರಿತವಾದ ಆಯುಧಗಳಿಂದ ದಾಳಿ ನಡೆಸಲಾಗಿತ್ತು ಮತ್ತು ಅವರ ತಲೆಯಲ್ಲಿ ಎರಡು ಕಡೆ ಮುರಿತ ಉಂಟಾಗಿತ್ತು. ಅವರನ್ನು ಲಕ್ನೋದ ಕೆಜಿಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ನಂತರ ಅವರ ಆರೋಗ್ಯ ಸ್ಥಿರವಾಗಿದೆ ಎಂದು ವರದಿಯಾಗಿದೆ. ಪೊಲೀಸ್​ ಅಧಿಕಾರಿಯ ಗುರುತು ಇನ್ನೂ ಪತ್ತೆಯಾಗಿಲ್ಲ.

ಮತ್ತಷ್ಟು ಓದಿ: ಹರ್ಯಾಣದಲ್ಲಿ ಕುಟುಂಬ ಸದಸ್ಯರ ಎದುರೇ 3 ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ

ರೈಲಿನ ಸೀಟಿನ ವಿಚಾರವಾಗಿ ಮಹಿಳಾ ಪೋಲೀಸರು ಆರೋಪಿಯೊಂದಿಗೆ ಜಗಳವಾಡಿದ್ದರು ಎಂದು ಈ ಬಗ್ಗೆ ತನಿಖೆ ನಡೆಸಿದ ಅಧಿಕಾರಿಗಳು ತಿಳಿಸಿದ್ದಾರೆ. ಆರೋಪಿಗಳು ಆಕೆಯ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದ್ದಾರೆ. ಅವರು ಅಯೋಧ್ಯೆ ನಿಲ್ದಾಣದಲ್ಲಿ ರೈಲನ್ನು ಬಿಟ್ಟು ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾನ್‌ಸ್ಟೆಬಲ್ ಸಹೋದರನ ಲಿಖಿತ ದೂರಿನ ಮೇರೆಗೆ ಐಪಿಸಿಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಮತ್ತು ಆರೋಪಿಯನ್ನು ಬಂಧಿಸಲು ತನಿಖೆಯನ್ನು ಪ್ರಾರಂಭಿಸಲಾಗಿದೆ.

ಕೆಲವು ದಿನಗಳ ನಂತರ, ಸೆಪ್ಟೆಂಬರ್ 4 ರಂದು, ಅಲಹಾಬಾದ್ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಪ್ರಿಟಿಂಕರ್ ದಿವಾಕರ್ ಅವರು ದಾಳಿಯ ಬಗ್ಗೆ ವಾಟ್ಸಾಪ್ ಸಂದೇಶವನ್ನು ಸ್ವೀಕರಿಸಿದ ನಂತರ ಸ್ವಯಂಪ್ರೇರಿತವಾಗಿ ಕ್ರಮ ಕೈಗೊಂಡರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ