AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾವಿರ ರೂಪಾಯಿಗೆ ಹೆಂಡತಿಯನ್ನು ಸ್ನೇಹಿತರಿಗೆ ಮಾರಿದ ವ್ಯಕ್ತಿ, ಆಮೇಲೆ ನಡೀಬಾರದ್ದು ನಡೆದೇ ಹೋಯ್ತು

ಸಾವಿರ ರೂಪಾಯಿ ಪಡೆದು ಪತ್ನಿಯನ್ನು ತನ್ನ ಸ್ನೇಹಿತರ ಬಳಿ ಕಳುಹಿಸಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಪತಿಯ ಸ್ನೇಹಿತರಿಬ್ಬರು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ವ್ಯಕ್ತಿಯೊಬ್ಬ ತನ್ನ ಹೆಂಡತಿಯನ್ನು ಒಂದು ಸಾವಿರ ರೂಪಾಯಿಗೆ ಬದಲಾಗಿ ತನ್ನ ಸ್ನೇಹಿತರಿಗೆ ಒಪ್ಪಿಸಿದ್ದಾನೆ ಎಂದು ಆರೋಪಿಸಲಾಗಿದೆ.ಇಬ್ಬರು ಸ್ನೇಹಿತರು ಆ ವ್ಯಕ್ತಿಯ ಪತ್ನಿಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ಘಟನೆಯ ನಂತರ, ಮಹಿಳೆ ಪೊಲೀಸರಿಗೆ ಘಟನೆಯ ಬಗ್ಗೆ ದೂರು ನೀಡಿದ್ದಾರೆ.

ಸಾವಿರ ರೂಪಾಯಿಗೆ ಹೆಂಡತಿಯನ್ನು ಸ್ನೇಹಿತರಿಗೆ ಮಾರಿದ ವ್ಯಕ್ತಿ, ಆಮೇಲೆ ನಡೀಬಾರದ್ದು ನಡೆದೇ ಹೋಯ್ತು
ಕ್ರೈಂ
ನಯನಾ ರಾಜೀವ್
|

Updated on:Feb 10, 2026 | 9:22 AM

Share

ಬದೌನ್, ಫೆಬ್ರವರಿ 10: ಸಾವಿರ ರೂಪಾಯಿಗಾಗಿ ವ್ಯಕ್ತಿಯೊಬ್ಬ ತನ್ನ ಹೆಂಡತಿ(Wife)ಯನ್ನೇ ಸ್ನೇಹಿತರಿಗೆ ಮಾರಿರುವ ಆಘಾತಕಾರಿ ಘಟನೆಯೊಂದು ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಡೆದಿದೆ. ವ್ಯಕ್ತಿಯೊಬ್ಬ ತನ್ನ ಹೆಂಡತಿಯನ್ನು ಒಂದು ಸಾವಿರ ರೂಪಾಯಿಗೆ ಬದಲಾಗಿ ತನ್ನ ಸ್ನೇಹಿತರಿಗೆ ಒಪ್ಪಿಸಿದ್ದಾನೆ ಎಂದು ಆರೋಪಿಸಲಾಗಿದೆ.ಇಬ್ಬರು ಸ್ನೇಹಿತರು ಆ ವ್ಯಕ್ತಿಯ ಪತ್ನಿಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ಘಟನೆಯ ನಂತರ, ಮಹಿಳೆ ಪೊಲೀಸರಿಗೆ ಘಟನೆಯ ಬಗ್ಗೆ ದೂರು ನೀಡಿದ್ದಾರೆ.

ಪೊಲೀಸರು ಇಬ್ಬರು ಸ್ನೇಹಿತರು ಮತ್ತು ಮಹಿಳೆಯ ಪತಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರು ಮಹಿಳೆಯ ಪತಿಯ ಇಬ್ಬರು ಸ್ನೇಹಿತರನ್ನು ಬಂಧಿಸಿದ್ದಾರೆ. ಮಹಿಳೆಯ ಪತಿಗಾಗಿ ಹುಡುಕಾಟ ನಡೆಯುತ್ತಿದೆ.ಬದೌನ್ ಜಿಲ್ಲೆಯ ಫೈಜ್‌ಗಂಜ್ ಬೆಹ್ತಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಇಲ್ಲಿ ಮಹಿಳೆಯೊಬ್ಬರ ಮೇಲೆ ಆಕೆಯ ಪತಿಯ ಸ್ನೇಹಿತರೇ ಅತ್ಯಾಚಾರವೆಸಗಿದ್ದಾರೆ. ಆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಭಾನುವಾರ ಸಂಜೆ ಗ್ಯಾಸ್ ಏಜೆನ್ಸಿಗೆ ಹೋಗುತ್ತಿದ್ದಾಗ, ತನ್ನ ಪತಿ ಬಾಲ್ ಕಿಶನ್ ಮತ್ತು ಪಪ್ಪು ಎಂಬ ಯುವಕರಿಂದ ಒಂದು ಸಾವಿರ ರೂಪಾಯಿಗಳನ್ನು ತೆಗೆದುಕೊಂಡು ತನ್ನನ್ನು ಅವರೊಂದಿಗೆ ಕಳುಹಿಸಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾರೆ.

ಮತ್ತಷ್ಟು ಓದಿ: ಕೌಟುಂಬಿಕ ನ್ಯಾಯಾಲಯದ ಆವರಣದಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ

ಪೊಲೀಸರ ಪ್ರಕಾರ, ಮಹಿಳೆ ತನ್ನ ಗಂಡನ ಸ್ನೇಹಿತರೊಂದಿಗೆ ಹಿಂದಿರುಗುತ್ತಿದ್ದಾಗ, ಇಬ್ಬರೂ ತನ್ನನ್ನು ತೋಟಕ್ಕೆ ಎಳೆದೊಯ್ದು ಅತ್ಯಾಚಾರ ಮಾಡಿದ್ದಾರೆ. ಘಟನೆ ನಂತರ ಮಹಿಳೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಅದರ ಆಧಾರದ ಮೇಲೆ ಬಾಲ್ ಕಿಶನ್, ಪಪ್ಪು ಮತ್ತು ಮಹಿಳೆಯ ಪತಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಪೊಲೀಸರು ಆರೋಪಿ ಬಾಲ್​ಕಿಶನ್ ಮತ್ತು ಪಪ್ಪುವನ್ನು ಬಂಧಿಸಿದ್ದಾರೆ, ಮಹಿಳೆಯ ಪತಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ, ಸೋಮವಾರ ಪೊಲೀಸರು ಮಹಿಳೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:21 am, Tue, 10 February 26

Follow Us
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್