ಮಾಟ-ಮಂತ್ರ ಮಾಡಿ ಯುವತಿಯ ಸಾಯಿಸಿದ್ರು ಅಂತಾ ಇಬ್ಬರ ತಲೆ ಕಡಿದು, ಸುಟ್ಟು ಹಾಕಿಬಿಟ್ರು

ಗುವಾಹಾಟಿ: ಇಬ್ಬರು ವ್ಯಕ್ತಿಗಳು ಮಾಟ-ಮಂತ್ರ ಮಾಡಿ ಯುವತಿಯನ್ನು ಸಾಯಿಸಿದ್ದಾರೆ ಎಂದು ಆರೋಪಿಸಿ, ಗ್ರಾಮಸ್ಥರು ಆ ಇಬ್ಬರೂ ವ್ಯಕ್ತಿಗಳನ್ನು ಬರ್ಬರವಾಗಿ ಸಾಯಿಸಿದ್ದಾರೆ. 50 ವರ್ಷದ ಮಹಿಳೆ ಮತ್ತು 28 ವರ್ಷದ ಯುವಕನ ತಲೆ ಕಡಿದು, ಅವರ ಮೃತದೇಹವನ್ನು ಸುಟ್ಟು ಹಾಕಿರುವ ಘಟನೆ ಅಸ್ಸಾಂನ ಕರ್ಬಿ ಆಂಗ್ಲೋಂಗ್​ನಲ್ಲಿ ನಡೆದಿದೆ. ಶುಕ್ರವಾರ ನಡೆದಿರುವ ಘಟನೆಗೆ ಸಂಬಂಧಿಸಿದಂತೆ ಪೊಲೀಸರು 9 ಜನರನ್ನು ಬಂಧಿಸಿದ್ದಾರೆ. ಯುವಕ ಮತ್ತು ಮಹಿಳೆಯಿಬ್ಬರು ಹಲವು ದಿನಗಳಿಂದ ಮಾಟ-ಮಂತ್ರದಲ್ಲಿ ತೊಡಗಿದ್ದರು. ಶುಕ್ರವಾರದಂದು ಯುವತಿಯೊಬ್ಬಳ ಮೇಲೆ ಮಾಟ-ಮಂತ್ರದ ಪ್ರಯೋಗ ಮಾಡಿದ್ದರು. ಆದರೆ, […]

ಮಾಟ-ಮಂತ್ರ ಮಾಡಿ ಯುವತಿಯ ಸಾಯಿಸಿದ್ರು ಅಂತಾ ಇಬ್ಬರ ತಲೆ ಕಡಿದು, ಸುಟ್ಟು ಹಾಕಿಬಿಟ್ರು
Follow us
KUSHAL V
| Updated By: ಸಾಧು ಶ್ರೀನಾಥ್​

Updated on:Oct 03, 2020 | 2:06 PM

ಗುವಾಹಾಟಿ: ಇಬ್ಬರು ವ್ಯಕ್ತಿಗಳು ಮಾಟ-ಮಂತ್ರ ಮಾಡಿ ಯುವತಿಯನ್ನು ಸಾಯಿಸಿದ್ದಾರೆ ಎಂದು ಆರೋಪಿಸಿ, ಗ್ರಾಮಸ್ಥರು ಆ ಇಬ್ಬರೂ ವ್ಯಕ್ತಿಗಳನ್ನು ಬರ್ಬರವಾಗಿ ಸಾಯಿಸಿದ್ದಾರೆ. 50 ವರ್ಷದ ಮಹಿಳೆ ಮತ್ತು 28 ವರ್ಷದ ಯುವಕನ ತಲೆ ಕಡಿದು, ಅವರ ಮೃತದೇಹವನ್ನು ಸುಟ್ಟು ಹಾಕಿರುವ ಘಟನೆ ಅಸ್ಸಾಂನ ಕರ್ಬಿ ಆಂಗ್ಲೋಂಗ್​ನಲ್ಲಿ ನಡೆದಿದೆ.

ಶುಕ್ರವಾರ ನಡೆದಿರುವ ಘಟನೆಗೆ ಸಂಬಂಧಿಸಿದಂತೆ ಪೊಲೀಸರು 9 ಜನರನ್ನು ಬಂಧಿಸಿದ್ದಾರೆ. ಯುವಕ ಮತ್ತು ಮಹಿಳೆಯಿಬ್ಬರು ಹಲವು ದಿನಗಳಿಂದ ಮಾಟ-ಮಂತ್ರದಲ್ಲಿ ತೊಡಗಿದ್ದರು. ಶುಕ್ರವಾರದಂದು ಯುವತಿಯೊಬ್ಬಳ ಮೇಲೆ ಮಾಟ-ಮಂತ್ರದ ಪ್ರಯೋಗ ಮಾಡಿದ್ದರು. ಆದರೆ, ಆ ಯುವತಿ ಸಾವನ್ನಪ್ಪಿದ್ದಳು ಎಂದು ತಿಳಿದುಬಂದಿದೆ.

ಇದರಿಂದ ಸಿಟ್ಟಿಗೆದ್ದ ಸ್ಥಳೀಯರು ಅರೋಪಿಗಳಿಬ್ಬರ ತಲೆ ಕಡಿದು, ಕೊಲೆಗೈದಿದ್ದಾರೆ. ಬಳಿಕ ಅವರ ಮೃತದೇಹವನ್ನ ಸುಟ್ಟು ಹಾಕಿದ್ದಾರೆ ಎಂದು ಹೇಳಲಾಗಿದೆ. ಇನ್ನು ಘಟನೆಯಲ್ಲಿ ಭಾಗಿಯಾಗಿದ್ದ ಮತ್ತಷ್ಟು ಆರೋಪಿಗಳಿಗಾಗಿ ಪೊಲೀಸರು ಶೋಧಕಾರ್ಯ ನಡೆಸುತ್ತಿದ್ದಾರೆ.

Published On - 2:05 pm, Sat, 3 October 20

ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ