ಅಕ್ರಮ ಸಂಬಂಧ ಇಟ್ಟುಕೊಂಡಿದ್ದ ವಿವಾಹಿತ ಗಂಡು-ಹೆಣ್ಣಿನ ಬೆತ್ತಲೆ ಮೆರವಣಿಗೆ; ಆರೋಪಿಯ ಹೆಂಡತಿ ಬಂಧನ

ಜೂನ್ 11ರಂದು ಉರಿಂದಬೇಡ ಪೊಲೀಸ್ ಠಾಣಾ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ವಿವಾಹಿತ ಪುರುಷನ ಪತ್ನಿ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ.

ಅಕ್ರಮ ಸಂಬಂಧ ಇಟ್ಟುಕೊಂಡಿದ್ದ ವಿವಾಹಿತ ಗಂಡು-ಹೆಣ್ಣಿನ ಬೆತ್ತಲೆ ಮೆರವಣಿಗೆ; ಆರೋಪಿಯ ಹೆಂಡತಿ ಬಂಧನ
ಉತ್ತರ ಪ್ರದೇಶದಲ್ಲಿ ಬೆತ್ತಲೆ ಮೆರವಣಿಗೆImage Credit source: NDTV
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Jun 14, 2022 | 8:03 PM

ರಾಯ್‌ಪುರ: ತನ್ನ ಗಂಡ ಬೇರೊಬ್ಬಳೊಂದಿಗೆ ಅಕ್ರಮ ಸಂಬಂಧ (Extra Marital Affair) ಇಟ್ಟುಕೊಂಡಿದ್ದ ಕಾರಣಕ್ಕೆ ಆತನನ್ನು ಮತ್ತು ಆತನ ಪ್ರೇಯಸಿಯನ್ನು ವಿವಸ್ತ್ರಗೊಳಿಸಿ ಹೆಂಡತಿಯೇ ಮೆರವಣಿಗೆ ಮಾಡಿಸಿದ್ದಾಳೆ. ಛತ್ತೀಸ್‌ಗಢದ ಕೊಂಡಗಾಂವ್ ಜಿಲ್ಲೆಯಲ್ಲಿ ವಿವಾಹಿತ ಪುರುಷ ಮತ್ತು ಆತನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಮಹಿಳೆಯನ್ನು ಬೆತ್ತಲೆಗೊಳಿಸಿ, ಮೆರವಣಿಗೆ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜೂನ್ 11ರಂದು ಉರಿಂದಬೇಡ ಪೊಲೀಸ್ ಠಾಣಾ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ವಿವಾಹಿತ ಪುರುಷನ ಪತ್ನಿ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಘಟನೆ ಬೆಳಕಿಗೆ ಬಂದ ನಂತರ ತನಿಖೆಗಾಗಿ ಪೊಲೀಸ್ ತಂಡವನ್ನು ಗ್ರಾಮಕ್ಕೆ ಕಳುಹಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Crime News: ಅಕ್ರಮ ಸಂಬಂಧದ ಶಂಕೆ; ಹೆಂಡತಿಯ ಗುಪ್ತಾಂಗಕ್ಕೆ ಹೊಲಿಗೆ ಹಾಕಿ ಮುಚ್ಚಿದ ಪತಿರಾಯ!

ವಿವಾಹಿತ ಪುರುಷನ ಹೆಂಡತಿ ತನ್ನ ಗಂಡ ಇನ್ನೊಬ್ಬ ಮಹಿಳೆಯೊಂದಿಗೆ ಇರುವುದನ್ನು ನೋಡಿದ್ದಳು. ಇದರಿಂದ ಕೋಪಗೊಂಡ ಆಕೆ ತನ್ನ ಸಂಬಂಧಿಕರು ಸೇರಿದಂತೆ ಕೆಲವು ಜನರನ್ನು ಕರೆದಳು. ನಂತರ ಎಲ್ಲರೂ ಸೇರಿ ಆ ಇಬ್ಬರನ್ನೂ ಬೆತ್ತಲೆಗೊಳಿಸಿ, ಊರವರ ಮುಂದೆ ಮೆರವಣಿಗೆ ನಡೆಸಿದ್ದಾರೆ ಎಂದು ಅಧಿಕಾರಿ ಹೇಳಿದ್ದಾರೆ.

ಸಂತ್ರಸ್ತರ ಹೇಳಿಕೆಗಳ ಆಧಾರದ ಮೇಲೆ, ಉರಿಂದಬೇಡ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 354 (ಮಹಿಳೆಗೆ ಆಕೆಯ ನಮ್ರತೆಗೆ ದೌರ್ಜನ್ಯ ಅಥವಾ ಕ್ರಿಮಿನಲ್ ಬಲ) ಮತ್ತು ಭಾರತೀಯ ದಂಡ ಸಂಹಿತೆಯ ಇತರ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅಕ್ರಮ ಸಂಬಂಧ ಇಟ್ಟುಕೊಂಡಿದ್ದ ಪುರುಷನ ಹೆಂಡತಿ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ. ಈ ಪ್ರಕರಣದ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ