ಹರ್ಯಾಣ: ಸೂಟ್​ಕೇಸ್​ನಲ್ಲಿ ಕಾಂಗ್ರೆಸ್​ ಕಾರ್ಯಕರ್ತೆಯ ಶವ ಪತ್ತೆ ಪ್ರಕರಣ, ಆರೋಪಿಯ ಬಂಧನ

ಇತ್ತೇಚೆಗಷ್ಟೇ ಹರ್ಯಾಣದಲ್ಲಿ ಕಾಂಗ್ರೆಸ್ ಕಾರ್ಯಕರ್ತೆಯ ಶವ ಪತ್ತೆಯಾಗಿತ್ತು, ಈ ಪ್ರಕರಣದಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಪುರಸಭೆ ಚುನಾವಣೆಗೆ ಒಂದು ದಿನ ಮೊದಲು ಸಂಪ್ಲಾ ಬಸ್ ನಿಲ್ದಾಣದ ಬಳಿ ಓಡಾಡುತ್ತಿರುವವರ ಕಣ್ಣಿಗೆ ಸೂಟ್​ಕೇಸ್ ಬಿದ್ದಿತ್ತು. 22 ವರ್ಷದ ನರ್ವಾಲ್ ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸಿದ್ದರು ಮತ್ತು ಅವರ ಸಾವಿನ ಕುರಿತು ಉನ್ನತ ಮಟ್ಟದ ತನಿಖೆಗೆ ಕಾಂಗ್ರೆಸ್ ಒತ್ತಾಯಿಸಿದೆ.

ಹರ್ಯಾಣ: ಸೂಟ್​ಕೇಸ್​ನಲ್ಲಿ ಕಾಂಗ್ರೆಸ್​ ಕಾರ್ಯಕರ್ತೆಯ ಶವ ಪತ್ತೆ ಪ್ರಕರಣ, ಆರೋಪಿಯ ಬಂಧನ
ಹಿಮಾನಿ
Image Credit source: India Today

Updated on: Mar 03, 2025 | 8:06 AM

ಹರ್ಯಾಣ, ಮಾರ್ಚ್​ 03: ಇತ್ತೇಚೆಗಷ್ಟೇ ಹರ್ಯಾಣದಲ್ಲಿ ಕಾಂಗ್ರೆಸ್ ಕಾರ್ಯಕರ್ತೆಯ ಶವ ಪತ್ತೆಯಾಗಿತ್ತು, ಈ ಪ್ರಕರಣದಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಪುರಸಭೆ ಚುನಾವಣೆಗೆ ಒಂದು ದಿನ ಮೊದಲು ಸಂಪ್ಲಾ ಬಸ್ ನಿಲ್ದಾಣದ ಬಳಿ ಓಡಾಡುತ್ತಿರುವವರ ಕಣ್ಣಿಗೆ ಸೂಟ್​ಕೇಸ್ ಬಿದ್ದಿತ್ತು. 22 ವರ್ಷದ ಹಿಮಾನಿ ನರ್ವಾಲ್ ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸಿದ್ದರು ಮತ್ತು ಅವರ ಸಾವಿನ ಕುರಿತು ಉನ್ನತ ಮಟ್ಟದ ತನಿಖೆಗೆ ಕಾಂಗ್ರೆಸ್ ಒತ್ತಾಯಿಸಿದೆ.

ಹಿಮಾನಿಯ ತಾಯಿ ಸವಿತಾ ತಮ್ಮ ಮಗಳ ಸಾವಿಗೆ ಸಹ ಕಾಂಗ್ರೆಸ್ ಕಾರ್ಯಕರ್ತರೇ ಕಾರಣ ಎಂದು ಆರೋಪಿಸಿದ್ದಾರೆ. ಪಕ್ಷದ ಅನೇಕ ಜನರು ಅವರ ಏರುತ್ತಿರುವ ರಾಜಕೀಯ ಜೀವನ ಮತ್ತು ರಾಹುಲ್ ಗಾಂಧಿ ಸೇರಿದಂತೆ ಹಿರಿಯ ನಾಯಕರೊಂದಿಗಿನ ಸಾಮೀಪ್ಯದಿಂದ ಬೆದರಿಕೆಗೆ ಒಳಗಾಗಿದ್ದಾರೆ ಎಂದು ಹೇಳಿದ್ದಾರೆ.

ನನ್ನ ಮಗಳು ಕಾಂಗ್ರೆಸ್‌ಗಾಗಿ ಬಹಳಷ್ಟು ತ್ಯಾಗ ಮಾಡಿದ್ದಳು ಮತ್ತು ಪಕ್ಷದ ಸದಸ್ಯರು ನಮ್ಮ ಮನೆಗೆ ಭೇಟಿ ನೀಡುತ್ತಿದ್ದರು. ಹಿಮಾನಿಯ ಏರುತ್ತಿರುವ ರಾಜಕೀಯ ಜೀವನದಿಂದ ಪಕ್ಷದ ಕೆಲವು ಜನರು ಬೆದರಿಕೆಗೆ ಒಳಗಾಗಿರಬಹುದು, ಆದ್ದರಿಂದ ಅವರು ಕೊಲೆಯಲ್ಲಿ ಭಾಗಿಯಾಗಿರಬಹುದು ಎಂದು ಸವಿತಾ ಇಂಡಿಯಾ ಟುಡೇಗೆ ತಿಳಿಸಿದ್ದಾರೆ.

ಮತ್ತಷ್ಟು ಓದಿ: ಕೈಗಳಲ್ಲಿ ಮೆಹಂದಿ, ಕುತ್ತಿಗೆ ಸುತ್ತ ನೀಲಿ ಗುರುತು; ಸೂಟ್‌ಕೇಸ್‌ನಲ್ಲಿ ಕಾಂಗ್ರೆಸ್ ಕಾರ್ಯಕರ್ತೆಯ ಶವ ಪತ್ತೆ

ಹರ್ಯಾಣ ಕಾಂಗ್ರೆಸ್ ಅಧ್ಯಕ್ಷ ಭೂಪಿಂದರ್ ಸಿಂಗ್ ಹೂಡಾ ಈ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಇದು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಯ ಮೇಲಿನ ಕಪ್ಪು ಚುಕ್ಕೆ. ಈ ಘಟನೆಯ ಬಗ್ಗೆ ಉನ್ನತ ಮಟ್ಟದ ಮತ್ತು ನಿಷ್ಪಕ್ಷಪಾತ ತನಿಖೆಯಾಗಬೇಕು” ಎಂದು ಅವರು ಒತ್ತಾಯಿಸಿದ್ದಾರೆ.

ರೋಹ್ಟಕ್‌ನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತೆ ಹಿಮಾನಿ ನರ್ವಾಲ್ ಅವರ ಬರ್ಬರ ಹತ್ಯೆಯ ಸುದ್ದಿ ಅತ್ಯಂತ ದುಃಖಕರ ಮತ್ತು ಆಘಾತಕಾರಿ. ನಾನು ಅಗಲಿದ ಆತ್ಮಕ್ಕೆ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಈ ರೀತಿಯಾಗಿ ಹುಡುಗಿಯ ಕೊಲೆ ಮತ್ತು ಸೂಟ್‌ಕೇಸ್‌ನಲ್ಲಿ ಆಕೆಯ ಶವ ಪತ್ತೆಯಾಗಿರುವುದು ಅತ್ಯಂತ ದುಃಖಕರ ಮತ್ತು ಆಘಾತಕಾರಿ. ಇದು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಯ ಸ್ಥಿತಿಗೆ ಒಂದು ಕಪ್ಪು ಚುಕ್ಕೆಯಾಗಿದೆ ಎಂದು ಹೂಡಾ ಎಕ್ಸ್​ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ