AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈದರಾಬಾದ್ ದೇವಸ್ಥಾನದಲ್ಲಿ ಅರ್ಚಕ ಹಾಗೂ ದೇವಿಯ ಮೂರ್ತಿ ಮೇಲೆ ದಾಳಿ; ಆರೋಪಿಯ ಬಂಧನ

ಹೈದರಾಬಾದ್‌ನ ಸಂತೋಷಿ ಮಾತಾ ದೇವಸ್ಥಾನದಲ್ಲಿ ವ್ಯಕ್ತಿಯೊಬ್ಬ ಅರ್ಚಕರ ಮೇಲೆ ಹಲ್ಲೆ ನಡೆಸಿ, ಕೋಲಿನಿಂದ ದೇವಿಯ ಮೂರ್ತಿಗೆ ಹೊಡೆದ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಭೀಕರ ದೃಶ್ಯವು ದೇವಸ್ಥಾನದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಘಟನೆ ನಡೆಯುತ್ತಿದ್ದಂತೆ ದೇವಸ್ಥಾನದಲ್ಲಿದ್ದ ಭಕ್ತರು ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಘಟನೆಯನ್ನು ತೀವ್ರವಾಗಿ ಖಂಡಿಸಿರುವ ಬಿಜೆಪಿ ನಾಯಕರು, ತೆಲಂಗಾಣ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಪ್ರಕರಣದ ನಿಷ್ಪಕ್ಷಪಾತ ತನಿಖೆ ಹಾಗೂ ಆರೋಪಿಯ ವಿರುದ್ಧ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ಹೈದರಾಬಾದ್ ದೇವಸ್ಥಾನದಲ್ಲಿ ಅರ್ಚಕ ಹಾಗೂ ದೇವಿಯ ಮೂರ್ತಿ ಮೇಲೆ ದಾಳಿ; ಆರೋಪಿಯ ಬಂಧನ
Man Attacks God Idol
ಸುಷ್ಮಾ ಚಕ್ರೆ
|

Updated on: Oct 02, 2026 | 9:40 PM

Share

ಹೈದರಾಬಾದ್, ಅಕ್ಟೋಬರ್ 2: ಹೈದರಾಬಾದ್‌ನ ದಿಲ್ಸುಖ್‌ನಗರ ಬಸ್ ಡಿಪೋ ಸಮೀಪವಿರುವ ಶ್ರೀ ಸಂತೋಷಿ ಮಾತಾ ದೇವಸ್ಥಾನದಲ್ಲಿ ಇಂದು ವ್ಯಕ್ತಿಯೊಬ್ಬ ಅರ್ಚಕರ ಮೇಲೆ ಹಲ್ಲೆ ನಡೆಸಿ, ಕೋಲುಗಳಿಂದ ದೇವಿಯ ಮೂರ್ತಿಗೆ ಹೊಡೆದು ಹಾನಿಗೊಳಿಸಲು ಯತ್ನಿಸಿದ ಘಟನೆ ನಡೆದಿದೆ. ಸ್ಥಳೀಯರು ಹಾಗೂ ಭಕ್ತರು ತಕ್ಷಣ ಕಾರ್ಯಪ್ರವೃತ್ತರಾಗಿ ಆರೋಪಿಯನ್ನು ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಈ ದಾಳಿಯ ಸಂಪೂರ್ಣ ದೃಶ್ಯಾವಳಿಗಳು ದೇವಸ್ಥಾನದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಆರೋಪಿಯು ದೇವಸ್ಥಾನದ ಗರ್ಭಗುಡಿಗೆ ಪ್ರವೇಶಿಸಿ ಈ ಕೃತ್ಯ ಎಸಗಿದಾಗ ಅಲ್ಲಿದ್ದ ಭಕ್ತರು ಆತನನ್ನು ತಡೆದು ಹಿಡಿದಿದ್ದಾರೆ. ದಾಳಿಯ ಹಿಂದಿನ ಕಾರಣ ಇನ್ನೂ ಸ್ಪಷ್ಟವಾಗಿಲ್ಲ.

ಇದನ್ನೂ ಓದಿ: ಮಹಾರಾಷ್ಟ್ರದ ರಾಯಗಢದಲ್ಲಿ ದುರಂತ; ಕೋಚಿಂಗ್ ಕ್ಲಾಸ್​ ಪಿಕ್​ನಿಕ್ ವೇಳೆ ಸಮುದ್ರದಲ್ಲಿ ಮುಳುಗಿ 8 ವಿದ್ಯಾರ್ಥಿಗಳು ಸಾವು

ಪೊಲೀಸ್ ತನಿಖೆ ಮತ್ತು ವೈದ್ಯಕೀಯ ತಪಾಸಣೆ:

ಈ ಘಟನೆಯ ಸಂದರ್ಭಗಳ ಕುರಿತು ಹೈದರಾಬಾದ್ ಪೊಲೀಸರು ವಿಸ್ತೃತ ತನಿಖೆ ಆರಂಭಿಸಿದ್ದಾರೆ. ತನಿಖೆಯ ಭಾಗವಾಗಿ ಆರೋಪಿಯ ವೈದ್ಯಕೀಯ ತಪಾಸಣೆ ಹಾಗೂ ಮಾನಸಿಕ ಆರೋಗ್ಯ ತಪಾಸಣೆ ನಡೆಸಿ ವೈದ್ಯಕೀಯ ಚಿಕಿತ್ಸೆಗೆ ಒಳಪಡಿಸಲಾಗಿದೆ. ಅರ್ಚಕರು ಹಾಗೂ ದೇವಿಯ ಮೂರ್ತಿಯನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲು ಕಾರಣವೇನು ಎಂಬುದರ ಕುರಿತು ವಿಚಾರಣೆ ಮುಂದುವರಿದಿದೆ.

ದೇವಸ್ಥಾನಗಳ ಭದ್ರತೆ ಕುರಿತು ಬಿಜೆಪಿ ಪ್ರಶ್ನೆ:

ಈ ಘಟನೆಯು ತೆಲಂಗಾಣದ ಬಿಜೆಪಿ ನಾಯಕರಿಂದ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ರಾಜ್ಯದಲ್ಲಿರುವ ಹಿಂದೂ ದೇವಸ್ಥಾನಗಳ ಭದ್ರತೆ ಹಾಗೂ ಭಕ್ತರ ರಕ್ಷಣೆಯ ಕುರಿತು ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ಕಠಿಣ ಪ್ರಶ್ನೆಗಳನ್ನು ಎತ್ತಿದ್ದಾರೆ. ತೆಲಂಗಾಣದ ಬಿಜೆಪಿ ಅಧ್ಯಕ್ಷ ಎನ್. ರಾಮಚಂದ್ರ ರಾವ್ ಅವರು ಧಾರ್ಮಿಕ ವಿಚಾರಗಳಲ್ಲಿ ಸರ್ಕಾರದ ಧೋರಣೆಯನ್ನು ತೀವ್ರವಾಗಿ ಟೀಕಿಸಿದ್ದಾರೆ. ಇಂತಹ ಘಟನೆಗಳು ನಡೆಯಲು ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿದ ಅವರು, ಧಾರ್ಮಿಕ ಸಂಸ್ಥೆಗಳ ಸುರಕ್ಷತೆಯ ಹೊಣೆಗಾರಿಕೆಯನ್ನು ಸರ್ಕಾರ ಹೊರಬೇಕು ಎಂದು ಆಗ್ರಹಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More