
ಹೈದರಾಬಾದ್, ಅಕ್ಟೋಬರ್ 2: ಹೈದರಾಬಾದ್‌ನ ದಿಲ್ಸುಖ್‌ನಗರ ಬಸ್ ಡಿಪೋ ಸಮೀಪವಿರುವ ಶ್ರೀ ಸಂತೋಷಿ ಮಾತಾ ದೇವಸ್ಥಾನದಲ್ಲಿ ಇಂದು ವ್ಯಕ್ತಿಯೊಬ್ಬ ಅರ್ಚಕರ ಮೇಲೆ ಹಲ್ಲೆ ನಡೆಸಿ, ಕೋಲುಗಳಿಂದ ದೇವಿಯ ಮೂರ್ತಿಗೆ ಹೊಡೆದು ಹಾನಿಗೊಳಿಸಲು ಯತ್ನಿಸಿದ ಘಟನೆ ನಡೆದಿದೆ. ಸ್ಥಳೀಯರು ಹಾಗೂ ಭಕ್ತರು ತಕ್ಷಣ ಕಾರ್ಯಪ್ರವೃತ್ತರಾಗಿ ಆರೋಪಿಯನ್ನು ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
ಈ ದಾಳಿಯ ಸಂಪೂರ್ಣ ದೃಶ್ಯಾವಳಿಗಳು ದೇವಸ್ಥಾನದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಆರೋಪಿಯು ದೇವಸ್ಥಾನದ ಗರ್ಭಗುಡಿಗೆ ಪ್ರವೇಶಿಸಿ ಈ ಕೃತ್ಯ ಎಸಗಿದಾಗ ಅಲ್ಲಿದ್ದ ಭಕ್ತರು ಆತನನ್ನು ತಡೆದು ಹಿಡಿದಿದ್ದಾರೆ. ದಾಳಿಯ ಹಿಂದಿನ ಕಾರಣ ಇನ್ನೂ ಸ್ಪಷ್ಟವಾಗಿಲ್ಲ.
ಇದನ್ನೂ ಓದಿ: ಮಹಾರಾಷ್ಟ್ರದ ರಾಯಗಢದಲ್ಲಿ ದುರಂತ; ಕೋಚಿಂಗ್ ಕ್ಲಾಸ್ ಪಿಕ್ನಿಕ್ ವೇಳೆ ಸಮುದ್ರದಲ್ಲಿ ಮುಳುಗಿ 8 ವಿದ್ಯಾರ್ಥಿಗಳು ಸಾವು
ಪೊಲೀಸ್ ತನಿಖೆ ಮತ್ತು ವೈದ್ಯಕೀಯ ತಪಾಸಣೆ:
ಈ ಘಟನೆಯ ಸಂದರ್ಭಗಳ ಕುರಿತು ಹೈದರಾಬಾದ್ ಪೊಲೀಸರು ವಿಸ್ತೃತ ತನಿಖೆ ಆರಂಭಿಸಿದ್ದಾರೆ. ತನಿಖೆಯ ಭಾಗವಾಗಿ ಆರೋಪಿಯ ವೈದ್ಯಕೀಯ ತಪಾಸಣೆ ಹಾಗೂ ಮಾನಸಿಕ ಆರೋಗ್ಯ ತಪಾಸಣೆ ನಡೆಸಿ ವೈದ್ಯಕೀಯ ಚಿಕಿತ್ಸೆಗೆ ಒಳಪಡಿಸಲಾಗಿದೆ. ಅರ್ಚಕರು ಹಾಗೂ ದೇವಿಯ ಮೂರ್ತಿಯನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲು ಕಾರಣವೇನು ಎಂಬುದರ ಕುರಿತು ವಿಚಾರಣೆ ಮುಂದುವರಿದಿದೆ.
Mohammed Ansari entered the sanctum sanctorum of Dilsukhnagar Santhoshi Matha Temple and attacked the deity with sticks. Hindu devotees then caught him and handed him over to the police.
Congress ruled Telengana Police have stated he is currently undergoing mental-health…
— Megh Updates 🚨™ (@MeghUpdates) October 2, 2026
ದೇವಸ್ಥಾನಗಳ ಭದ್ರತೆ ಕುರಿತು ಬಿಜೆಪಿ ಪ್ರಶ್ನೆ:
ಈ ಘಟನೆಯು ತೆಲಂಗಾಣದ ಬಿಜೆಪಿ ನಾಯಕರಿಂದ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ರಾಜ್ಯದಲ್ಲಿರುವ ಹಿಂದೂ ದೇವಸ್ಥಾನಗಳ ಭದ್ರತೆ ಹಾಗೂ ಭಕ್ತರ ರಕ್ಷಣೆಯ ಕುರಿತು ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ಕಠಿಣ ಪ್ರಶ್ನೆಗಳನ್ನು ಎತ್ತಿದ್ದಾರೆ. ತೆಲಂಗಾಣದ ಬಿಜೆಪಿ ಅಧ್ಯಕ್ಷ ಎನ್. ರಾಮಚಂದ್ರ ರಾವ್ ಅವರು ಧಾರ್ಮಿಕ ವಿಚಾರಗಳಲ್ಲಿ ಸರ್ಕಾರದ ಧೋರಣೆಯನ್ನು ತೀವ್ರವಾಗಿ ಟೀಕಿಸಿದ್ದಾರೆ. ಇಂತಹ ಘಟನೆಗಳು ನಡೆಯಲು ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿದ ಅವರು, ಧಾರ್ಮಿಕ ಸಂಸ್ಥೆಗಳ ಸುರಕ್ಷತೆಯ ಹೊಣೆಗಾರಿಕೆಯನ್ನು ಸರ್ಕಾರ ಹೊರಬೇಕು ಎಂದು ಆಗ್ರಹಿಸಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ