AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೇನಾಧಿಕಾರಿ ಹೆಸರಲ್ಲಿ ಮಹಿಳೆಯರನ್ನು ಮೆಚ್ಚಿಸಿ, ಡೇಟಿಂಗ್​​ಗೆ ಹೋಗುತ್ತಿದ್ದ ವ್ಯಕ್ತಿ ಬಂಧನ..

ಶುಕ್ರವಾರ ಮಧ್ಯಾಹ್ನ 3 ಗಂಟೆ ಹೊತ್ತಿಗೆ, ಅರ್ಚನಾ ರೆಡ್​ ಲೈಟ್​ ಗ್ರೇಟರ್​ ಕೈಲಾಶ್​​ನಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಮಹಿಳೆಯೊಬ್ಬರನ್ನು ಭೇಟಿಯಾಗಲು ಈ ಪ್ರದೇಶಕ್ಕೆ ಬಂದಿದ್ದ ಎಂದು ಪೊಲೀಸರು ಹೇಳಿದ್ದಾರೆ.

ಸೇನಾಧಿಕಾರಿ ಹೆಸರಲ್ಲಿ ಮಹಿಳೆಯರನ್ನು ಮೆಚ್ಚಿಸಿ, ಡೇಟಿಂಗ್​​ಗೆ ಹೋಗುತ್ತಿದ್ದ ವ್ಯಕ್ತಿ ಬಂಧನ..
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jun 19, 2021 | 5:32 PM

Share

ದೆಹಲಿ: ತಾನೊಬ್ಬ ಸೇನಾಧಿಕಾರಿ ಎಂದು ಹೇಳಿಕೊಂಡು ಮಹಿಳೆಯರನ್ನು ವಂಚಿಸುತ್ತಿದ್ದ 40 ವರ್ಷದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಸೋಷಿಯಲ್ ಮೀಡಿಯಾಗಳಲ್ಲಿ ಅಕೌಂಟ್​ಗಳನ್ನು ಹೊಂದಿದ್ದ ಈ ವ್ಯಕ್ತಿ ತಾನೊಬ್ಬ ಆರ್ಮಿ ಆಫೀಸರ್​ ಎಂದು ಪರಿಚಯಿಸಿಕೊಳ್ಳುತ್ತಿದ್ದ. ಈತನ ಹೆಸರು ದಿಲೀಪ್​ ಕುಮಾರ್​ ಎಂದಾಗಿದ್ದು ದೆಹಲಿಯ ಮೋಹನ್ ಗಾರ್ಡನ್​ನಲ್ಲಿರುವ ಸೈನಿಕ್ ಎನ್​ಕ್ಲೇವ್​ ನಿವಾಸಿಯಾಗಿದ್ದ. ಶಾಲೆಯೊಂದರಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಶುಕ್ರವಾರ ಮಧ್ಯಾಹ್ನ 3 ಗಂಟೆ ಹೊತ್ತಿಗೆ, ಅರ್ಚನಾ ರೆಡ್​ ಲೈಟ್​ ಗ್ರೇಟರ್​ ಕೈಲಾಶ್​​ನಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಮಹಿಳೆಯೊಬ್ಬರನ್ನು ಭೇಟಿಯಾಗಲು ಈ ಪ್ರದೇಶಕ್ಕೆ ಬಂದಿದ್ದ ಎಂದು ಪೊಲೀಸರು ಹೇಳಿದ್ದಾರೆ. ಈ ವೇಳೆ ಈತ ಸೇನಾ ಸಮವಸ್ತ್ರದಲ್ಲಿಯೇ ಇದ್ದ. ಹಾಗೇ ಒಂದು ನಕಲಿ ಐಡಿಯನ್ನೂ ಹೊಂದಿದ್ದ. ಆತನ ಮೊಬೈಲ್​ ಜತೆಗೆ ಫೇಕ್​ ಐಡಿ ಕಾರ್ಡ್​ನ್ನೂ ವಶಪಡಿಸಿಕೊಳ್ಳಲಾಗಿದೆ ಎಂದು ದೆಹಲಿ ಸೌತ್​​ನ ಡಿಸಿಪಿ ಅತುಲ್​ ಕುಮಾರ್​ ಠಾಕೂರ್​ ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಮಹಿಳೆಯರನ್ನು ಪರಿಚಯ ಮಾಡಿಕೊಂಡು, ತಾನೊಬ್ಬ ಸೇನಾ ಅಧಿಕಾರಿ, ಕ್ಯಾಪ್ಟನ್ ಶೇಖರ್​ ಎಂದು ಪರಿಚಯಿಸಿಕೊಳ್ಳುತ್ತಿದ್ದ. ಅನೇಕ ವಾಟ್ಸ್​ಆ್ಯಪ್ ಗ್ರೂಪ್​​ಗಳಲ್ಲಿ ಸಕ್ರಿಯನಾಗಿದ್ದ. ಅಲ್ಲದೆ, ಒಂದಷ್ಟು ಅಂತಾರಾಷ್ಟ್ರೀಯ ನಂಬರ್​ಗಳಿಗೂ ಆಗಾ ಕರೆ ಮಾಡುತ್ತಿದ್ದ ಎಂಬುದು ಮೊಬೈಲ್​ ಚೆಕ್​ ಮಾಡಿದಾಗ ಬೆಳಕಿಗೆ ಬಂದಿದೆ ಎಂದೂ ಪೊಲೀಸರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಒಂದೂವರೆ ತಿಂಗಳು ಕೊರೊನಾ ವಿರುದ್ಧ ಹೋರಾಡಿದ ಡಿಪಿಐಐಟಿ ಕಾರ್ಯದರ್ಶಿ ಡಾ. ಗುರುಪ್ರಸಾದ್ ಮೋಹಪಾತ್ರಾ ನಿಧನ; ಪ್ರಧಾನಿ ಮೋದಿಯವರಿಂದ ಸಂತಾಪ

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ