ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಬಗ್ಗೆ ಅಪಹಾಸ್ಯ-ನಿಂದನೆ; ವಿಡಿಯೋ ವೈರಲ್ ಆಗುತ್ತಿದ್ದಂತೆ ವ್ಯಕ್ತಿಯನ್ನು ಅರೆಸ್ಟ್ ಮಾಡಿದ ಪೊಲೀಸ್​

ಕೆಲವು ದಿನಗಳ ಹಿಂದೆ ಉತ್ತರ ಪ್ರದೇಶದ ಅಜಂಗಢ್​​ನಲ್ಲಿ ಪ್ರಧಾನಿ ಮೋದಿ ಮತ್ತು ಯುಪಿ ಸಿಎಂ ಯೋಗಿ ಆದಿತ್ಯನಾಥ್​ ಅವರನ್ನು ಅವಹೇಳನ ಮಾಡಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದರು. 

ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಬಗ್ಗೆ ಅಪಹಾಸ್ಯ-ನಿಂದನೆ; ವಿಡಿಯೋ ವೈರಲ್ ಆಗುತ್ತಿದ್ದಂತೆ ವ್ಯಕ್ತಿಯನ್ನು ಅರೆಸ್ಟ್ ಮಾಡಿದ ಪೊಲೀಸ್​
ಸಾಂಕೇತಿಕ ಚಿತ್ರ
Follow us
| Updated By: Lakshmi Hegde

Updated on: Apr 19, 2022 | 9:43 AM

ಭೋಪಾಲ್​: ಪ್ರಧಾನಿ ನರೇಂದ್ರ ಮೋದಿ ಮತ್ತು  ಗೃಹ ಸಚಿವ ಅಮಿತ್​ ಶಾ  ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿ ನಿಂದಿಸಿದ್ದ ಮತ್ತು ಕೆಟ್ಟದಾಗಿ ಅಪಹಾಸ್ಯ ಮಾಡಿದ್ದ ವ್ಯಕ್ತಿಯೊಬ್ಬನನ್ನು ಮಧ್ಯಪ್ರದೇಶ ಪೊಲೀಸರು ಬಂಧಿಸಿದ್ದಾರೆ.  ಈತ ಪ್ರಧಾನಿ ಮತ್ತು ಗೃಹ ಸಚಿವರನ್ನು ನಿಂದಿಸಿದ, ಅಪಹಾಸ್ಯ ಮಾಡಿದ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್​ ಆದ ಬೆನ್ನಲ್ಲೇ ಪೊಲೀಸರು ಆತನ ಪತ್ತೆ ಕಾರ್ಯ ಶುರು ಮಾಡಿದರು. ಇದೀಗ ಜಬಲ್​​ಪುರ್​​ನಲ್ಲಿ ಬಂಧಿಸಿದ್ದಾರೆ. ಬಂಧಿತನ ಹೆಸರು ಆದಿಲ್​ ಅಲಿ ಎಂದು ಹೇಳಲಾಗಿದ್ದು, ಇವನಿಗೆ 38ವರ್ಷ.  ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್​ ಶಾ ಬಗ್ಗೆ ಅವಹೇಳನ ಮಾಡಿದ್ದರಿಂದಲೇ ಬಂಧಿಸಿದ್ದಾಗಿ ಸ್ಥಳೀಯ ಎಸ್​ಪಿ ಸಿದ್ಧಾರ್ಥ್​ ಬಹುಗುಣ್​ ತಿಳಿಸಿದ್ದಾರೆ.

ಅಲಿ ವಿರುದ್ಧ ಪೊಲೀಸರು ಐಪಿಸಿ ಸೆಕ್ಷನ್​ 153 (ಗಲಭೆಗೆ ಪ್ರಚೋದನೆ), ಸೆಕ್ಷನ್​ 294 ( ಅಶ್ಲೀಲ ಪದಗಳುಳ್ಳ ಹಾಡುಗಳನ್ನು ಹೇಳಿದ್ದು ಮತ್ತು ಕೃತ್ಯ ಎಸಗಿದ್ದು)ರಡಿಯಲ್ಲಿ ಕೇಸ್​ ದಾಖಲು ಮಾಡಲಾಗಿದೆ. ಕೆಲವು ದಿನಗಳ ಹಿಂದೆ ಉತ್ತರ ಪ್ರದೇಶದ ಅಜಂಗಢ್​​ನಲ್ಲಿ ಪ್ರಧಾನಿ ಮೋದಿ ಮತ್ತು ಯುಪಿ ಸಿಎಂ ಯೋಗಿ ಆದಿತ್ಯನಾಥ್​ ಅವರನ್ನು ಅವಹೇಳನ ಮಾಡಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದರು.  ಅಂದಹಾಗೇ, ಇವರು ಸಹಾಯಕ ಪ್ರಾಧ್ಯಾಪಕರಾಗಿದ್ದು, ರಾಜಕೀಯ ಪಕ್ಷವೊಂದರ ಜತೆಗೆ ಗುರುತಿಸಿಕೊಂಡಿದ್ದರು. ಹಾಗೇ, ಆ ಪಕ್ಷದ ಪರವಾಗಿ ಸಾರ್ವಜನಿಕ ಸಂಪರ್ಖ ಸಭೆಗಳು, ಪ್ರಚಾರಗಳಲ್ಲಿ ಪಾಲ್ಗೊಳ್ಳುತ್ತಿದ್ದರು.

ಇದನ್ನೂ ಓದಿ: ಸೌತ್​ ಚಿತ್ರಗಳ ಎದುರು ಬಾಲಿವುಡ್​ ಎಡವಿದ್ದು ಎಲ್ಲಿ? ಉತ್ತರ ಹುಡುಕಿದ ‘ಕೆಜಿಎಫ್​ 2’ ಅಧೀರ ಸಂಜಯ್​ ದತ್​

ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ