AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾರೆನ್ಸ್ ಬಿಷ್ಣೋಯ್ ಸಹಚರನೆಂದು ಹೇಳಿಕೊಂಡು ಸಂಸದ ಪಪ್ಪು ಯಾದವ್​ಗೆ ಬೆದರಿಕೆ ಹಾಕುತ್ತಿದ್ದ ವ್ಯಕ್ತಿಯ ಬಂಧನ

ಗ್ಯಾಂಗ್​ಸ್ಟರ್ ಲಾರೆನ್ಸ್​ ಬಿಷ್ಣೋಯ್ ಸಹಚರನೆಂದು ಹೇಳಿಕೊಂಡು ಸಂಸದ ರಾಜೇಶ್ ರಂಜನ್ ಅಲಿಯಾಸ್ ಪಪ್ಪು ಯಾದವ್​ಗೆ ಬೆದರಿಕೆ ಹಾಕುತ್ತಿದ್ದ ದೆಹಲಿಯ ವ್ಯಕ್ತಿಯನ್ನು ಬಿಹಾರ ಪೊಲೀಸರು ಬಂಧಿಸಿದ್ದಾರೆ. ಈ ವ್ಯಕ್ತಿಗೆ ಯಾವುದೇ ಗ್ಯಾಂಗ್‌ನೊಂದಿಗೆ ಯಾವುದೇ ಸಂಬಂಧವಿಲ್ಲ ಎಂದು ಪೊಲೀಸರು ಹೇಳಿದ್ದಾರೆ. ಇದೇ ವೇಳೆ ಯುಎಇಯಲ್ಲಿ ನೆಲೆಸಿರುವ ತನ್ನ ಸಂಬಂಧಿಯ ಸಿಮ್ ಕಾರ್ಡ್ ಬಳಸಿ ಬೆದರಿಕೆ ಹಾಕಿದ್ದ ಎನ್ನಲಾಗಿದೆ.

ಲಾರೆನ್ಸ್ ಬಿಷ್ಣೋಯ್ ಸಹಚರನೆಂದು ಹೇಳಿಕೊಂಡು ಸಂಸದ ಪಪ್ಪು ಯಾದವ್​ಗೆ ಬೆದರಿಕೆ ಹಾಕುತ್ತಿದ್ದ ವ್ಯಕ್ತಿಯ ಬಂಧನ
ಪಪ್ಪು ಯಾದವ್Image Credit source: Deccan Herald
ನಯನಾ ರಾಜೀವ್
|

Updated on: Nov 03, 2024 | 8:36 AM

Share

ಗ್ಯಾಂಗ್​ಸ್ಟರ್ ಲಾರೆನ್ಸ್​ ಬಿಷ್ಣೋಯ್ ಸಹಚರನೆಂದು ಹೇಳಿಕೊಂಡು ಸಂಸದ ರಾಜೇಶ್ ರಂಜನ್ ಅಲಿಯಾಸ್ ಪಪ್ಪು ಯಾದವ್​ಗೆ ಬೆದರಿಕೆ ಹಾಕುತ್ತಿದ್ದ ದೆಹಲಿಯ ವ್ಯಕ್ತಿಯನ್ನು ಬಿಹಾರ ಪೊಲೀಸರು ಬಂಧಿಸಿದ್ದಾರೆ. ಈ ವ್ಯಕ್ತಿಗೆ ಯಾವುದೇ ಗ್ಯಾಂಗ್‌ನೊಂದಿಗೆ ಯಾವುದೇ ಸಂಬಂಧವಿಲ್ಲ ಎಂದು ಪೊಲೀಸರು ಹೇಳಿದ್ದಾರೆ. ಇದೇ ವೇಳೆ ಯುಎಇಯಲ್ಲಿ ನೆಲೆಸಿರುವ ತನ್ನ ಸಂಬಂಧಿಯ ಸಿಮ್ ಕಾರ್ಡ್ ಬಳಸಿ ಬೆದರಿಕೆ ಹಾಕಿದ್ದ ಎನ್ನಲಾಗಿದೆ.

ಪಪ್ಪು ಯಾದವ್ ಅವರ ಸಂಸದೀಯ ಕ್ಷೇತ್ರ ಪೂರ್ಣಿಯ ಪೊಲೀಸರು ಹೇಳಿಕೆ ನೀಡಿದ್ದಾರೆ. ಸಾಮಾಜಿಕ ಮಾಧ್ಯಮ ಮತ್ತು ಮುಖ್ಯವಾಹಿನಿಯ ಮಾಧ್ಯಮಗಳಲ್ಲಿ ಬಂದ ವರದಿಗಳ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಕರೆ ಮಾಡಿದವರನ್ನು ದೆಹಲಿಯ ನಿವಾಸಿ ಮಹೇಶ್ ಪಾಂಡೆ ಎಂದು ಗುರುತಿಸಲಾಗಿದೆ. ಆತನನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನೊಂದಿಗೆ ಪಾಂಡೆಗೆ ಯಾವುದೇ ಸಂಪರ್ಕವಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಇತ್ತೀಚೆಗಷ್ಟೇ ಪಪ್ಪು ಯಾದವ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ದುಬೈ ಸಂಖ್ಯೆಯಿಂದ ಕರೆ ಬಂದಿದ್ದು, ಭದ್ರತೆ ಹೆಚ್ಚಿಸುವಂತೆ ಪತ್ರ ಬರೆದಿದ್ದರು. ವಾಟ್ಸಾಪ್ ಮೂಲಕ ಸಂಸದರನ್ನು ಸಂಪರ್ಕಿಸಿದ್ದು, ಇದಕ್ಕಾಗಿ ಯುಎಇಯಲ್ಲಿ ನೆಲೆಸಿರುವ ಕುಟುಂಬ ಸದಸ್ಯರೊಬ್ಬರ ಸಿಮ್ ಕಾರ್ಡ್ ಬಳಸಿದ್ದೆ ಎಂದು ಪಾಂಡೆ ತಪ್ಪೊಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ಓದಿ: ಸಲ್ಮಾನ್ ಖಾನ್, ಲಾರೆನ್ಸ್ ಬಿಷ್ಣೋಯಿಗಿಂತಲೂ ಕ್ರೂರ: ಮಾಜಿ ಗೆಳತಿ

ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕಿ ಹತ್ಯೆಯಾದ ತಕ್ಷಣ ಬಿಷ್ಣೋಯ್ ಗ್ಯಾಂಗ್ ವಿರುದ್ಧ ಹೇಳಿಕೆ ನೀಡಿದ್ದ ಅವರು ಪಪ್ಪು ಯಾದವ್ ಅವರ ಸಂಖ್ಯೆಯನ್ನು ಗೂಗಲ್‌ನಲ್ಲಿ ಹುಡುಕಿದ್ದಾರೆ. ಮಹೇಶ್ ಪಾಂಡೆ ಬೆದರಿಕೆ ಹಾಕಲು ಬಳಸಿದ್ದ ಮೊಬೈಲ್ ಹಾಗೂ ಸಿಮ್ ಕಾರ್ಡ್ ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು