ದೆಹಲಿ-ಚೆನ್ನೈ ವಿಮಾನದಲ್ಲಿ ಲೈಂಗಿಕ ಕಿರುಕುಳ ನೀಡಿದ 43 ವರ್ಷದ ವ್ಯಕ್ತಿಯ ಬಂಧನ

ಸಂಜೆ 4.30ಕ್ಕೆ ವಿಮಾನ ಲ್ಯಾಂಡ್ ಆದ ಬಳಿಕ ಮಹಿಳೆ ಏರ್‌ಲೈನ್ ಸಿಬ್ಬಂದಿಯ ಸಹಾಯದಿಂದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 75 (ಲೈಂಗಿಕ ಕಿರುಕುಳ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಮತ್ತು ವ್ಯಕ್ತಿಯನ್ನು ಬಂಧಿಸಲಾಗಿದೆ.

ಪ್ರಾತಿನಿಧಿಕ ಚಿತ್ರ
Follow us
ರಶ್ಮಿ ಕಲ್ಲಕಟ್ಟ
|

Updated on: Oct 10, 2024 | 8:58 PM

ಚೆನ್ನೈ ಅಕ್ಟೋಬರ್ 10: ದೆಹಲಿ-ಚೆನ್ನೈ ಇಂಡಿಗೋ ವಿಮಾನದಲ್ಲಿ (Delhi-Chennai IndiGo flight) ಬುಧವಾರದಂದು ತನ್ನ ಎದುರಿನ ಸೀಟಿನಲ್ಲಿ ಕುಳಿತಿದ್ದ ಮಹಿಳಾ ಪ್ರಯಾಣಿಕರನ್ನು ಅನುಚಿತವಾಗಿ ಸ್ಪರ್ಶಿಸಿದ ಆರೋಪದ ಮೇಲೆ 43 ವರ್ಷದ ಸೇಲ್ಸ್ ಎಕ್ಸಿಕ್ಯೂಟಿವ್ ಅವರನ್ನು ಬಂಧಿಸಲಾಗಿದೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ. ವಿಂಡೋ ಸೀಟಿನಲ್ಲಿದ್ದ ಮಹಿಳೆಮಲಗಿದ್ದಾಗ, ಆಕೆಯ ಹಿಂದೆ ವಿಂಡೋ ಸೀಟಿನಲ್ಲಿ ಕುಳಿತಿದ್ದ ಆರೋಪಿಯು ಆಕೆಯನ್ನು ಅನುಚಿತವಾಗಿ ಸ್ಪರ್ಶಿಸಿದ್ದಾನೆ ಎಂದು ಮಹಿಳೆ ದೂರು ದಾಖಲಿಸಿದ್ದಾರೆ” ಎಂದು ಮೀನಂಬಾಕ್ಕಂ ವಿಮಾನ ನಿಲ್ದಾಣದ ಬಳಿಯಿರುವ ಮಹಿಳಾ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸಂಜೆ 4.30ಕ್ಕೆ ವಿಮಾನ ಲ್ಯಾಂಡ್ ಆದ ಬಳಿಕ ಮಹಿಳೆ ಏರ್‌ಲೈನ್ ಸಿಬ್ಬಂದಿಯ ಸಹಾಯದಿಂದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 75 (ಲೈಂಗಿಕ ಕಿರುಕುಳ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಮತ್ತು ವ್ಯಕ್ತಿಯನ್ನು ಬಂಧಿಸಲಾಗಿದೆ.

ರಾಜೇಶ್ ಶರ್ಮಾ ಎಂದು ಗುರುತಿಸಲಾದ ಶಂಕಿತನನ್ನು ಬಂಧಿಸಲಾಯಿತು ಎಂದು ಅಧಿಕಾರಿ ಹೇಳಿದರು. ಶರ್ಮಾ ರಾಜಸ್ಥಾನ ಮೂಲದವರಾಗಿದ್ದು, ವರ್ಷಗಳಿಂದ ಚೆನ್ನೈನಲ್ಲಿ ನೆಲೆಸಿದ್ದಾರೆ.

ಇದನ್ನೂ ಓದಿ: ದೆಹಲಿಯಲ್ಲಿ ₹2,000 ಕೋಟಿ ಮೌಲ್ಯದ 200 ಕೆಜಿ ಕೊಕೇನ್ ವಶ

ಘಟನೆ ನಡೆದಾಗ ಆತ ಪ್ರಯಾಣಿಕರು 3ಎ ಸೀಟಿನಲ್ಲಿ ಕುಳಿತಿದ್ದರು ಎಂದು ಚೆನ್ನೈ ವಿಮಾನ ನಿಲ್ದಾಣದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. “ಮಹಿಳಾ ಪ್ರಯಾಣಿಕರು ಪೊಲೀಸ್ ದೂರು ನೀಡಲು ಸಿದ್ಧರಿದ್ದರು, ಆದ್ದರಿಂದ ನಮ್ಮ ಸಿಬ್ಬಂದಿ ಅವರಿಗೆ ಸಹಾಯ ಮಾಡಿದರು” ಎಂದು ಅಧಿಕಾರಿ ಹೇಳಿದರು. ಘಟನೆಯ ಬಗ್ಗೆ ಇಂಡಿಗೋ ಅಧಿಕೃತ ಹೇಳಿಕೆಯನ್ನು ನೀಡಿಲ್ಲ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ

ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು

ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ

ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪಿಎನನ್ನು ಇದುವರೆಗೆ ಯಾಕೆ ಬಂಧಿಸಿಲ್ಲ? ರವಿ

ನನ್ನ ಸಹೋದರನಿಂದ ಸಚಿನ್ ರೂ. 80 ಲಕ್ಷ ತೆಗೆದುಕೊಂಡಿದ್ದ: ಪ್ರಕಾಶ್ ಕಪನೂರ್

ಕೊಲೆ ಮಾಡಿದವನಿಗೆ 2 ನಿಮಿಷ ಬಿಸಿಲಲ್ಲಿ ನಿಂತುಕೊಳ್ಳಲಾಗದೇ? ಶಶಿಕುಮಾರ್

ಪಂತ್​ನ ಔಟ್ ಮಾಡಿದ ಬಳಿಕ ಅಶ್ಲೀಲವಾಗಿ ಸಂಭ್ರಮಿಸಿದ್ರಾ ಟ್ರಾವಿಸ್ ಹೆಡ್

ಸಚಿನ್ ಡೆತ್​ನೋಟ್ ಪ್ರಕಾರ ಖರ್ಗೆ ತಮ್ಮ ಆಪ್ತ ಎಳೆದ ಗೆರೆ ದಾಟಲ್ಲ:ವಿಜಯೇಂದ್ರ

ಕಾಂಗ್ರೆಸ್ ಸೇರುವ ವದಂತಿಗಳ ಬಗ್ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಏನಂದ್ರು ನೋಡಿ