AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ: ಮದುವೆಗೆ ಒಪ್ಪದ ಯುವತಿ, ಬುರ್ಖಾ ಧರಿಸಿ ಬಂದು ಐದನೇ ಮಹಡಿಯಿಂದ ತಳ್ಳಿದ ವ್ಯಕ್ತಿ

ಮದುವೆಗೆ ಒಪ್ಪಲಿಲ್ಲವೆಂದು ವ್ಯಕ್ತಿಯೊಬ್ಬ ಯುವತಿಯನ್ನು ಐದನೇ ಮಹಡಿಯಿಂದ ಕೆಳಗೆ ತಳ್ಳಿರುವ ಘಟನೆ ದೆಹಲಿಯ ಜ್ಯೋತಿನಗರ ಪ್ರದೇಶದಲ್ಲಿ ನಡೆದಿದೆ. ಮೃತ ಯುವತಿಯನ್ನು ನೇಹಾ ಎಂದು ಗುರುತಿಸಲಾಗಿದೆ. ಘಟನೆಯ ಬಳಿಕ ತೌಫಿಕ್ ಎಂಬ ಆರೋಪಿಯನ್ನು ಉತ್ತರ ಪ್ರದೇಶದ ರಾಂಪುರ ಜಿಲ್ಲೆಯ ತಾಂಡಾದಿಂದ ಬಂಧಿಸಲಾಗಿದೆ.ತೌಫಿಕ್ ಒಂದು ತಿಂಗಳಿನಿಂದ ಕಿರುಕುಳ ನೀಡುತ್ತಿದ್ದ, ಮದುವೆಯಾಗುವಂತೆ ಒತ್ತಾಯಿಸುತ್ತಿದ್ದ ಮತ್ತು ಬೆದರಿಕೆ ಹಾಕುತ್ತಿದ್ದ ಎಂದು ನೇಹಾಳ ಸಹೋದರಿ ಹೇಳಿದ್ದಾಳೆ. ಘಟನೆಗೆ ಕೆಲವೇ ದಿನಗಳ ಮೊದಲು, ನೇಹಾ ತನ್ನ ತಾಯಿಗೆ ಕಿರುಕುಳದ ಬಗ್ಗೆ ಹೇಳಿದ್ದಳು.

ದೆಹಲಿ: ಮದುವೆಗೆ ಒಪ್ಪದ ಯುವತಿ, ಬುರ್ಖಾ ಧರಿಸಿ ಬಂದು ಐದನೇ ಮಹಡಿಯಿಂದ ತಳ್ಳಿದ ವ್ಯಕ್ತಿ
ನೇಹಾ
ನಯನಾ ರಾಜೀವ್
|

Updated on:Jun 25, 2025 | 11:59 AM

Share

ನವದೆಹಲಿ, ಜೂನ್ 25: ಮದುವೆ(Marriage)ಗೆ ಒಪ್ಪಲಿಲ್ಲವೆಂದು ವ್ಯಕ್ತಿಯೊಬ್ಬ ಯುವತಿಯನ್ನು ಐದನೇ ಮಹಡಿಯಿಂದ ಕೆಳಗೆ ತಳ್ಳಿರುವ ಘಟನೆ ದೆಹಲಿಯ ಜ್ಯೋತಿನಗರ ಪ್ರದೇಶದಲ್ಲಿ ನಡೆದಿದೆ. ಮೃತ ಯುವತಿಯನ್ನು ನೇಹಾ ಎಂದು ಗುರುತಿಸಲಾಗಿದೆ. ಘಟನೆಯ ಬಳಿಕ ತೌಫಿಕ್ ಎಂಬ ಆರೋಪಿಯನ್ನು ಉತ್ತರ ಪ್ರದೇಶದ ರಾಂಪುರ ಜಿಲ್ಲೆಯ ತಾಂಡಾದಿಂದ ಬಂಧಿಸಲಾಗಿದೆ.

ಬುರ್ಖಾ ಧರಿಸಿ ಮನೆಗೆ ನುಗ್ಗಿ ನೇಹಾಳನ್ನು ಟೆರೇಸ್​ನಿಂದ ತಳ್ಳಿದ್ದ ಆರೋಪಿ ತೌಫಿಕ್, ಬುರ್ಖಾ ಧರಿಸಿ ನೇಹಾಳ ಮನೆಯನ್ನು ಪ್ರವೇಶಿಸಿದ್ದ, ನೇಹಾರ ತಂದೆ ಮಧ್ಯೆ ತಡೆಯಲು ಬಂದಾಗ ಅವರನ್ನು ಪಕ್ಕಕ್ಕೆ ತಳ್ಳಿ ನೇರವಾಗಿ ಟೆರೇಸ್​ಗೆ ಹೋಗಿದ್ದಾನೆ. ಅಲ್ಲಿ ನೇಹಾ ನೀರಿನ ಟ್ಯಾಂಕ್ ಪರಿಶೀಲಿಸುತ್ತಿದ್ದಳು. ಇಬ್ಬರ ನಡುವೆ ತೀವ್ರ ವಾಗ್ವಾದ ನಡೆಯಿತು. ನಂತರ ತೌಫಿಕ್ ಆಕೆಯನ್ನು ತಳ್ಳಿದ್ದಾರೆ ಎಂದು ಆರೋಪಿಸಲಾಗಿದೆ. ನೇಹಾ ತೀವ್ರವಾಗಿ ಗಾಯಗೊಂಡಿದ್ದರು. ಆಕೆಯನ್ನು ಕೂಡಲೇ ಜಿಟಿಬಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ವೈದ್ಯರು ಎಷ್ಟೇ ಪ್ರಯತ್ನ ಪಟ್ಟರೂ ಉಳಿಸಿಕೊಳ್ಳಲಾಗಲಿಲ್ಲ.

ತೌಫಿಕ್ ಹಾಗೂ ನೇಹಾ ಮೂರು ವರ್ಷಗಳಿಂದ ಪರಿಚಯವಿದ್ದರು ಆಕೆ ಆತನನ್ನು ಸಹೋದರನಂತೆ ಕಾಣುತ್ತಿದ್ದಳು.ರಾಖಿ ಹಬ್ಬದಂದು ಆತನಿಗೂ ರಾಖಿ ಕಟ್ಟಿದ್ದಳು ಎಂದು ತಿಳಿಸಿದ್ದಾರೆ.ಆದರೆ ಇತ್ತೀಚಿನ ದಿನಗಳಲ್ಲಿ ತನ್ನನ್ನು ಮದುವೆಯಾಗುವಂತೆ ತೌಫಿಕ್ ಒತ್ತಡ ಹಾಕಿದ್ದ ಆದರೆ ಆಕೆ ಅದನ್ನು ಸ್ಪಷ್ಟವಾಗಿ ನಿರಾಕರಿಸಿದ್ದಳು.

ಮತ್ತಷ್ಟು ಓದಿ: ಇನ್‌ಸ್ಟಾಗ್ರಾಮ್​​ನಲ್ಲಿ ಪರಿಚಯವಾಗಿ ಹತ್ತೇ ದಿನಕ್ಕೆ ಕೊಲೆಯಾದ ವಿವಾಹಿತ ಮಹಿಳೆ: ಹತ್ಯೆಗೈದು ಚಿನ್ನಾಭರಣ ದೋಚಿದ ಯುವಕ

ತೌಫಿಕ್ ಒಂದು ತಿಂಗಳಿನಿಂದ ಕಿರುಕುಳ ನೀಡುತ್ತಿದ್ದ, ಮದುವೆಯಾಗುವಂತೆ ಒತ್ತಾಯಿಸುತ್ತಿದ್ದ ಮತ್ತು ಬೆದರಿಕೆ ಹಾಕುತ್ತಿದ್ದ ಎಂದು ನೇಹಾಳ ಸಹೋದರಿ ಹೇಳಿದ್ದಾಳೆ. ಘಟನೆಗೆ ಕೆಲವೇ ದಿನಗಳ ಮೊದಲು, ನೇಹಾ ತನ್ನ ತಾಯಿಗೆ ಕಿರುಕುಳದ ಬಗ್ಗೆ ಹೇಳಿದ್ದಳು.

ಮೂಲತಃ ಉತ್ತರ ಪ್ರದೇಶದವನಾದ ತೌಫಿಕ್ ದೆಹಲಿಯ ಮಂಡೋಲಿ ಯಲ್ಲಿ ಕೆಲಸ ಮಾಡುತ್ತಿದ್ದ. ಅಪರಾಧ ಸ್ಥಳದಿಂದ ಪರಾರಿಯಾಗಿದ್ದ ಆತನನ್ನು ರಾಂಪುರದಿಂದ ತಡರಾತ್ರಿ ನಡೆಸಿದ ಕಾರ್ಯಾಚರಣೆಯಲ್ಲಿ ಪೊಲೀಸರು ಪತ್ತೆಹಚ್ಚಿ ಬಂಧಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:58 am, Wed, 25 June 25

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ