AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವರ ಮೆಚ್ಚಿಸಲು ಹೆಂಡತಿಯ ಶಿರಚ್ಛೇದ ಮಾಡಿದ ಭೂಪ, ಮುಂದೆ ಮಾಡಿದ್ದೇನು?

ಮಧ್ಯಪ್ರದೇಶ: ದೇವರನ್ನು ಮೆಚ್ಚಿಸಲು 50 ವರ್ಷದ ವ್ಯಕ್ತಿಯೊಬ್ಬ ತನ್ನ ಹೆಂಡತಿಯ ಶಿರಚ್ಛೇದನ ಮಾಡಿ, ಶವವನ್ನು ತನ್ನ ಮನೆಯ ಪೂಜಾ ಕೋಣೆಯಲ್ಲಿ ಸಮಾಧಿ ಮಾಡಿರುವ ಘಟನೆ ಮಧ್ಯಪ್ರದೇಶದ ಸಿಂಗ್ರೌಲಿ ಜಿಲ್ಲೆಯಲ್ಲಿ ನಡೆದಿದೆ. ಸಿಂಗ್ರೌಲಿ ಜಿಲ್ಲಾ ಕೇಂದ್ರದಿಂದ 25 ಕಿ.ಮೀ ದೂರದಲ್ಲಿರುವ ಬಸೌಡಾ ಗ್ರಾಮದಲ್ಲಿ ಬುಧವಾರ ಈ ಘಟನೆ ನಡೆದಿದೆ. ಆರೋಪಿಯ ಇಬ್ಬರು ಮಕ್ಕಳು ಈ ವಿಚಾರವನ್ನು ಪೊಲೀಸರಿಗೆ ತಿಳಿಸಲಾಗಿ, ಆರೋಪಿಯನ್ನು ಗುರುವಾರ ಬಂಧಿಸಲಾಗಿದೆ ಎಂದು ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ತಿಳಿಸಿದ್ದಾರೆ. ಈ ವ್ಯಕ್ತಿ ತನ್ನ 45 […]

ದೇವರ ಮೆಚ್ಚಿಸಲು ಹೆಂಡತಿಯ ಶಿರಚ್ಛೇದ ಮಾಡಿದ ಭೂಪ, ಮುಂದೆ ಮಾಡಿದ್ದೇನು?
ಪ್ರಾತಿನಿಧಿಕ ಚಿತ್ರ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Sep 04, 2020 | 7:22 PM

Share

ಮಧ್ಯಪ್ರದೇಶ: ದೇವರನ್ನು ಮೆಚ್ಚಿಸಲು 50 ವರ್ಷದ ವ್ಯಕ್ತಿಯೊಬ್ಬ ತನ್ನ ಹೆಂಡತಿಯ ಶಿರಚ್ಛೇದನ ಮಾಡಿ, ಶವವನ್ನು ತನ್ನ ಮನೆಯ ಪೂಜಾ ಕೋಣೆಯಲ್ಲಿ ಸಮಾಧಿ ಮಾಡಿರುವ ಘಟನೆ ಮಧ್ಯಪ್ರದೇಶದ ಸಿಂಗ್ರೌಲಿ ಜಿಲ್ಲೆಯಲ್ಲಿ ನಡೆದಿದೆ.

ಸಿಂಗ್ರೌಲಿ ಜಿಲ್ಲಾ ಕೇಂದ್ರದಿಂದ 25 ಕಿ.ಮೀ ದೂರದಲ್ಲಿರುವ ಬಸೌಡಾ ಗ್ರಾಮದಲ್ಲಿ ಬುಧವಾರ ಈ ಘಟನೆ ನಡೆದಿದೆ. ಆರೋಪಿಯ ಇಬ್ಬರು ಮಕ್ಕಳು ಈ ವಿಚಾರವನ್ನು ಪೊಲೀಸರಿಗೆ ತಿಳಿಸಲಾಗಿ, ಆರೋಪಿಯನ್ನು ಗುರುವಾರ ಬಂಧಿಸಲಾಗಿದೆ ಎಂದು ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ತಿಳಿಸಿದ್ದಾರೆ.

ಈ ವ್ಯಕ್ತಿ ತನ್ನ 45 ವರ್ಷದ ಹೆಂಡತಿಯನ್ನು ಬುಧವಾರ ಮುಂಜಾನೆ ಶಿರಚ್ಛೇದನ ಮಾಡಿದನೆಂದು ಆರೋಪಿಸಲಾಗಿದೆ. ನಂತರ ಆತ ತನ್ನ ಮನೆಯ ಪೂಜಾ ಕೋಣೆಯಲ್ಲಿ ಹೆಂಡತಿಯ ತಲೆ ಮತ್ತು ಮುಂಡವನ್ನು ಪ್ರತ್ಯೇಕವಾಗಿ ಹೂತು ಪರಾರಿಯಾಗಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆರೋಪಿಯ ಮಕ್ಕಳ ಪ್ರಕಾರ, ಆರೋಪಿ ತನ್ನ ನೆಚ್ಚಿನ ದೇವರನ್ನು ಮೆಚ್ಚಿಸಲು ತನ್ನ ಹೆಂಡತಿಯನ್ನು ಕೊಂದಿದ್ದಾನೆ ಎಂಬುದು ತಿಳಿದು ಬಂದಿದೆ. ಆತ ಕೆಲವು ದಿನಗಳ ಹಿಂದೆ ಮೇಕೆಯನ್ನು ಕೊಂದು, ಮೇಕೆಯ ದೇಹವನ್ನು ಪೂಜಾ ಕೋಣೆಯಲ್ಲಿ ಹೂತಿದ್ದ ಎಂದು ಅಧಿಕಾರಿ ತಿಳಿಸಿದ್ದಾರೆ.

Follow Us
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಹಾಸನದವರಿಗೆ ವಿಶೇಷ ಶಕ್ತಿ ಎಂದ ನಟ ರಂಗಾಯಣ ರಘು: ವಿಡಿಯೋ ನೋಡಿ
ಹಾಸನದವರಿಗೆ ವಿಶೇಷ ಶಕ್ತಿ ಎಂದ ನಟ ರಂಗಾಯಣ ರಘು: ವಿಡಿಯೋ ನೋಡಿ
ರಚಿತಾರಾಮ್ ಹುಟ್ಟುಹಬ್ಬ: ಕೊರಗಜ್ಜನ ಹರಕೆ ಬಗ್ಗೆ ರಚಿತಾರಾಮ್ ಏನಂದ್ರು ನೋಡಿ
ರಚಿತಾರಾಮ್ ಹುಟ್ಟುಹಬ್ಬ: ಕೊರಗಜ್ಜನ ಹರಕೆ ಬಗ್ಗೆ ರಚಿತಾರಾಮ್ ಏನಂದ್ರು ನೋಡಿ
ಬಿಗ್​​ಬಾಸ್: ಸ್ಪರ್ಧಿಗಳ ವರ್ತನೆಗೆ ಬೇಸತ್ತು ಸ್ಟೇಜ್ ಬಿಟ್ಟು ತೆರಳಿದ ಕಿಚ್ಚ
ಬಿಗ್​​ಬಾಸ್: ಸ್ಪರ್ಧಿಗಳ ವರ್ತನೆಗೆ ಬೇಸತ್ತು ಸ್ಟೇಜ್ ಬಿಟ್ಟು ತೆರಳಿದ ಕಿಚ್ಚ
ಬಣ್ಣದ ಬದುಕಿನ ಅನುಭವ ಬಿಚ್ಚಿಟ್ಟ ರಂಗಾಯಣ ರಘು!
ಬಣ್ಣದ ಬದುಕಿನ ಅನುಭವ ಬಿಚ್ಚಿಟ್ಟ ರಂಗಾಯಣ ರಘು!
ಮೈಸೂರಿನಲ್ಲಿ ಟಿಟಿ ವಾಹನದ ಮೇಲೆ ಬಿದ್ದ ದೀಪಾಲಂಕಾರದ ಕಟೌಟ್
ಮೈಸೂರಿನಲ್ಲಿ ಟಿಟಿ ವಾಹನದ ಮೇಲೆ ಬಿದ್ದ ದೀಪಾಲಂಕಾರದ ಕಟೌಟ್