ಗುರುಗ್ರಾಮ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು, ಹೊತ್ತಿಕೊಂಡ ಬೆಂಕಿ ಚಾಲಕ ಸಜೀವ ದಹನ

|

Updated on: Feb 04, 2024 | 2:41 PM

ಸೋಹ್ನಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬ್ರೆಝಾ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡಿದೆ. ಅಪಘಾತದಲ್ಲಿ ಗಾಯಗೊಂಡು ಕಾರಿನಲ್ಲಿದ್ದ ಯುವಕ ಹೊರಗೆ ಬರಲಾಗದೆ ಸಜೀವ ದಹನಗೊಂಡಿದ್ದಾನೆ. ಮಾಹಿತಿ ಪಡೆದ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಿಯಂತ್ರಿಸಿದರೂ ಅಷ್ಟೊತ್ತಿಗಾಗಲೇ ತಡವಾಗಿತ್ತು.

ಗುರುಗ್ರಾಮ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು, ಹೊತ್ತಿಕೊಂಡ ಬೆಂಕಿ ಚಾಲಕ ಸಜೀವ ದಹನ
ಬೆಂಕಿ
Image Credit source: Indian Express
Follow us on

ಕಾರೊಂದು ವಿದ್ಯುತ್​ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡು, ಚಾಲಕ ಸಜೀವದಹನವಾಗಿರುವ ಘಟನೆ ಗುರುಗ್ರಾಮದಲ್ಲಿ ನಡೆದಿದೆ. ಅಪಘಾತದಲ್ಲಿ ಗಾಯಗೊಂಡು ಕಾರಿನಲ್ಲಿದ್ದ ಯುವಕ ಹೊರಗೆ ಬರಲಾಗದೆ ಸಜೀವ ದಹನಗೊಂಡಿದ್ದಾನೆ. ಮಾಹಿತಿ ಪಡೆದ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಿಯಂತ್ರಿಸಿದರೂ ಅಷ್ಟೊತ್ತಿಗಾಗಲೇ ತಡವಾಗಿತ್ತು.

ಪೊಲೀಸರ ಪ್ರಕಾರ, ಸೋಹ್ನಾದ ದೌಲಾ ಗ್ರಾಮದ ನಿವಾಸಿ ಮೋಹಿತ್ ಸಿಸಿಟಿವಿ ಅಳವಡಿಸುವ ಕೆಲಸ ಮಾಡುತ್ತಿದ್ದ. ಶುಕ್ರವಾರ ರಾತ್ರಿ ಯಾವುದೋ ಕಾರ್ಯಕ್ರಮಕ್ಕೆ ಹೋಗಿದ್ದರು. ಅಲ್ಲಿಂದ ಹಿಂತಿರುಗಿದ ನಂತರ ಕಾರಿನಲ್ಲಿ ಸೊಹ್ನಾಗೆ ಹೋಗುತ್ತಿದ್ದರು. ಲೋಹಟ್ಕಿ ಗ್ರಾಮದ ಬಳಿ ಎದುರಿನಿಂದ ಬರುತ್ತಿದ್ದ ವಾಹನವನ್ನು ತಪ್ಪಿಸಲು ಹೋಗಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.

ಅಪಘಾತದಲ್ಲಿ ಮೋಹಿತ್ ಗಾಯಗೊಂಡಿದ್ದು, ಕಾರಿನಿಂದ ಹೊರಬರಲು ಸಾಧ್ಯವಾಗಲಿಲ್ಲ. ಡಿಕ್ಕಿ ಸಂಭವಿಸಿದ ಕೂಡಲೇ ಕಾರಿನ ಬಾನೆಟ್‌ನಿಂದ ಹೊಗೆ ಬರಲಾರಂಭಿಸಿದ್ದು, ಸ್ವಲ್ಪ ಹೊತ್ತಿನಲ್ಲೇ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ. ಕಾರಿನಿಂದ ಭಾರೀ ಬೆಂಕಿ ಹೊತ್ತಿಕೊಳ್ಳತೊಡಗಿತು. ಸದ್ದು ಕೇಳಿ ಸುತ್ತಮುತ್ತಲ ಗ್ರಾಮಗಳ ಜನರು ಜಮಾಯಿಸಿದರು. ಅವರು ಬೆಂಕಿಯನ್ನು ನಂದಿಸಲು ಪ್ರಯತ್ನಿಸಿದರು ಮತ್ತು ಮೋಹಿತ್ ಅವರನ್ನು ಹೊರತೆಗೆದರು, ಆದರೆ ಅಷ್ಟರಲ್ಲಿ ಅವರು ಸಾವನ್ನಪ್ಪಿದ್ದರು.

ಮತ್ತಷ್ಟು ಓದಿ: ಚಲಿಸುತ್ತಿರುವಾಗಲೇ ಹೊತ್ತಿ ಉರಿದ ವೊಲ್ವೊ ಐಷಾರಾಮಿ ಎಲೆಕ್ಟ್ರಿಕ್ ಕಾರು

ಈ ಬಗ್ಗೆ ಜನರು ಪೊಲೀಸ್ ಹಾಗೂ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಸೊಹ್ನಾ ಪೊಲೀಸ್ ಠಾಣೆ ಹಾಗೂ ಅಗ್ನಿಶಾಮಕ ದಳದ ವಾಹನಗಳು ಆಗಮಿಸಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ. ಮಾಹಿತಿ ಪಡೆದು ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಲಾಯಿತು ಎಂದು ಅಗ್ನಿಶಾಮಕ ದಳದ ಮೇಲ್ವಿಚಾರಕ ಜೈವೀರ್ ಭದಾನ ತಿಳಿಸಿದ್ದಾರೆ. ಆದರೆ ಅದಕ್ಕೂ ಮುನ್ನವೇ ಕಾರು ಮಾಲೀಕರು ಮೃತಪಟ್ಟಿದ್ದರು.

ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ಆರಂಭಿಸಿದ್ದಾರೆ ಎಂದು ಸೊಹ್ನಾ ಪೊಲೀಸ್ ಠಾಣೆ ಪ್ರಭಾರಿ ದೀಪಕ್ ಕುಮಾರ್ ತಿಳಿಸಿದ್ದಾರೆ. ಮೃತರ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ