AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವೂದ್​ ಇಬ್ರಾಹಿಂ ಗ್ಯಾಂಗ್​ನೊಂದಿಗೆ ಸಂಪರ್ಕ ಹೊಂದಿರುವ ವ್ಯಕ್ತಿಯಿಂದ ಪ್ರಧಾನಿ ಮೋದಿ, ಯೋಗಿಗೆ ಕೊಲೆ ಬೆದರಿಕೆ

ಭೂಗತ ಪಾತಕಿ ದಾವೂದ್ ಇಬ್ರಾಹಿಂ(Dawood Ibrahim) ಗ್ಯಾಂಗ್‌ನೊಂದಿಗೆ ಸಂಪರ್ಕ ಹೊಂದಿರುವುದಾಗಿ ಹೇಳಿಕೊಂಡ ವ್ಯಕ್ತಿಯೊಬ್ಬ ಮುಂಬೈ ಪೊಲೀಸ್ ನಿಯಂತ್ರಣ ಕೊಠಡಿಗೆ ಬೆದರಿಕೆ ಕರೆ ಮಾಡಿದ್ದಾನೆ. ಪ್ರಧಾನಿ ನರೇಂದ್ರ ಮೋದಿ(Narendra Modi) ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್(Yogi Adityanath) ಹತ್ಯೆಗೆ ಸಂಚು ರೂಪಿಸಲು ದಾವೂದ್ ಗ್ಯಾಂಗ್ ತನಗೆ ಸೂಚನೆ ನೀಡಿತ್ತು ಎಂದು ಆರೋಪಿ ಈ ಕರೆಯಲ್ಲಿ ಹೇಳಿಕೊಂಡಿದ್ದಾನೆ.

ದಾವೂದ್​ ಇಬ್ರಾಹಿಂ ಗ್ಯಾಂಗ್​ನೊಂದಿಗೆ ಸಂಪರ್ಕ ಹೊಂದಿರುವ ವ್ಯಕ್ತಿಯಿಂದ ಪ್ರಧಾನಿ ಮೋದಿ, ಯೋಗಿಗೆ ಕೊಲೆ ಬೆದರಿಕೆ
ನರೇಂದ್ರ ಮೋದಿImage Credit source: Hindustan Times
ನಯನಾ ರಾಜೀವ್
|

Updated on:Nov 21, 2023 | 2:15 PM

Share

ಭೂಗತ ಪಾತಕಿ ದಾವೂದ್ ಇಬ್ರಾಹಿಂ(Dawood Ibrahim) ಗ್ಯಾಂಗ್‌ನೊಂದಿಗೆ ಸಂಪರ್ಕ ಹೊಂದಿರುವುದಾಗಿ ಹೇಳಿಕೊಂಡ ವ್ಯಕ್ತಿಯೊಬ್ಬ ಮುಂಬೈ ಪೊಲೀಸ್ ನಿಯಂತ್ರಣ ಕೊಠಡಿಗೆ ಬೆದರಿಕೆ ಕರೆ ಮಾಡಿದ್ದಾನೆ. ಪ್ರಧಾನಿ ನರೇಂದ್ರ ಮೋದಿ(Narendra Modi) ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್(Yogi Adityanath) ಹತ್ಯೆಗೆ ಸಂಚು ರೂಪಿಸಲು ದಾವೂದ್ ಗ್ಯಾಂಗ್ ತನಗೆ ಸೂಚನೆ ನೀಡಿತ್ತು ಎಂದು ಆರೋಪಿ ಈ ಕರೆಯಲ್ಲಿ ಹೇಳಿಕೊಂಡಿದ್ದಾನೆ.

ಮಂಗಳವಾರ ಮಾಹಿತಿ ನೀಡಿದ ಪೊಲೀಸರು, ಕರೆ ಮಾಡಿದವರು ಜೆಜೆ ಆಸ್ಪತ್ರೆಯನ್ನು ಬಾಂಬ್‌ನಿಂದ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದರು ಎಂದು ಹೇಳಿದ್ದಾರೆ. ಪೊಲೀಸರು ವ್ಯಕ್ತಿಯ ವಿರುದ್ಧ ಐಪಿಸಿ ಸೆಕ್ಷನ್ 505 (2) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಮತ್ತು ಆತನನ್ನೂ ಬಂಧಿಸಿದ್ದಾರೆ.

ದಾವೂದ್ ಇಬ್ರಾಹಿಂ ಗ್ಯಾಂಗ್ ಹೆಸರಿನಲ್ಲಿ ಮುಂಬೈ ಪೊಲೀಸ್ ಕಂಟ್ರೋಲ್ ರೂಂಗೆ ಬೆದರಿಕೆ ಕರೆಗಳನ್ನು ಮಾಡಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಮುಂಬೈ ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಈ ಹಿಂದೆ ಅಕ್ಟೋಬರ್‌ನಲ್ಲಿಯೂ ಮುಂಬೈ ಪೊಲೀಸರಿಗೆ ಇದೇ ರೀತಿಯ ಬೆದರಿಕೆ ಸಂದೇಶ ಬಂದಿತ್ತು. 500 ಕೋಟಿ ಪಾವತಿಸಲು ಮತ್ತು ಕುಖ್ಯಾತ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಅವರನ್ನು ಬಿಡುಗಡೆ ಮಾಡಲು ಭಾರತ ಸರ್ಕಾರ ವಿಫಲವಾದರೆ, ಪ್ರಧಾನಿ ನರೇಂದ್ರ ಮೋದಿ ಮತ್ತು ಅಹಮದಾಬಾದ್‌ನಲ್ಲಿರುವ ಅವರ ಹೆಸರಿನ ಕ್ರೀಡಾಂಗಣವನ್ನು ಸ್ಫೋಟಿಸಲಾಗುವುದು ಎಂದು ಅದನ್ನು ಕಳುಹಿಸುವ ವ್ಯಕ್ತಿ ಬೆದರಿಕೆ ಹಾಕಿದ್ದ.

ಮತ್ತಷ್ಟು ಓದಿ: ಪ್ರಧಾನಿ ಮೋದಿ, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್​ಗೆ ಕೊಲೆ ಬೆದರಿಕೆ

ಭಯೋತ್ಪಾದಕ ಗುಂಪು ಈಗಾಗಲೇ ದಾಳಿ ನಡೆಸಲು ತನ್ನ ಜನರನ್ನು ನಿಯೋಜಿಸಿದೆ ಎಂದು ಇಮೇಲ್‌ನಲ್ಲಿ ಬರೆಯಲಾಗಿತ್ತು. ಆಗಸ್ಟ್‌ನಲ್ಲಿ ಕೇರಳ ಪೊಲೀಸರು ಎರಡು ದಿನಗಳ ಭೇಟಿಯ ವೇಳೆ ಪ್ರಧಾನಿ ಮೋದಿಯವರ ಮೇಲೆ ಆತ್ಮಹತ್ಯಾ ದಾಳಿಯ ಬೆದರಿಕೆ ಪತ್ರ ಬರೆದಿದ್ದ ವ್ಯಕ್ತಿಯನ್ನು ಬಂಧಿಸಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:14 pm, Tue, 21 November 23

ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ