ಉತ್ತರ ಪ್ರದೇಶ: ಪತ್ನಿ ಕಿರುಕುಳದಿಂದ ಬೇಸತ್ತು ಪೊಲೀಸ್ ಅಧಿಕಾರಿಯ ಮನೆಯ ಹೊರಗೆ ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ
ಉತ್ತರ ಪ್ರದೇಶದ ಪಿಲಿಭಿತ್‌ನಲ್ಲಿ ತನ್ನ ಪತ್ನಿಯ ವಿರುದ್ಧ ಪೊಲೀಸರು ಕಿರುಕುಳದ ಪ್ರಕರಣವನ್ನು ದಾಖಲಿಸದ ಕಾರಣ ಪೊಲೀಸ್ ವರಿಷ್ಠಾಧಿಕಾರಿ ನಿವಾಸದ ಹೊರಗೆ ವಿಷ ಸೇವಿಸಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಈ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪತ್ನಿಯ ಕಿರುಕುಳದಿಂದ ಬೇಸತ್ತು ವ್ಯಕ್ತಿಯೊಬ್ಬರು ಪೊಲೀಸ್ ಅಧಿಕಾರಿಯ ನಿವಾಸದೆದುರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ವ್ಯಕ್ತಿ ಪತ್ನಿ ತನಗೆ ಕಿರುಕುಳ ಕೊಡುತ್ತಿದ್ದಾಳೆ ಎಂದು ಪೊಲೀಸ್ ಠಾಣೆಗೆ ದೂರು ನೀಡಲು ಬಂದಿದ್ದರು, ಆದರೆ ದೂರು ಸ್ವೀಕರಿಸಲು ಅಧಿಕಾರಿ ನಿರಾಕರಿಸಿದ್ದರು. ಅದಕ್ಕೆ ಬೇಸರಗೊಂಡ ವ್ಯಕ್ತಿ ಅಧಿಕಾರಿಯ ಮನೆ ಎದುರೇ ವಿಷ ಸೇವಿಸಿ ಇಹಲೋಕ ತ್ಯಜಿಸಿದ್ದಾರೆ.
ಕೆಲವು ದಿನಗಳ ಹಿಂದೆ ಆತನ ಮೇಲೆ ಕೌಟುಂಬಿಕ ದೌರ್ಜನ್ಯದ ಬಗ್ಗೆ ಪತ್ನಿ ದೂರು ನೀಡಿದ್ದಾಳೆ ಎಂದು ವ್ಯಕ್ತಿಯ ಕುಟುಂಬ ಸದಸ್ಯರು ತಿಳಿಸಿದ್ದಾರೆ. ಆದರೆ, ಪತ್ನಿಯ ಕಿರುಕುಳದ ಬಗ್ಗೆ ಪೊಲೀಸರು ದೂರು ಸ್ವೀಕರಿಸಿಲ್ಲ ಎಂದು ಅವರು ಹೇಳಿದ್ದಾರೆ. ಎರಡು ತಿಂಗಳ ಹಿಂದೆ ಪ್ರದೀಪ್ ಮತ್ತು ಇಶಾ ವಿವಾಹವಾಗಿದ್ದು, ಪ್ರದೀಪ್ ಅವರಿಂದ 5 ಲಕ್ಷ ರೂ.ಗೆ ಬೇಡಿಕೆಯಿಡುತ್ತಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಶನಿವಾರ ಬೆಳಗ್ಗೆ ಪ್ರದೀಪ್ ಪತ್ನಿ ವಿರುದ್ಧ ದೂರು ನೀಡಲು ಎಸ್‌ಪಿ ಕಚೇರಿಗೆ ಹೋದರೂ ಅಧಿಕಾರಿ ಇರಲಿಲ್ಲ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಹೀಗಾಗಿ ಪ್ರದೀಪ್ ಎಸ್ಪಿ ನಿವಾಸಕ್ಕೆ ತೆರಳಿ ವಿಷ ಸೇವಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಅತುಲ್ ಶರ್ಮಾ ಅವರು ಮಾತನಾಡಿ, ಸುಂಗರ್ಹಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರದೀಪ್ ವಿಷ ಸೇವಿಸಿದ್ದಾರೆ. ಅವರನ್ನು ಸಿಬ್ಬಂದಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಈ ವಿಷಯವನ್ನು ಪರಿಶೀಲಿಸಲಾಗುತ್ತಿದೆ ಎಂದು ಹೇಳಿದರು.
ಮತ್ತಷ್ಟು ಓದಿ: ಅತಿಥಿ ಉಪನ್ಯಾಸಕನ ಭೀಕರ ಹತ್ಯೆ; ಚೌಡಿ ಪೂಜೆ ಮಾಡಿ ಆಚೆ ಹೋದವ ಸೇರಿದ ಮಸಣ
ಪ್ರದೀಪ್ ಸಮೀಪದ ಬರೇಲಿ ಜಿಲ್ಲೆಯ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವನ್ನಪ್ಪಿದರು. ಅಲ್ಲಿಯೇ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಾಗುವುದು ಎಂದು ತಿಳಿಸಿದರು. ವ್ಯಕ್ತಿಯ ಕುಟುಂಬ ಸದಸ್ಯರು ದೂರು ನೀಡಿದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.
ಮತ್ತೊಂದು ಘಟನೆ
ಅಳಿಯ, ಮಗಳ ಜಗಳ; ಕಲಹ ನಿವಾರಿಸಲು ಅಳಿಯನ ಮನೆಗೆ ಹೋದ ಅತ್ತೆಯ ಕೊಲೆ ಮಗಳು ಮತ್ತು ಅಳಿಯನ ನಡುವೆ ನಡೆಯುತ್ತಿದ್ದ ಕೌಟುಂಬಿಕ ಕಲಹವನ್ನು ನಿವಾರಿಸಲು ಹೋದ ಅತ್ತೆಯನ್ನೇ ಅಳಿಯ ದೊಣ್ಣೆಯಿಂದ ಹೊಡೆದು ಕೊಲೆ (Murder) ಮಾಡಿದ ಘಟನೆ ತುಮಕೂರು (Tumkur) ಜಿಲ್ಲೆಯ ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿಯಲ್ಲಿ ನಡೆದಿದೆ. ಅಶ್ವಿತ್ ಉನ್ನಿಸಾ (58) ಕೊಲೆಯಾದ ಮಹಿಳೆಯಾಗಿದ್ದು, ಸೈಯದ್ ಸುಹೇಲ್ ಕೊಲೆಗೈದ ಆರೋಪಿಯಾಗಿದ್ದಾನೆ.‘
ಸೈಯದ್ ಸುಹೇಲ್ ಮತ್ತು ಪತ್ನಿಯ ನಡುವೆ ಜಗಳ ನಡೆದಿದ್ದು, ಈ ಜಗಳ ವಿಕೋಪಕ್ಕೆ ತಿರುಗಿದ ಹಿನ್ನೆಲೆ ಪತಿ ಗಲಾಟೆ ಮಾಡುತ್ತಿದ್ದಾನೆ ಎಂದು ತುಮಕೂರು ತಾಲೂಕಿನ ಬೆಳಗುಂಬದಲ್ಲಿರುವ ತನ್ನ ತಾಯಿ ಅಶ್ವಿತ್ ಉನ್ನಿಸಾಗೆ ಮಗಳು ಫೋನ್ ಮಾಡಿದ್ದಳು. ಹೀಗಾಗಿ ಕಲಹ ನಿವಾರಿಸಲು ಅಳಿಯನ ಮನೆಗೆ ಬಂದಿದ್ದ ಅಶ್ವಿತ್ ಉನ್ನಿಸಾ ಹೋಗಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ