AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾದಿಂದ ಪಾರಾಗಲು ಸ್ನೇಹಿತನ ಸಲಹೆಯಂತೆ ಸೀಮೆ ಎಣ್ಣೆ ಕುಡಿದ ವ್ಯಕ್ತಿ; ಸಾವಿನ ನಂತರ ಬಂತು ನೆಗೆಟಿವ್​ ವರದಿ​

ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವುದನ್ನು ನೋಡಿ ವ್ಯಕ್ತಿಯೊಬ್ಬರು ಮಾನಸಿಕವಾಗಿ ಭಯಗೊಂಡಿದ್ದರು. ಹೀಗಾಗಿ ತಮಗೆ ಸೋಂಕು ಬಂದಿರಬಹುದೆಂದು ಭಾವಿಸಿ ಅದರಿಂದ ಗುಣಮುಖರಾಗಲು ಸ್ನೇಹಿತನೊಬ್ಬನ ಸಲಹೆಯಂತೆ ಸೀಮೆ ಎಣ್ಣೆ ಕುಡಿದಿದ್ದಾರೆ.

ಕೊರೊನಾದಿಂದ ಪಾರಾಗಲು ಸ್ನೇಹಿತನ ಸಲಹೆಯಂತೆ ಸೀಮೆ ಎಣ್ಣೆ ಕುಡಿದ ವ್ಯಕ್ತಿ; ಸಾವಿನ ನಂತರ ಬಂತು ನೆಗೆಟಿವ್​ ವರದಿ​
ಪ್ರಾತಿನಿಧಿಕ ಚಿತ್ರ
Skanda
|

Updated on: May 18, 2021 | 3:07 PM

Share

ಭಾರತದಲ್ಲಿ ಕೊರೊನಾ ಎರಡನೇ ಅಲೆ ಪ್ರಾರಂಭವಾದಾಗಿನಿಂದ ವೈದ್ಯಕೀಯ ಲೋಕ ಸೋಂಕು ನಿಯಂತ್ರಣದ ಕುರಿತು ತಲೆಕೆಡಿಸಿಕೊಂಡಿದೆ. ಒಂದೂವರೆ ವರ್ಷದ ಹಿಂದೆ ದೇಶದೊಳಕ್ಕೆ ಸೋಂಕು ಕಾಲಿಟ್ಟಾಗ ಇಡೀ ಸಮಾಜಕ್ಕೆ ಮಾಸ್ಕ್, ಸ್ಯಾನಿಟೈಸರ್, ಸಾಮಾಜಿಕ ಅಂತರದ ಪಾಠ ಮಾಡಲಾಗಿತ್ತಾದರೂ ನಡುವೆ ಸೋಂಕಿತರ ಪ್ರಮಾಣ ಇಳಿಮುಖವಾಗುತ್ತಿದ್ದಂತೆ ಜನ ಪ್ರತಿನಿಧಿಗಳಿಂದ ಶ್ರೀಸಾಮಾನ್ಯರ ತನಕ ಎಲ್ಲರೂ ಅದನ್ನು ಮರೆತುಬಿಟ್ಟಿದ್ದಾರೆ. ಹೀಗಾಗಿ ಈ ಬಾರಿ ಮತ್ತೆ ಮೊದಲಿನಿಂದ ಎಚ್ಚರಿಸುವ ಅನಿವಾರ್ಯತೆ ಎದುರಾಗಿದೆ. ಅದಕ್ಕಿಂತಲೂ ಬೇಸರದ ಸಂಗತಿ ಎಂದರೆ ನಮ್ಮ ದೇಶದ ಅನೇಕ ಮುಗ್ಧ ಜನರು ಕೊರೊನಾ ವಿಷಯದಲ್ಲಿ ವೈದ್ಯರು ಹಾಗೂ ತಜ್ಞರ ಸಲಹೆಗಳಿಗಿಂತ ಊಹಾಪೋಹಗಳನ್ನೇ ಹೆಚ್ಚು ಬಲವಾಗಿ ನಂಬುತ್ತಿದ್ದಾರೆ ಮತ್ತು ಅದೇ ಕಾರಣಕ್ಕಾಗಿ ಜೀವವನ್ನೂ ಕಳೆದುಕೊಳ್ಳುತ್ತಿದ್ದಾರೆ.

ಮಧ್ಯಪ್ರದೇಶದ ರಾಜಧಾನಿ ಭೋಪಾಲ್​ನಲ್ಲೂ ತಪ್ಪು ಮಾಹಿತಿಯಿಂದ ಹಾಗೂ ಕೊರೊನಾ ಭಯದಿಂದ ವ್ಯಕ್ತಿಯೊಬ್ಬ ಜೀವ ಕಳೆದುಕೊಂಡ ದಾರುಣ ಘಟನೆ ನಡೆದಿದೆ. ಕೆಲ ದಿನಗಳಿಂದ ತನ್ನ ಸುತ್ತಮುತ್ತಾಲೂ ಕೊರೊನಾ ವ್ಯಾಪಕವಾಗಿ ಹಬ್ಬುವುದನ್ನು ಹಾಗೂ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವುದನ್ನು ನೋಡಿ ವ್ಯಕ್ತಿಯೊಬ್ಬರು ಮಾನಸಿಕವಾಗಿ ಭಯಗೊಂಡಿದ್ದರು. ಹೀಗಾಗಿ ತಮಗೆ ಸೋಂಕು ಬಂದಿರಬಹುದೆಂದು ಭಾವಿಸಿ ಅದರಿಂದ ಗುಣಮುಖರಾಗಲು ಸ್ನೇಹಿತನೊಬ್ಬನ ಸಲಹೆಯಂತೆ ಸೀಮೆ ಎಣ್ಣೆ ಕುಡಿದಿದ್ದಾರೆ.

ಸೀಮೆ ಎಣ್ಣೆ ಸೇವಿಸಿದ ವ್ಯಕ್ತಿಯ ಹೆಸರು ಮಹೇಂದ್ರ ಎಂದು ತಿಳಿದುಬಂದಿದ್ದು, ಇವರು ಭೋಪಾಲ್​ನ ಅಶೋಕ್ ಗಾರ್ಡನ್ ಏರಿಯಾದಲ್ಲಿ ದರ್ಜಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ. ಸ್ನೇಹಿತನ ಸಲಹೆಯಂತೆ ಸೀಮೆ ಎಣ್ಣೆ ಕುಡಿದ ಪರಿಣಾಮ ಅವರ ಆರೋಗ್ಯ ಬಿಗಡಾಯಿಸಲಾರಂಭಿಸಿದ್ದು ಕುಟುಂಬ ಸದಸ್ಯರು ತಕ್ಷಣ ಹತ್ತಿರದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ, ಅಲ್ಲಿಂದ ಇನ್ನೊಂದು ಆಸ್ಪತ್ರೆಗೆ ವರ್ಗಾಯಿಸುವಂತೆ ವೈದ್ಯರು ತಿಳಿಸಿದ ಕಾರಣ ಬೇರೆಡೆಗೆ ತೆರಳಿದ್ದಾರೆ.

ದುರದೃಷ್ಟವಶಾತ್, ಬೇರೊಂದು ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಾಗಲೇ ಮಹೇಂದ್ರ ಕೊನೆಯುಸಿರೆಳೆದಿದ್ದು ಆಸ್ಪತ್ರೆಗೆ ತೆರಳಿದಾಗ ವೈದ್ಯರು ಮರಣ ಹೊಂದಿರುವುದಾಗಿ ತಿಳಿಸಿದ್ದಾರೆ. ಅಲ್ಲದೇ ಈ ವ್ಯಕ್ತಿ ಸಾವಿಗೀಡಾದ ನಂತರ ಅವರ ಕೊರೊನಾ ಪರೀಕ್ಷೆಯಲ್ಲಿ ನೆಗೆಟಿವ್ ವರದಿ ಬಂದಿದ್ದು, ಸ್ನೇಹಿತ ನೀಡಿದ ತಪ್ಪು ಮಾಹಿತಿಗೆ ಅಮಾಯಕರೊಬ್ಬರು ಅನ್ಯಾಯವಾಗಿ ಜೀವ ಕಳೆದುಕೊಂಡಿರುವುದು ಕುಟುಂಬಸ್ಥರನ್ನು ಶೋಕ ಸಾಗರದಲ್ಲಿ ಮುಳುಗಿಸಿದೆ.

ಇದನ್ನೂ ಓದಿ: ಹೆದರುವುದು ಬೇಡ, ಆತ್ಮಸ್ಥೈರ್ಯದಿಂದಿರಿ; ಕೊರೊನಾ ಗೆದ್ದು ಬಂದ ಒಂದೇ ಕುಟುಂಬದ 17 ಮಂದಿ

ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ
ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ
ಈಗಲೂ ಮಾತಿಗೆ ಬದ್ಧ; ಕೇಂದ್ರದಿಂದ ಅನುಮೋದನೆ ಕೊಡಿಸಲು ಸಿದ್ಧ: ಹೆಚ್ಡಿಕೆ
ಈಗಲೂ ಮಾತಿಗೆ ಬದ್ಧ; ಕೇಂದ್ರದಿಂದ ಅನುಮೋದನೆ ಕೊಡಿಸಲು ಸಿದ್ಧ: ಹೆಚ್ಡಿಕೆ