AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯಪ್ರದೇಶ: ದೇವಾಲಯದಲ್ಲಿ ಪಾರ್ಥಿಸುತ್ತಿದ್ದಾಗ ಹೃದಯಾಘಾತದಿಂದ ವ್ಯಕ್ತಿ ಸಾವು

ಗುರುವಾರ ನಡೆದ ಈ ಘಟನೆಯ ಸಿಸಿಟಿವಿ ದೃಶ್ಯ ನೋಡಿದಾಗ, ರಾಜೇಶ್ ಮೆಹಾನಿ ಎಂಬ ಸಾಯಿ ಭಕ್ತರು ದೇವಾಲಯದಲ್ಲಿ ವಿಗ್ರಹಕ್ಕೆ ಪ್ರದಕ್ಷಿಣೆ ಮಾಡುತ್ತಿರುವುದನ್ನು ತೋರಿಸುತ್ತದೆ. ನಂತರ ಅವರು ಪ್ರಾರ್ಥನೆ ಮಾಡಲು ಕುಳಿತಿದ್ದಾರೆ. ಆದರೆ ಅಲ್ಲಿಂದ ಎದ್ದೇಳಲು ಸಾಧ್ಯವಾಗಲೇ ಇಲ್ಲ

ಮಧ್ಯಪ್ರದೇಶ: ದೇವಾಲಯದಲ್ಲಿ ಪಾರ್ಥಿಸುತ್ತಿದ್ದಾಗ ಹೃದಯಾಘಾತದಿಂದ ವ್ಯಕ್ತಿ ಸಾವು
ಪ್ರಾರ್ಥಿಸುತ್ತಿದ್ದಾಗ ಹೃದಯಾಘಾತದಿಂದ ವ್ಯಕ್ತಿ ಸಾವು (ವಿಡಿಯೊದಿಂದ ಸೆರೆಹಿಡಿದ ಚಿತ್ರ) Image Credit source: NDTV
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Dec 04, 2022 | 7:25 PM

Share

ಕಟ್ನಿ (ಮಧ್ಯಪ್ರದೇಶ): ಮಧ್ಯಪ್ರದೇಶದ (Madhya Pradesh) ಕಟ್ನಿಯಲ್ಲಿ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡುತ್ತಿದ್ದಾಗ ಹೃದಯಾಘಾತದಿಂದ(heart attack) ವ್ಯಕ್ತಿಯೊಬ್ಬರು ಸಾವಿಗೀಡಾಗಿರುವ ಘಟನೆ ವರದಿಯಾಗಿದೆ. ಗುರುವಾರ ನಡೆದ ಈ ಘಟನೆಯ ಸಿಸಿಟಿವಿ ದೃಶ್ಯ ನೋಡಿದಾಗ, ರಾಜೇಶ್ ಮೆಹಾನಿ ಎಂಬ ಸಾಯಿ ಭಕ್ತರು ದೇವಾಲಯದಲ್ಲಿ ವಿಗ್ರಹಕ್ಕೆ ಪ್ರದಕ್ಷಿಣೆ ಮಾಡುತ್ತಿರುವುದನ್ನು ತೋರಿಸುತ್ತದೆ. ನಂತರ ಅವರು ಪ್ರಾರ್ಥನೆ ಮಾಡಲು ಕುಳಿತಿದ್ದಾರೆ. ಆದರೆ ಅಲ್ಲಿಂದ ಎದ್ದೇಳಲು ಸಾಧ್ಯವಾಗಲೇ ಇಲ್ಲ. ಇದು ಸೈಲೆಂಟ್ ಹಾರ್ಟ್ ಅಟ್ಯಾಕ್ ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ಸುಮಾರು 15 ನಿಮಿಷಗಳ ಕಾಲ ವ್ಯಕ್ತಿ ಪ್ರತಿಕ್ರಿಯಿಸದಿದ್ದಾಗ ದೇವಸ್ಥಾನದಲ್ಲಿದ್ದ ಇತರ ಭಕ್ತರು ಅರ್ಚಕರನ್ನು ಕರೆದರು. ನಂತರ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಲ್ಲಿಗೆ ತಲುಪಿದಾಗ ಮೃತಪಟ್ಟಿರುವುದಾಗಿ ವೈದ್ಯರು ಹೇಳಿದ್ದಾರೆ. ಅಧಿಕಾರಿಗಳ ಪ್ರಕಾರ, ಮೆಹಾನಿ ಮೆಡಿಕಲ್ ಸ್ಟೋರ್ ನಡೆಸುತ್ತಿದ್ದು, ಪ್ರತಿ ಗುರುವಾರ ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದರು.

ಶುಕ್ರವಾರ, ಮಧ್ಯಪ್ರದೇಶದ ಜಬಲ್‌ಪುರದಲ್ಲಿ ಬಸ್ ಚಾಲಕ ಹಠಾತ್ ಹೃದಯಾಘಾತದಿಂದ ಅದರ ಚಾಲಕ ಸಾವನ್ನಪ್ಪಿದ್ದು, ನಿಯಂತ್ರಣ ತಪ್ಪಿದ ಬಸ್ ಇನ್ನೊಬ್ಬ ವ್ಯಕ್ತಿಗೆ ಗುದ್ದಿ ಆ ವ್ಯಕ್ತಿಸಾವಿಗೀಡಾಗಿದ್ದರು. ಈ ಘಟನೆಯಲ್ಲಿ ಹಲವಾರು ಮಂದಿಗೆ ಗಾಯವಾಗಿತ್ತು.

ಆರೋಗ್ಯ ತಜ್ಞರ ಪ್ರಕಾರ, ಸೈಲೆಂಟ್ ಹೃದಯಾಘತವನ್ನು ಸೈಲೆಂಟ್ ಮಯೋಕಾರ್ಡಿಯಲ್ ಇನ್ಫಾರ್ಕ್ಷನ್ (SMI) ಎಂದು ಕರೆಯಲಾಗುತ್ತದೆ. ಈ ಹೃದಯಾಘಾತದ ಹೊತ್ತಲ್ಲಿ ತೀವ್ರವಾದ ಎದೆ ನೋವು, ಒತ್ತಡ, ಹಠಾತ್ ಉಸಿರಾಟದ ತೊಂದರೆ ಮತ್ತು ತಲೆತಿರುಗುವಿಕೆ ಯಾವುದೂ ಇರುವುದಿಲ್ಲ

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್