Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರಿನ ರೂಫ್​ ಮೇಲೆ ಇಬ್ಬರು ಮಕ್ಕಳನ್ನು ಮಲಗಿಸಿ ಕಾರು ಚಲಾಯಿಸಿದ ವ್ಯಕ್ತಿ ವಿರುದ್ಧ ಪ್ರಕರಣ ದಾಖಲು

ಕಾರಿನ ರೂಫ್​ ಮೇಲೆ ಇಬ್ಬರು ಮಕ್ಕಳನ್ನು ಮಲಗಿಸಿ ಕಾರು ಚಲಾಯಿಸಿದ ವ್ಯಕ್ತಿ ವಿರುದ್ಧ ಗೋವಾದಲ್ಲಿ ಪ್ರಕರಣ ದಾಖಲಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಬಳಕೆದಾರರು ಆಕ್ರೋಶ ಹೊರಹಾಕಿದ್ದಾರೆ. ಗೋವಾದ ಜನಪ್ರಿಯ ಪ್ರವಾಸಿ ತಾಣವಾದ ಪರ್ರಾ ಕೋಕೋನಟ್ ಟ್ರೀ ರಸ್ತೆಯಲ್ಲಿ ಕಪ್ಪು ಮಹೀಂದ್ರಾ ಎಕ್ಸ್‌ಯುವಿ ಚಲಿಸುತ್ತಿರುವುದನ್ನು ಕಾಣಬಹುದು, ಈ ಕಾರಿನ ಮೇಲೆ ಮಕ್ಕಳು ನಿದ್ರಿಸುತ್ತಿದ್ದಾರೆ.

ಕಾರಿನ ರೂಫ್​ ಮೇಲೆ ಇಬ್ಬರು ಮಕ್ಕಳನ್ನು ಮಲಗಿಸಿ ಕಾರು ಚಲಾಯಿಸಿದ ವ್ಯಕ್ತಿ ವಿರುದ್ಧ ಪ್ರಕರಣ ದಾಖಲು
ಕಾರುImage Credit source: News 9
Follow us
ನಯನಾ ರಾಜೀವ್
|

Updated on: Dec 29, 2023 | 8:41 AM

ಕಾರಿನ ರೂಫ್​ ಮೇಲೆ ಇಬ್ಬರು ಮಕ್ಕಳನ್ನು ಮಲಗಿಸಿ ಕಾರು ಚಲಾಯಿಸಿದ ವ್ಯಕ್ತಿ ವಿರುದ್ಧ ಗೋವಾದಲ್ಲಿ ಪ್ರಕರಣ ದಾಖಲಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಬಳಕೆದಾರರು ಆಕ್ರೋಶ ಹೊರಹಾಕಿದ್ದಾರೆ. ಗೋವಾದ ಜನಪ್ರಿಯ ಪ್ರವಾಸಿ ತಾಣವಾದ ಪರ್ರಾ ಕೋಕೋನಟ್ ಟ್ರೀ ರಸ್ತೆಯಲ್ಲಿ ಕಪ್ಪು ಮಹೀಂದ್ರಾ ಎಸ್​ಯುವಿ ಚಲಿಸುತ್ತಿರುವುದನ್ನು ಕಾಣಬಹುದು, ಈ ಕಾರಿನ ಮೇಲೆ ಮಕ್ಕಳು ನಿದ್ರಿಸುತ್ತಿದ್ದಾರೆ.

ಒಂದೊಮ್ಮೆ ಕಾರನ್ನು ಯುಟರ್ನ್​ ಮಾಡುವಾಗ ಅಥವಾ ಏಕಾಏಕಿ ಬ್ರೇಕ್ ಹಾಕಿದರೆ ಗತಿ ಏನು ಎಂದು ಜನರು ಪ್ರಶ್ನಿಸುತ್ತಿದ್ದಾರೆ. ಈ ಕಾರನ್ನು ನೋಡಿ ಗಾಬರಿಗೊಂಡ ವ್ಯಕ್ತಿಯು ಕಾರು ತಡೆದು ಚಾಲಕರನ್ನು ಪ್ರಶ್ನೆ ಮಾಡಿದ್ದಾರೆ. ಅದಕ್ಕೆ ಹಾರಿಕೆ ಉತ್ತರ ನೀಡಿದ್ದಾರೆ.

ಮಕ್ಕಳ ಸುರಕ್ಷತೆಯನ್ನು ಕಾಪಾಡುವ ಪೋಷಕರೇ ಈ ರೀತಿ ನಡೆದುಕೊಂಡಿರುವುದಕ್ಕೆ ಕೆಲವರು ಬೇಸರ ವ್ಯಕ್ತಪಡಿಸಿದ್ದಾರೆ, ಕಠಿಣ ಶಿಕ್ಷೆ ವಿಧಿಸಬೇಕು ಎಂದು ಕೇಳಿದ್ದಾರೆ.

ಮತ್ತಷ್ಟು ಓದಿ: ಬೆಂಗಳೂರು: ಕಾರಿನ ಬಾನೆಟ್​​​ ಮೇಲೆ ಬಿದ್ದ ವ್ಯಕ್ತಿಯನ್ನು 2 ಕಿ.ಮೀ. ದೂರಕ್ಕೆ ಹೊತ್ತೊಯ್ದ ಚಾಲಕಿ; ಐವರು ಅರೆಸ್ಟ್

ವೈರಲ್ ಆದ ವಿಡಿಯೋವನ್ನು ಗಮನಿಸಿದ ಗೋವಾ ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿದ್ದಾರೆ. ಮಾಪುಸಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ವಿಡಿಯೋದಲ್ಲಿ ಕಾಣಿಸಿಕೊಂಡಿರುವ ವ್ಯಕ್ತಿಯ ಪತ್ತೆಗೆ ಪ್ರಯತ್ನಗಳು ನಡೆಯುತ್ತಿವೆ. ಮಾಪುಸಾ ಸಮೀಪದ ಪರ್ರಾ ಗ್ರಾಮದ ಮದನಿಯಲ್ಲಿ ಡಿಸೆಂಬರ್ 27 ರಂದು ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಹೇಳಬೇಕಾಗಿದ್ದನ್ನು ಸರಿಯಾಗಿ ಕನ್ವೇ ಮಾಡಲು ಶಿವಕುಮಾರ್​ಗೆ ಅಗಿಲ್ಲ: ಯತೀಂದ್ರ
ಹೇಳಬೇಕಾಗಿದ್ದನ್ನು ಸರಿಯಾಗಿ ಕನ್ವೇ ಮಾಡಲು ಶಿವಕುಮಾರ್​ಗೆ ಅಗಿಲ್ಲ: ಯತೀಂದ್ರ
VIDEO: ಆಂಬ್ಯುಲೆನ್ಸ್​ಗೆ ಕರೆ ಮಾಡಿ, ಆದರೆ ಅದು ನನಗಲ್ಲ..!
VIDEO: ಆಂಬ್ಯುಲೆನ್ಸ್​ಗೆ ಕರೆ ಮಾಡಿ, ಆದರೆ ಅದು ನನಗಲ್ಲ..!
ಇದ್ದಕ್ಕಿದ್ದಂತೆ ಬಾಯ್ತೆರೆದ ರಸ್ತೆ ಕಾರು ಜಸ್ಟ್​ ಮಿಸ್, ಬೈಕ್ ಹೋಗೇಬಿಡ್ತು
ಇದ್ದಕ್ಕಿದ್ದಂತೆ ಬಾಯ್ತೆರೆದ ರಸ್ತೆ ಕಾರು ಜಸ್ಟ್​ ಮಿಸ್, ಬೈಕ್ ಹೋಗೇಬಿಡ್ತು
Daily Devotional: ಪ್ರದೂಷ ಕಾಲದ ಮಹತ್ವ ಹಾಗೂ ಹಿಂದಿನ ರಹಸ್ಯ ತಿಳಿಯಿರಿ
Daily Devotional: ಪ್ರದೂಷ ಕಾಲದ ಮಹತ್ವ ಹಾಗೂ ಹಿಂದಿನ ರಹಸ್ಯ ತಿಳಿಯಿರಿ
ಬಾಂಬೆ ಹೈಕೋರ್ಟ್​ ಆವರಣದಲ್ಲಿ ವಾಮಾಚಾರ?
ಬಾಂಬೆ ಹೈಕೋರ್ಟ್​ ಆವರಣದಲ್ಲಿ ವಾಮಾಚಾರ?
Daily Horoscope: ಈ ರಾಶಿಯವರಿಗೆ ಇಂದು ಸಾಲ ಮಾಡುವ ಸಂದರ್ಭ ಬರಬಹುದು
Daily Horoscope: ಈ ರಾಶಿಯವರಿಗೆ ಇಂದು ಸಾಲ ಮಾಡುವ ಸಂದರ್ಭ ಬರಬಹುದು