ಚಲಿಸುತ್ತಿದ್ದ ಬಸ್ಸಿನಲ್ಲಿ ಬಾಯಲ್ಲಿದ್ದ ಪಾನ್ ಉಗುಳಲು ಹೋಗಿ ವ್ಯಕ್ತಿ ಸಾವು

ಚಲಿಸುತ್ತಿದ್ದ ಬಸ್ಸಿನಲ್ಲಿ ಬಾಯಲ್ಲಿದ್ದ ಪಾನ್ ಉಗುಳಲು ಹೋಗಿ ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಪೂರ್ವಾಂಚಲ್ ಎಕ್ಸ್​ಪ್ರೆಸ್​ ವೇ ಮೂಲಕ ಬಸ್ ಹೋಗುತ್ತಿರುವಾಗ ಬಾಯಲ್ಲಿದ್ದ ಪಾನ್ ಉಗುಳಲು ಬಾಗಿಲು ಬಾಗಿಲು ತೆರೆದ ಕಾರಣ 45 ವರ್ಷದ ಪ್ರಯಾಣಿಕ ಬಸ್​ನಿಂದ ಬಿದ್ದು ಸಾವನ್ನಪ್ಪಿದ್ದಾರೆ.

ಚಲಿಸುತ್ತಿದ್ದ ಬಸ್ಸಿನಲ್ಲಿ ಬಾಯಲ್ಲಿದ್ದ ಪಾನ್ ಉಗುಳಲು ಹೋಗಿ ವ್ಯಕ್ತಿ ಸಾವು
ಬಸ್Image Credit source: Timesnow
Follow us
ನಯನಾ ರಾಜೀವ್
|

Updated on: Dec 01, 2024 | 9:54 AM

ಚಲಿಸುತ್ತಿದ್ದ ಎಸಿ ಬಸ್ಸಿನ ಬಾಗಿಲು ತೆರೆದು ಬಾಯಲ್ಲಿದ್ದ ಪಾನ್ ಉಗುಳಲು ಹೋಗಿ ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಪೂರ್ವಾಂಚಲ್ ಎಕ್ಸ್​ಪ್ರೆಸ್​ ವೇ ಮೂಲಕ ಬಸ್ ಹೋಗುತ್ತಿರುವಾಗ ಬಾಯಲ್ಲಿದ್ದ ಪಾನ್ ಉಗುಳಲು ಬಾಗಿಲು ಬಾಗಿಲು ತೆರೆದ ಕಾರಣ 45 ವರ್ಷದ ಪ್ರಯಾಣಿಕ ಬಸ್​ನಿಂದ ಬಿದ್ದು ಸಾವನ್ನಪ್ಪಿದ್ದಾರೆ.

ಈ ಘಟನೆಯು ಎಕ್ಸ್‌ಪ್ರೆಸ್‌ವೇಯ 93-ಕಿಮೀ ಮೈಲಿಗಲ್ಲಿನಲ್ಲಿ ಬೆಳಗ್ಗೆ 10.30 ರ ಸುಮಾರಿಗೆ ಬಸ್ ಅಜಂಗಢದಿಂದ ಲಕ್ನೋಗೆ ತೆರಳುತ್ತಿದ್ದಾಗ ಸಂಭವಿಸಿದೆ. ಬಸ್ ಬಾಲ್ದಿರೈ ಪೊಲೀಸ್ ಠಾಣೆ ವ್ಯಾಪ್ತಿಯ ಬಿಹಿ ಗ್ರಾಮದ ಬಳಿ ತಲುಪುತ್ತಿದ್ದಂತೆ, ಪ್ರಯಾಣಿಕನೊಬ್ಬ ಚಲಿಸುತ್ತಿದ್ದ ಬಸ್‌ನ ಬಾಗಿಲು ತೆರೆದಿದ್ದರು.

ಅವರು ತನ್ನ ಸಮತೋಲನವನ್ನು ಕಳೆದುಕೊಂಡು ರಸ್ತೆಗೆ ಬಿದ್ದು ಸಾವನ್ನಪ್ಪಿದ್ದಾರೆ. ಅವರು ಬಾಯಲ್ಲಿದ್ದ ಪಾನ್ ಉಗುಳಲು ಬಾಗಿಲು ತೆರೆದಿದ್ದರು. ಬಸ್ಸನ್ನು ತಕ್ಷಣವೇ ನಿಲ್ಲಿಸಲಾಯಿತು, ಉತ್ತರ ಪ್ರದೇಶ ಎಕ್ಸ್‌ಪ್ರೆಸ್‌ವೇಸ್ ಇಂಡಸ್ಟ್ರಿಯಲ್ ಡೆವಲಪ್‌ಮೆಂಟ್ ಅಥಾರಿಟಿ (ಯುಪಿಇಐಡಿಎ) ಅಧಿಕಾರಿಗಳು ಮತ್ತು ಪೊಲೀಸರಿಗೆ ಮಾಹಿತಿ ನೀಡಲಾಯಿತು.

ಮತ್ತಷ್ಟು ಓದಿ: ರಸ್ತೆಯಲ್ಲಿ ಆಟವಾಡುತ್ತಿದ್ದಾಗ ಟ್ರಕ್ ಅಡಿ ಸಿಲುಕಿ ಮಗು ಸಾವು; ಶಾಕಿಂಗ್ ವಿಡಿಯೋ ವೈರಲ್

ಮೃತರನ್ನು ಲಕ್ನೋದ ಚಿನ್ಹಾಟ್ ಪ್ರದೇಶದ ನಿವಾಸಿ ರಾಮ್ ಜಿವಾನ್ ಎಂದು ಗುರುತಿಸಲಾಗಿದೆ. ಅವರ ಪತ್ನಿ ಸಾವಿತ್ರಿ ಕೂಡ ಅವರೊಂದಿಗೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದರು. ಹೆಚ್ಚಿನ ತನಿಖೆಗಾಗಿ ಬಸ್ ಅನ್ನು ಪೊಲೀಸ್ ಠಾಣೆಗೆ ಕೊಂಡೊಯ್ಯಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ