ವೈದ್ಯೆ ಮೇಲಿನ ಅತ್ಯಾಚಾರ, ಕೊಲೆ ಪ್ರಕರಣ: ಪ್ರತಿಭಟನೆಯಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ
ಕೋಲ್ಕತ್ತಾದಲ್ಲಿ ನಡೆದ ವೈದ್ಯೆ ಮೇಲಿನ ಅತ್ಯಾಚಾರ,ಕೊಲೆ ಪ್ರಕರಣದ ವಿರುದ್ಧವಾಗಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಲಾಗಿದೆ. ಎಸ್ಪ್ಲೇನೇಡ್ ಕ್ರಾಸಿಂಗ್ ಬಳಿ ಈ ಘಟನೆ ನಡೆದಿದೆ. ಕೆಲವು ಪ್ರತಿಭಟನಾಕಾರರು ಆ ವ್ಯಕ್ತಿಯನ್ನು ರೆಡ್‌ಹ್ಯಾಂಡ್ ಆಗಿ ಹಿಡಿದು ಸಮೀಪದಲ್ಲಿದ್ದ ಪೊಲೀಸ್ ಸಿಬ್ಬಂದಿಗೆ ಕರೆ ಮಾಡಿದರು.
ಕೋಲ್ಕತ್ತಾದ ಆರ್ಜಿ ಕರ್ ವೈದ್ಯಕೀಯ ಕಾಲೇಜು, ಆಸ್ಪತ್ರೆಯಲ್ಲಿ ತರಬೇತಿ ನಿರತ ವೈದ್ಯೆ ಮೇಲೆ ನಡೆದ ಅತ್ಯಾಚಾರ, ಕೊಲೆ ವಿರುದ್ಧ ಜನರು ಧ್ವನಿ ಎತ್ತಿದ್ದಾರೆ. ಈ ವಿಚಾರವಾಗಿ ನಗರದಲ್ಲಿ ನಡೆಯುತ್ತಿರುವ ಪ್ರತಿಭಟನೆ ವೇಳೆ ವ್ಯಕ್ತಿಯೊಬ್ಬ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ವರದಿಯಾಗಿದೆ. ಪ್ರತಿಭಟನಾ ನಿರತ ಮಹಿಳೆ ಬಳಿ ಖಾಸಗಿ ಅಂಗಗಳನ್ನು ತೋರಿಸಿದ್ದಾನೆ.
ಎಸ್ಪ್ಲೇನೇಡ್ ಕ್ರಾಸಿಂಗ್ ಬಳಿ ಈ ಘಟನೆ ನಡೆದಿದೆ. ಕೆಲವು ಪ್ರತಿಭಟನಾಕಾರರು ಆ ವ್ಯಕ್ತಿಯನ್ನು ರೆಡ್‌ಹ್ಯಾಂಡ್ ಆಗಿ ಹಿಡಿದು ಸಮೀಪದಲ್ಲಿದ್ದ ಪೊಲೀಸ್ ಸಿಬ್ಬಂದಿಗೆ ಕರೆ ಮಾಡಿದರು. ಸುತ್ತಮುತ್ತ ಇದ್ದ ಪೊಲೀಸರು ಆ ವ್ಯಕ್ತಿಯನ್ನು ಮಾನಸಿಕ ಅಸ್ವಸ್ಥ ಎಂದು ಗುರುತಿಸಿ ಅಲ್ಲಿಂದ ತೆರಳಲು ಅವಕಾಶ ಮಾಡಿಕೊಟ್ಟರು.
ಇದರಿಂದ ಆಕ್ರೋಶಗೊಂಡ ಪ್ರತಿಭಟನಾಕಾರರು ಪೊಲೀಸರ ವಿರುದ್ಧ ವಾಗ್ದಾಳಿ ನಡೆಸಿ ಆರೋಪಿಗಳು ಹಾಗೂ ಅಧಿಕಾರಿಗಳ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.
ಮತ್ತಷ್ಟು ಓದಿ: Viral Video: ಅನುಚಿತವಾಗಿ ವರ್ತಿಸಿದ ವ್ಯಕ್ತಿಗೆ ನಡು ರಸ್ತೆಯಲ್ಲೇ ಥಳಿಸಿದ ಯುವತಿಯರು
ಮಹಿಳೆಯ ದೂರಿನ ಆಧಾರದ ಮೇಲೆ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್ 79 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸ್ ತನಿಖೆಯನ್ನು ಪ್ರಾರಂಭಿಸಲಾಗಿದೆ, ಶಂಕಿತರನ್ನು ಗುರುತಿಸಲು ಮತ್ತು ಪತ್ತೆಹಚ್ಚಲು ಅಧಿಕಾರಿಗಳು ಪ್ರದೇಶದ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸುತ್ತಿದ್ದಾರೆ.
ಈ ಘಟನೆಯು ಪ್ರತಿಭಟನಾಕಾರರಲ್ಲಿ ಕೋಪ ಮತ್ತು ಹತಾಶೆಯ ಅಲೆಯನ್ನು ಉಂಟುಮಾಡಿತು.ಮಹಿಳೆ, ಇತರ ಪ್ರತಿಭಟನಾಕಾರರೊಂದಿಗೆ, ಶಾಂತಿಯುತ ಪ್ರತಿಭಟನೆಗಳಲ್ಲಿ ಭಾಗವಹಿಸುವ ಎಲ್ಲಾ ನಾಗರಿಕರ ಸುರಕ್ಷತೆ ಮತ್ತು ಘನತೆಯನ್ನು ಖಚಿತಪಡಿಸಿಕೊಳ್ಳಲು ತ್ವರಿತ ಮತ್ತು ಬಲವಾದ ಕ್ರಮಕ್ಕೆ ಕರೆ ನೀಡಿದ್ದಾರೆ. ಇತ್ತೀಚೆಗಷ್ಟೇ ಆಸ್ಪತ್ರೆಯಲ್ಲಿ ತರಬೇತಿ ನಿರತ ವೈದ್ಯೆ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಲಾಗಿತ್ತು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ