AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಬಸ್ಸಿನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ಕೊಟ್ಟಿರುವ ವಿಡಿಯೋ ವೈರಲ್, ವ್ಯಕ್ತಿ ಆತ್ಮಹತ್ಯೆ

ಕೇರಳದಲ್ಲಿ ಮಹಿಳೆಗೆ ಬಸ್‌ನಲ್ಲಿ ಲೈಂಗಿಕ ಕಿರುಕುಳ ನೀಡಿದ ವಿಡಿಯೋ ವೈರಲ್ ಆದ ನಂತರ ಆರೋಪಿ ದೀಪಕ್ ಯು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ವಿಡಿಯೋ 20 ಲಕ್ಷಕ್ಕೂ ಹೆಚ್ಚು ವೀಕ್ಷಣೆ ಪಡೆದು, ವ್ಯಕ್ತಿಗೆ ತೀವ್ರ ಮಾನಸಿಕ ಒತ್ತಡ ತಂದಿತ್ತು. ಆನ್‌ಲೈನ್ ಟ್ರೋಲಿಂಗ್‌ನಿಂದ ತನ್ನ ಮಗ ಸತ್ತಿದ್ದಾನೆಂದು ಪೋಷಕರು ಆರೋಪಿಸಿದ್ದು, ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿದ್ದಾರೆ. ಸಾಮಾಜಿಕ ಜಾಲತಾಣಗಳ ಪರಿಣಾಮದ ಕುರಿತು ಇದು ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

Video: ಬಸ್ಸಿನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ಕೊಟ್ಟಿರುವ ವಿಡಿಯೋ ವೈರಲ್, ವ್ಯಕ್ತಿ ಆತ್ಮಹತ್ಯೆ
ದೀಪಕ್
TV9 Web
| Edited By: |

Updated on:Jan 19, 2026 | 7:16 AM

Share

ಕೋಳಿಕ್ಕೋಡ್, ಜನವರಿ 19: ಬಸ್ಸಿನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ಕೊಟ್ಟಿರುವ ವಿಡಿಯೋ ವೈರಲ್ ಆಗುತ್ತಿದ್ದಂತೆ ವ್ಯಕ್ತಿ ಆತ್ಮಹತ್ಯೆ(Suicide)ಗೆ ಶರಣಾಗಿರುವ ಘಟನೆ ಕೇರಳದಲ್ಲಿ ನಡೆದಿದೆ. ಅಲ್ಲಿನ ಲೋಕನ್ ಬಸ್ಸಿನಲ್ಲಿ ಆತನ ಪ್ರಯಾಣಿಸುತ್ತಿದ್ದಾಗ ಆತ ಲೈಂಗಿಕ ಕಿರುಕುಳ ಕೊಡುವುದನ್ನು ಮಹಿಳೆ ವಿಡಿಯೋ ಮಾಡಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದರು.

ದೀಪಕ್ ಯು ಎಂಬ ಈ ವ್ಯಕ್ತಿ ಕೋಳಿಕ್ಕೋಡ್‌ನ ಗೋವಿಂದಪುರಂ ನಿವಾಸಿ. ಬೆಳಗ್ಗೆ 7 ಗಂಟೆ ಸುಮಾರಿಗೆ ಪೋಷಕರು ಆತನನ್ನು ಎಬ್ಬಿಸಲು ಪ್ರಯತ್ನಿಸಿದಾಗ ಆತ ತನ್ನ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಹಲವು ಬಾರಿ ಬಾಗಿಲು ಬಡಿದು ಕರೆ ಮಾಡಿದರೂ ಬಲಿಪಶು ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ.

ಭಯಗೊಂಡು ಆತನ ಪೋಷಕರು ಅಕ್ಕಪಕ್ಕದ ಮನೆಯವರ ಸಹಾಯ ಪಡೆದು ಬಲವಂತವಾಗಿ ಬಾಗಿಲು ತೆರೆದಿದ್ದಾರೆ, ಅಷ್ಟರಲ್ಲಾಗಲೇ ಆಗ ಮೃತಪಟ್ಟಿದ್ದ ಎಂದು ಕುಟುಂಬದವರು ಹೇಳಿದ್ದಾರೆ. ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಆ ವ್ಯಕ್ತಿ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದರು ಎಂದು ವರದಿಯಾಗಿದೆ. 20 ಲಕ್ಷಕ್ಕೂ ಹೆಚ್ಚು ಜನರು ಇದನ್ನು ವೀಕ್ಷಿಸಿದ್ದಾರೆ. ಆನ್‌ಲೈನ್ ಪ್ರಚಾರಕ್ಕಾಗಿ ಮಹಿಳೆ ತಮ್ಮ ಮಗನನ್ನೇ ಹತ್ಯೆ ಮಾಡಿದ್ದಾಳೆ ಎಂದು ಅವರು ಆರೋಪಿಸಿದ್ದಾರೆ.

ಮತ್ತಷ್ಟು ಓದಿ: ಪತಿ ಹೊಸ ಮೊಬೈಲ್ ಕೊಡಿಸಲಿಲ್ಲ ಎಂದು ಆತ್ಮಹತ್ಯೆಗೆ ಶರಣಾದ ಪತ್ನಿ

ಕೆಲವು ದಿನಗಳ ಹಿಂದೆ ವಿಡಿಯೋ ವೈರಲ್ ಆಗಿತ್ತು. ಪಯ್ಯನ್ನೂರು ರೈಲ್ವೆ ನಿಲ್ದಾಣದಿಂದ ಬಸ್ ನಿಲ್ದಾಣಕ್ಕೆ ಜನದಟ್ಟಣೆಯ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದಾಗ ಮಹಿಳೆ ಆತ ತನ್ನನ್ನು ಹಲವು ಬಾರಿ ಅನುಚಿತವಾಗಿ ಮುಟ್ಟಿದ್ದಾಳೆ ಎಂದು ಹೇಳಿಕೊಂಡಿದ್ದಳು.

ವೈರಲ್ ವಿಡಿಯೋ

ವಿಡಿಯೋ ಅಂತರ್ಜಾಲದಲ್ಲಿ ಕಾಣಿಸಿಕೊಂಡ ತಕ್ಷಣ, ಆ ವ್ಯಕ್ತಿಯನ್ನು ಆನ್‌ಲೈನ್‌ನಲ್ಲಿ ತೀವ್ರವಾಗಿ ನಿಂದಿಸಲಾಯಿತು, ಇದು ತೀವ್ರ ಮಾನಸಿಕ ಒತ್ತಡಕ್ಕೆ ಕಾರಣವಾಯಿತು ಎಂದು ಆರೋಪಿಸಿದ್ದಾರೆ. ಅದನ್ನು ನಿಭಾಯಿಸಲು ಸಾಧ್ಯವಾಗದೆ ಆ ವ್ಯಕ್ತಿ ಈ ಕಠಿಣ ಕ್ರಮ ತೆಗೆದುಕೊಂಡಿದ್ದಾನೆ. ಆ ವ್ಯಕ್ತಿಯ ಮರಣದ ನಂತರ ವೀಡಿಯೊ ಮಾಡಿದ ಮಹಿಳೆಯಿಂದ ಇನ್ನೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಪೊಲೀಸರು ಅಸಹಜ ಸಾವಿನ ಪ್ರಕರಣ ದಾಖಲಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:12 am, Mon, 19 January 26

Follow Us
TV9 Web
TV9 Web

TV9 Kannada

Read More
ಗೃಹಲಕ್ಷ್ಮೀ, ಗೃಹಜ್ಯೋತಿಗೆ ಹೊಸ ಅರ್ಜಿಗೆ ಏನೇನು ದಾಖಲೆ ಬೇಕು?
ಗೃಹಲಕ್ಷ್ಮೀ, ಗೃಹಜ್ಯೋತಿಗೆ ಹೊಸ ಅರ್ಜಿಗೆ ಏನೇನು ದಾಖಲೆ ಬೇಕು?
ಸಹೋದರನಿಗೆ ಕೆಪಿಸಿಸಿ ಆಧ್ಯಕ್ಷ ಸ್ಥಾನ ತಪ್ಪಿದಕ್ಕೆ ಸಾಹುಕಾರ್ ಹೇಳಿದ್ದೇನು?
ಸಹೋದರನಿಗೆ ಕೆಪಿಸಿಸಿ ಆಧ್ಯಕ್ಷ ಸ್ಥಾನ ತಪ್ಪಿದಕ್ಕೆ ಸಾಹುಕಾರ್ ಹೇಳಿದ್ದೇನು?
ಕುಮಾರಸ್ವಾಮಿಯ ವಿಡಿಯೋ ರಿಲೀಸ್ ಮಾಡಿದ ಕಾಂಗ್ರೆಸ್ ಶಾಸಕ, ವಿಡಿಯೋನಲ್ಲೇನಿದೆ?
ಕುಮಾರಸ್ವಾಮಿಯ ವಿಡಿಯೋ ರಿಲೀಸ್ ಮಾಡಿದ ಕಾಂಗ್ರೆಸ್ ಶಾಸಕ, ವಿಡಿಯೋನಲ್ಲೇನಿದೆ?
ಕಿರುಕುಳ ತಾಳಲಾರದೇ ಅಧಿಕಾರಿಯ ಮುಖಕ್ಕೆ ರಾಜೀನಾಮೆ ಬಿಸಾಕಿದ ಲೇಡಿ ಸಿಬ್ಬಂದಿ
ಕಿರುಕುಳ ತಾಳಲಾರದೇ ಅಧಿಕಾರಿಯ ಮುಖಕ್ಕೆ ರಾಜೀನಾಮೆ ಬಿಸಾಕಿದ ಲೇಡಿ ಸಿಬ್ಬಂದಿ
ಬೆಂಗಳೂರಿನಲ್ಲಿ ಒಂದೇ ಒಂದು ಮಳೆಗೆ ತುಂಬಿ ಹರಿಯುತ್ತಿರೋ ಹಳ್ಳ ಕೊಳ್ಳಗಳು!
ಬೆಂಗಳೂರಿನಲ್ಲಿ ಒಂದೇ ಒಂದು ಮಳೆಗೆ ತುಂಬಿ ಹರಿಯುತ್ತಿರೋ ಹಳ್ಳ ಕೊಳ್ಳಗಳು!
ಮಂಡ್ಯದಲ್ಲಿ ಮುನಿಸು ಮರೆತ ಮೈತ್ರಿ ನಾಯಕರು
ಮಂಡ್ಯದಲ್ಲಿ ಮುನಿಸು ಮರೆತ ಮೈತ್ರಿ ನಾಯಕರು
ರಾಯಚೂರಿನಲ್ಲಿ ವರುಣನ ಆರ್ಭಟ: ಜಲಾವೃತಗೊಂಡ ರಸ್ತೆಗಳು!
ರಾಯಚೂರಿನಲ್ಲಿ ವರುಣನ ಆರ್ಭಟ: ಜಲಾವೃತಗೊಂಡ ರಸ್ತೆಗಳು!
ಗೃಹಲಕ್ಷ್ಮಿ ಅಲ್ಲ ಚುನಾವಣಾ ಲಕ್ಷ್ಮೀ: ವಿಜಯೇಂದ್ರ ವ್ಯಂಗ್ಯ
ಗೃಹಲಕ್ಷ್ಮಿ ಅಲ್ಲ ಚುನಾವಣಾ ಲಕ್ಷ್ಮೀ: ವಿಜಯೇಂದ್ರ ವ್ಯಂಗ್ಯ
ಶಾಂತಿ ಮಾತುಕತೆ ಅಂತಿಮವಾಗಿಲ್ಲ, ಇವತ್ತೇ ಸಹಿ ಹಾಕಲ್ಲ ಎಂದ ಇರಾನ್
ಶಾಂತಿ ಮಾತುಕತೆ ಅಂತಿಮವಾಗಿಲ್ಲ, ಇವತ್ತೇ ಸಹಿ ಹಾಕಲ್ಲ ಎಂದ ಇರಾನ್
ರಸ್ತೆಯಲ್ಲಿ ಕಸಗುಡಿಸಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್
ರಸ್ತೆಯಲ್ಲಿ ಕಸಗುಡಿಸಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್