Video: ಬಸ್ಸಿನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ಕೊಟ್ಟಿರುವ ವಿಡಿಯೋ ವೈರಲ್, ವ್ಯಕ್ತಿ ಆತ್ಮಹತ್ಯೆ

ಕೇರಳದಲ್ಲಿ ಮಹಿಳೆಗೆ ಬಸ್‌ನಲ್ಲಿ ಲೈಂಗಿಕ ಕಿರುಕುಳ ನೀಡಿದ ವಿಡಿಯೋ ವೈರಲ್ ಆದ ನಂತರ ಆರೋಪಿ ದೀಪಕ್ ಯು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ವಿಡಿಯೋ 20 ಲಕ್ಷಕ್ಕೂ ಹೆಚ್ಚು ವೀಕ್ಷಣೆ ಪಡೆದು, ವ್ಯಕ್ತಿಗೆ ತೀವ್ರ ಮಾನಸಿಕ ಒತ್ತಡ ತಂದಿತ್ತು. ಆನ್‌ಲೈನ್ ಟ್ರೋಲಿಂಗ್‌ನಿಂದ ತನ್ನ ಮಗ ಸತ್ತಿದ್ದಾನೆಂದು ಪೋಷಕರು ಆರೋಪಿಸಿದ್ದು, ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿದ್ದಾರೆ. ಸಾಮಾಜಿಕ ಜಾಲತಾಣಗಳ ಪರಿಣಾಮದ ಕುರಿತು ಇದು ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

Video: ಬಸ್ಸಿನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ಕೊಟ್ಟಿರುವ ವಿಡಿಯೋ ವೈರಲ್, ವ್ಯಕ್ತಿ ಆತ್ಮಹತ್ಯೆ
ದೀಪಕ್
Edited By:

Updated on: Jan 19, 2026 | 7:16 AM

ಕೋಳಿಕ್ಕೋಡ್, ಜನವರಿ 19: ಬಸ್ಸಿನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ಕೊಟ್ಟಿರುವ ವಿಡಿಯೋ ವೈರಲ್ ಆಗುತ್ತಿದ್ದಂತೆ ವ್ಯಕ್ತಿ ಆತ್ಮಹತ್ಯೆ(Suicide)ಗೆ ಶರಣಾಗಿರುವ ಘಟನೆ ಕೇರಳದಲ್ಲಿ ನಡೆದಿದೆ. ಅಲ್ಲಿನ ಲೋಕನ್ ಬಸ್ಸಿನಲ್ಲಿ ಆತನ ಪ್ರಯಾಣಿಸುತ್ತಿದ್ದಾಗ ಆತ ಲೈಂಗಿಕ ಕಿರುಕುಳ ಕೊಡುವುದನ್ನು ಮಹಿಳೆ ವಿಡಿಯೋ ಮಾಡಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದರು.

ದೀಪಕ್ ಯು ಎಂಬ ಈ ವ್ಯಕ್ತಿ ಕೋಳಿಕ್ಕೋಡ್‌ನ ಗೋವಿಂದಪುರಂ ನಿವಾಸಿ. ಬೆಳಗ್ಗೆ 7 ಗಂಟೆ ಸುಮಾರಿಗೆ ಪೋಷಕರು ಆತನನ್ನು ಎಬ್ಬಿಸಲು ಪ್ರಯತ್ನಿಸಿದಾಗ ಆತ ತನ್ನ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಹಲವು ಬಾರಿ ಬಾಗಿಲು ಬಡಿದು ಕರೆ ಮಾಡಿದರೂ ಬಲಿಪಶು ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ.

ಭಯಗೊಂಡು ಆತನ ಪೋಷಕರು ಅಕ್ಕಪಕ್ಕದ ಮನೆಯವರ ಸಹಾಯ ಪಡೆದು ಬಲವಂತವಾಗಿ ಬಾಗಿಲು ತೆರೆದಿದ್ದಾರೆ, ಅಷ್ಟರಲ್ಲಾಗಲೇ ಆಗ ಮೃತಪಟ್ಟಿದ್ದ ಎಂದು ಕುಟುಂಬದವರು ಹೇಳಿದ್ದಾರೆ.
ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಆ ವ್ಯಕ್ತಿ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದರು ಎಂದು ವರದಿಯಾಗಿದೆ. 20 ಲಕ್ಷಕ್ಕೂ ಹೆಚ್ಚು ಜನರು ಇದನ್ನು ವೀಕ್ಷಿಸಿದ್ದಾರೆ. ಆನ್‌ಲೈನ್ ಪ್ರಚಾರಕ್ಕಾಗಿ ಮಹಿಳೆ ತಮ್ಮ ಮಗನನ್ನೇ ಹತ್ಯೆ ಮಾಡಿದ್ದಾಳೆ ಎಂದು ಅವರು ಆರೋಪಿಸಿದ್ದಾರೆ.

ಮತ್ತಷ್ಟು ಓದಿ: ಪತಿ ಹೊಸ ಮೊಬೈಲ್ ಕೊಡಿಸಲಿಲ್ಲ ಎಂದು ಆತ್ಮಹತ್ಯೆಗೆ ಶರಣಾದ ಪತ್ನಿ

ಕೆಲವು ದಿನಗಳ ಹಿಂದೆ ವಿಡಿಯೋ ವೈರಲ್ ಆಗಿತ್ತು. ಪಯ್ಯನ್ನೂರು ರೈಲ್ವೆ ನಿಲ್ದಾಣದಿಂದ ಬಸ್ ನಿಲ್ದಾಣಕ್ಕೆ ಜನದಟ್ಟಣೆಯ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದಾಗ ಮಹಿಳೆ ಆತ ತನ್ನನ್ನು ಹಲವು ಬಾರಿ ಅನುಚಿತವಾಗಿ ಮುಟ್ಟಿದ್ದಾಳೆ ಎಂದು ಹೇಳಿಕೊಂಡಿದ್ದಳು.

ವೈರಲ್ ವಿಡಿಯೋ

ವಿಡಿಯೋ ಅಂತರ್ಜಾಲದಲ್ಲಿ ಕಾಣಿಸಿಕೊಂಡ ತಕ್ಷಣ, ಆ ವ್ಯಕ್ತಿಯನ್ನು ಆನ್‌ಲೈನ್‌ನಲ್ಲಿ ತೀವ್ರವಾಗಿ ನಿಂದಿಸಲಾಯಿತು, ಇದು ತೀವ್ರ ಮಾನಸಿಕ ಒತ್ತಡಕ್ಕೆ ಕಾರಣವಾಯಿತು ಎಂದು ಆರೋಪಿಸಿದ್ದಾರೆ. ಅದನ್ನು ನಿಭಾಯಿಸಲು ಸಾಧ್ಯವಾಗದೆ ಆ ವ್ಯಕ್ತಿ ಈ ಕಠಿಣ ಕ್ರಮ ತೆಗೆದುಕೊಂಡಿದ್ದಾನೆ. ಆ ವ್ಯಕ್ತಿಯ ಮರಣದ ನಂತರ ವೀಡಿಯೊ ಮಾಡಿದ ಮಹಿಳೆಯಿಂದ ಇನ್ನೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಪೊಲೀಸರು ಅಸಹಜ ಸಾವಿನ ಪ್ರಕರಣ ದಾಖಲಿಸಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Published On - 7:12 am, Mon, 19 January 26