AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಮುಖ್ಯ ಕಚೇರಿಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ

ಎಐಸಿಸಿ ಪ್ರಧಾನ ಕಚೇರಿಯ ಸಿಬ್ಬಂದಿ ವಸತಿಗೃಹದಲ್ಲಿ ವ್ಯಕ್ತಿಯೊಬ್ಬನ ಮೃತದೇಹ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಭಾನುವಾರ ಪತ್ತೆಯಾಗಿದೆ. ಮೃತನ ಹೆಸರು ಪ್ರಕಾಶ್​ ಸಿಂಗ್​(45) ಎಂದು ತಿಳಿದುಬಂದಿದೆ. ಪೊಲೀಸರು ನೀಡಿರುವ ಮಾಹಿತಿ ಪ್ರಕಾರ ಮೃತ ಪ್ರಕಾಶ್​ನ ಸಹೋದರ ಅವರಿಗೆ ಕರೆ ಮಾಡಿ ಈ ವಿಚಾರ ತಿಳಿಸಿದ್ದನಂತೆ. ಪ್ರಕಾಶ್​ ಶುಕ್ರವಾರದಿಂದ ಸಿಬ್ಬಂದಿ ವಸತಿಗೃಹದ ತನ್ನ ಕೋಣೆಯಲ್ಲಿಯೇ ಉಳಿದಿದ್ದು ಯಾವುದೇ ಕರೆಗೆ ಸ್ಪಂದಿಸುತ್ತಿರಲಿಲ್ಲ ಎಂದು ತಿಳಿಸಿದ್ದ. ಸ್ಥಳಕ್ಕೆ ಆಗಮಿಸಿದ ಪೊಲೀಸರಿಗೆ ಪ್ರಕಾಶ್​ ಮೃತದೇಹ ಕೋಣೆಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಕಂಡು ಬಂದಿದೆ. ಕೂಡಲೇ […]

ಕಾಂಗ್ರೆಸ್ ಮುಖ್ಯ ಕಚೇರಿಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ
ಪ್ರಾತಿನಿಧಿಕ ಚಿತ್ರ
KUSHAL V
| Edited By: ಸಾಧು ಶ್ರೀನಾಥ್​|

Updated on: Jul 21, 2020 | 1:19 PM

Share

ಎಐಸಿಸಿ ಪ್ರಧಾನ ಕಚೇರಿಯ ಸಿಬ್ಬಂದಿ ವಸತಿಗೃಹದಲ್ಲಿ ವ್ಯಕ್ತಿಯೊಬ್ಬನ ಮೃತದೇಹ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಭಾನುವಾರ ಪತ್ತೆಯಾಗಿದೆ. ಮೃತನ ಹೆಸರು ಪ್ರಕಾಶ್​ ಸಿಂಗ್​(45) ಎಂದು ತಿಳಿದುಬಂದಿದೆ.

ಪೊಲೀಸರು ನೀಡಿರುವ ಮಾಹಿತಿ ಪ್ರಕಾರ ಮೃತ ಪ್ರಕಾಶ್​ನ ಸಹೋದರ ಅವರಿಗೆ ಕರೆ ಮಾಡಿ ಈ ವಿಚಾರ ತಿಳಿಸಿದ್ದನಂತೆ. ಪ್ರಕಾಶ್​ ಶುಕ್ರವಾರದಿಂದ ಸಿಬ್ಬಂದಿ ವಸತಿಗೃಹದ ತನ್ನ ಕೋಣೆಯಲ್ಲಿಯೇ ಉಳಿದಿದ್ದು ಯಾವುದೇ ಕರೆಗೆ ಸ್ಪಂದಿಸುತ್ತಿರಲಿಲ್ಲ ಎಂದು ತಿಳಿಸಿದ್ದ. ಸ್ಥಳಕ್ಕೆ ಆಗಮಿಸಿದ ಪೊಲೀಸರಿಗೆ ಪ್ರಕಾಶ್​ ಮೃತದೇಹ ಕೋಣೆಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಕಂಡು ಬಂದಿದೆ. ಕೂಡಲೇ ಮೃತದೇಹವನ್ನ ರಾಮ್​ ಮನೋಹರ್​ ಲೋಹಿಯಾ ಆಸ್ಪತ್ರೆಗೆ ಸ್ಥಳಾಂತರಿಸಿದ್ದಾರೆ.

ಮೃತದೇಹದ ಪಕ್ಕ ಡೆತ್​ನೋಟ್​ ಪತ್ತೆ ಪ್ರಾಥಮಿಕ ತನಿಖೆ ಪ್ರಕಾರ ಮೃತದೇಹದ ಪಕ್ಕ ಡೆತ್​ನೋಟ್​ ಪತ್ತೆಯಾಗಿದ್ದ ವೈವಾಹಿಕ ಕಲಹವೇ ಆತ್ಮಹತ್ಯೆಗೆ ಕಾರಣ ಎಂದು ತಿಳಿದುಬಂದಿದೆ. ಕುಡಿತದ ಚಟಕ್ಕೆ ಒಳಗಾಗಿದ್ದ ಪ್ರಕಾಶ್​ನಿಂದ ಆತನ ಕುಟುಂಬ ದೂರವಾಗಿತ್ತಂತೆ. ಹೀಗಾಗಿ, ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಪ್ರಕಾಶ್​ ನೇಣಿಗೆ ಶರಣಾಗಿರಬಹುದು ಎಂದು ಹೇಳಲಾಗ್ತಿದೆ.

Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ