ರಸ್ತೆಯಲ್ಲಿ ಅಪ್ರಾಪ್ತ ಬಾಲಕಿಯ ಕೈಹಿಡಿದು ಐ ಲವ್​ ಯೂ ಎಂದಿದ್ದ ಯುವಕನಿಗೆ 2 ವರ್ಷಗಳ ಜೈಲು ಶಿಕ್ಷೆ

ರಸ್ತೆಯಲ್ಲಿ ಬಾಲಕಿಯ ಕೈ ಹಿಡಿದು ಪ್ರೇಮ ನಿವೇದನೆ ಮಾಡಿದ್ದ ವ್ಯಕ್ತಿಗೆ ಪೋಕ್ಸೋ ನ್ಯಾಯಾಲಯವು ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

ರಸ್ತೆಯಲ್ಲಿ ಅಪ್ರಾಪ್ತ ಬಾಲಕಿಯ ಕೈಹಿಡಿದು ಐ ಲವ್​ ಯೂ ಎಂದಿದ್ದ ಯುವಕನಿಗೆ 2 ವರ್ಷಗಳ ಜೈಲು ಶಿಕ್ಷೆ
ಜೈಲು

Updated on: Aug 02, 2024 | 10:24 AM

ರಸ್ತೆಯಲ್ಲಿ ಬಾಲಕಿಯ ಕೈ ಹಿಡಿದು ಐ ಲವ್ ಯೂ ಎಂದಿದ್ದ ಯುವಕನಿಗೆ ಪೋಕ್ಸೋ ನ್ಯಾಯಾಲಯವು ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. 2019ರಲ್ಲಿ ಮುಂಬೈನಲ್ಲಿ ಈ ಘಟನೆ ನಡೆದಿತ್ತು, ರಸ್ತೆಯಲ್ಲಿ ಹೋಗುತ್ತಿದ್ದ 14 ವರ್ಷದ ಬಾಲಕಿಗೆ 19 ವರ್ಷದ ಯುವಕ ಪ್ರೇಮ ನಿವೇದನೆ ಮಾಡಿದ್ದ. ಆಕೆಯ ತಾಯಿ ಪೊಲೀಸ್​ ಠಾಣೆಗೆ ಬಂದು ದೂರು ದಾಖಲಿಸಿದ್ದರು, ಅಂಗಡಿಗೆ ಹೋಗಿದ್ದ ಬಾಲಕಿ ಬರುವಾಗ ಅಳುತ್ತಾ ಬಂದಿದ್ದಳು.

ಒಬ್ಬ ವ್ಯಕ್ತಿ ತನ್ನನ್ನು ಕಟ್ಟಡದ ಮೊದಲ ಮಹಡಿಗೆ ಕರೆದೊಯ್ದು, ಅವಳ ಕೈ ಹಿಡಿದು ನಾನು ನಿನ್ನನ್ನು ಪ್ರೀತಿಸುತ್ತೇನೆ ಎಂದು ಹೇಳಿದ್ದಾಗಿ ಹುಡುಗಿ ತನ್ನ ತಾಯಿಗೆ ತಿಳಿಸಿದ್ದಳು. ಆರೋಪಿ ತಾನು ನಿರಪರಾಧಿ ಎಂದು ಹೇಳಿಕೊಂಡು ತನ್ನನ್ನು ತಾನು ಸಮರ್ಥಿಸಿಕೊಂಡಿದ್ದಾನೆ. ಘಟನೆಯ ದಿನ ಆಕೆಯೇ ನನ್ನನ್ನು ಭೇಟಿಯಾಗಲು ಕರೆದಿದ್ದಳು ಎಂದು ವಕೀಲರು ವಾದ ಮಾಡಿದ್ದಾರೆ.

ಅದಕ್ಕೆ ಪ್ರತಿಯಾಗಿ ಬಾಲಕಿಯ ಪರ ವಕೀಲರು ವಾದ ಮಂಡಿಸಿ ಒಂದೊಮ್ಮೆ ಆಕೆಗೆ ಯುವಕನ ಜತೆಗೆ ಸಂಬಂಧ ಇದ್ದಿದ್ದರೆ ಆಕೆ ತಾಯಿಗೆ ಈ ಘಟನೆಯನ್ನು ಹೇಳುತ್ತಿರಲಿಲ್ಲ ಎಂದಿದ್ದಾರೆ.

ಮತ್ತಷ್ಟು ಓದಿ: ಮನೆಗೆ ನುಗ್ಗಿ ಬುದ್ಧಿಮಾಂದ್ಯ ಮಹಿಳೆ ಮೇಲೆ ಅತ್ಯಾಚಾರ

ಘಟನೆ ಬಳಿಕ ಆಕೆಯ ತಾಯಿ ಆರೋಪಿಯೊಂದಿಗೆ ಮಾತನಾಡಲು ಹೋದಾಗ ಆತ ಬೆದರಿಕೆ ಹಾಕಿದ್ದ ಎನ್ನಲಾಗಿದೆ. ಎಲ್ಲಾ ವಾದ ಪ್ರತಿವಾದವನ್ನು ಆಲಿಸಿದ ಪೋಕ್ಸೋ ನ್ಯಾಯಾಲಯವು ಆರೋಪಿಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

 

ಶಾಲೆಯಲ್ಲಿ ಮಗುವಿಗೆ ಜನ್ಮ ನೀಡಿದ ಬಾಲಕಿ

16 ವರ್ಷದ ಬಾಲಕಿಯೊಬ್ಬಳು ಶಾಲೆಯ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಬಾಲಕಿ ಗರ್ಭಿಣಿಯಾಗಿರುವುದು ಶಾಲೆಯಲ್ಲಿ ಯಾರಿಗೂ ತಿಳಿದಿರಲಿಲ್ಲ, ಇಷ್ಟೊತ್ತಾದರೂ ಶೌಚಾಲಯದಿಂದ ಆಕೆ ಏಕೆ ಬಂದಿಲ್ಲ ಎಂದು ನೋಡಲು ಹೋದಾಗ ಆಕೆ ರಕ್ತದ ಮಡುವಿನಲ್ಲಿ ಬಿದ್ದಿದ್ದಳು, ಶಿಶು ಸಾವನಪ್ಪಿತ್ತು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
Loading...
Unable to load recommendations.
Follow Us