ಕೊರೊನಾ ಕಾಲದಲ್ಲೂ ಡಬಲ್​ ಸಂಬಳ: ಇದು ಹೇಗೆ ಸಾಧ್ಯ?

ಲಕ್ನೋ: ಕೊರೊನಾ ಕಾಲದಲ್ಲಿ ಕೆಲಸ ಕಳೆದುಕೊಂಡು ಬೀದಿಗೆ ಬಂದವರ ಸಂಖ್ಯೆಯೇ ಹೆಚ್ಚು. ಅಂಥದ್ರಲ್ಲಿ, ಒಂದೇ ಕಂಪನಿಯಿಂದ ಸತತ ಒಂದು ವರ್ಷದ ಕಾಲ ಡಬಲ್ ಸಂಬಳ ಪಡೆದ ಐನಾತಿ ನೌಕರನನ್ನು ಉತ್ತರ ಪ್ರದೇಶದ ಗ್ರೇಟರ್​ ನೋಯ್ಡಾ ಪೊಲೀಸರು ಬಂಧಿಸಿದ್ದಾರೆ. ಅರೇ ಇದು ಹೇಗೆ ಸಾಧ್ಯ ಅಂತೀರಾ? ಇಲ್ಲಿದೆ ನೋಡಿ. ಅಂದ ಹಾಗೆ, 25 ವರ್ಷದ ಆರೋಪಿ ಈ ಹಿಂದೆ ಗುತ್ತಿಗೆದಾರನೊಬ್ಬನ ಮುಖಾಂತರ ಎರಡು ವರ್ಷಗಳ ಹಿಂದೆ ಗ್ರೇಟರ್​ ನೋಯ್ಡಾದ ಕಂಪನಿಯಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದನಂತೆ. ಬಳಿಕ ನಕಲಿ ದಾಖಲೆಗಳನ್ನು ಸೃಷ್ಟಿಸಿ […]

ಕೊರೊನಾ ಕಾಲದಲ್ಲೂ ಡಬಲ್​ ಸಂಬಳ: ಇದು ಹೇಗೆ ಸಾಧ್ಯ?
Follow us
KUSHAL V
| Updated By: ಸಾಧು ಶ್ರೀನಾಥ್​

Updated on:Oct 19, 2020 | 4:29 PM

ಲಕ್ನೋ: ಕೊರೊನಾ ಕಾಲದಲ್ಲಿ ಕೆಲಸ ಕಳೆದುಕೊಂಡು ಬೀದಿಗೆ ಬಂದವರ ಸಂಖ್ಯೆಯೇ ಹೆಚ್ಚು. ಅಂಥದ್ರಲ್ಲಿ, ಒಂದೇ ಕಂಪನಿಯಿಂದ ಸತತ ಒಂದು ವರ್ಷದ ಕಾಲ ಡಬಲ್ ಸಂಬಳ ಪಡೆದ ಐನಾತಿ ನೌಕರನನ್ನು ಉತ್ತರ ಪ್ರದೇಶದ ಗ್ರೇಟರ್​ ನೋಯ್ಡಾ ಪೊಲೀಸರು ಬಂಧಿಸಿದ್ದಾರೆ. ಅರೇ ಇದು ಹೇಗೆ ಸಾಧ್ಯ ಅಂತೀರಾ? ಇಲ್ಲಿದೆ ನೋಡಿ.

ಅಂದ ಹಾಗೆ, 25 ವರ್ಷದ ಆರೋಪಿ ಈ ಹಿಂದೆ ಗುತ್ತಿಗೆದಾರನೊಬ್ಬನ ಮುಖಾಂತರ ಎರಡು ವರ್ಷಗಳ ಹಿಂದೆ ಗ್ರೇಟರ್​ ನೋಯ್ಡಾದ ಕಂಪನಿಯಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದನಂತೆ. ಬಳಿಕ ನಕಲಿ ದಾಖಲೆಗಳನ್ನು ಸೃಷ್ಟಿಸಿ ಮತ್ತೊಬ್ಬ ಗುತ್ತಿಗೆದಾರನ ಮೂಲಕ ಅದೇ ಕಂಪನಿಗೆ ನೌಕರಿಗೆ ಸೇರಿರುವ ಹಾಗೆ ಬಿಂಬಿಸಿದ್ದಾನೆ.

ಇದೇ ಐಡಿಯಾ ಬಳಸಿ ಆತ ಒಂದು ವರ್ಷದಿಂದ ಡಬಲ್​ ಸಂಬಳ ಪಡೆದು ಮಜಾ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಅಚ್ಚರಿಯ ಸಂಗತಿಯೆಂದರೆ, ಆತ ತನ್ನ ಎರಡೂ ಹುದ್ದೆಗಳಿಗೆ ಬಯೋಮೆಟ್ರಿಕ್​ ಹಾಜರಾತಿ ಸಹ ನೀಡುತ್ತಿದ್ದ ಎಂದು ಕಂಪನಿಯ HR ವಿಭಾಗವು ಮಾಹಿತಿ ನೀಡಿದೆ. ಇನ್ನು ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಎಚ್ಚೆತ್ತುಕೊಂಡ ಕಂಪನಿಯು ಪೊಲೀಸರಿಗೆ ದೂರು ನೀಡಿದೆ. ಕಂಪನಿ ನೀಡಿದ ದೂರಿನನ್ವಯ ನೌಕರನನ್ನು ಬಂಧಿಸಿದ್ದಾರೆ.

Published On - 4:15 pm, Mon, 19 October 20

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್