ಜಮ್ಮು-ಕಾಶ್ಮೀರ: ಕುಪ್ವಾರದಲ್ಲಿ ಮನೆಯ ಎದುರೇ ವ್ಯಕ್ತಿಯೊಬ್ಬರಿಗೆ ಗುಂಡು ಹಾರಿಸಿ ದುಷ್ಕರ್ಮಿ ಪರಾರಿ
ಜಮ್ಮು ಮತ್ತು ಕಾಶ್ಮೀರದ ಕುಪ್ವಾರದಲ್ಲಿ ಬಂಧೂಕುಧಾಋಇಗಳು ಸಾಮಾಜಿಕ ಕಾರ್ಯಕರ್ತರೊಬ್ಬರ ಮೇಲೆ ಗುಂಡು ಹಾರಿಸಿ ಪರಾರಿಯಾಗಿರುವ ಘಟನೆ ವರದಿಯಾಗಿದೆ. ಬಂದೂಕುಧಾರಿಗಳು ಮನೆಯ ಎದುರೇ ವ್ಯಕ್ತಿಯೊಬ್ಬನಿಗೆ ಗುಂಡು ಹಾರಿಸಿ ಪರಾರಿಯಾಗಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಕುಪ್ವಾರದ ಕಂಡಿಖಾಸ್ ಪ್ರದೇಶದಲ್ಲಿ ನಡೆದಿದೆ. ಘ್ ರಸೂಲ್ ಮಗ್ರೆ ಎಂದು ಗುರುತಿಸಲಾದ ವ್ಯಕ್ತಿಯ ಹೊಟ್ಟೆ ಮತ್ತು ಎಡ ಮಣಿಕಟ್ಟಿಗೆ ಗುಂಡೇಟು ತಗುಲಿದ್ದು, ಅವರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕುಪ್ವಾರ, ಏಪ್ರಿಲ್ 27: ಬಂದೂಕುಧಾರಿಗಳು ಮನೆಯ ಎದುರೇ ವ್ಯಕ್ತಿಯೊಬ್ಬನಿಗೆ ಗುಂಡು ಹಾರಿಸಿ ಪರಾರಿಯಾಗಿರುವ ಘಟನೆ ಜಮ್ಮು ಮತ್ತು ಕಾಶ್ಮೀರ(Jammu And Kashmir)ದ ಕುಪ್ವಾರದ ಕಂಡಿಖಾಸ್ ಪ್ರದೇಶದಲ್ಲಿ ನಡೆದಿದೆ. ರಸೂಲ್ ಮಗ್ರೆ ಎಂದು ಗುರುತಿಸಲಾದ ವ್ಯಕ್ತಿಯ ಹೊಟ್ಟೆ ಮತ್ತು ಎಡ ಮಣಿಕಟ್ಟಿಗೆ ಗುಂಡೇಟು ತಗುಲಿದ್ದು, ಅವರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅವರು ಸಾಮಾಜಿಕ ಕಾರ್ಯಕರ್ತರಾಗಿದ್ದು, ಬಂದೂಕುಧಾರಿಗಳು ಸಾಮಾಜಿಕ ಕಾರ್ಯಕರ್ತರನ್ನು ಏಕೆ ಗುರಿಯಾಗಿಸಿಕೊಂಡರು ಎಂಬುದು ಸ್ಪಷ್ಟವಾಗಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ. ಇತ್ತೀಚಿನ ಪಹಲ್ಗಾಮ್ ಭಯೋತ್ಪಾದಕ ದಾಳಿ ಮತ್ತು ಈ ಪ್ರದೇಶದಲ್ಲಿ ಮಿಲಿಟರಿ ಚಟುವಟಿಕೆ ಹೆಚ್ಚಿದೆ.
ಈಗಾಗಲೇ ಹೆಚ್ಚಿನ ಕಟ್ಟೆಚ್ಚರದಲ್ಲಿರುವ ಭದ್ರತಾ ಪಡೆಗಳು , ಗುಂಡಿನ ದಾಳಿಯ ಬಗ್ಗೆ ಮಾಹಿತಿ ಪಡೆದ ನಂತರ ಘಟನಾ ಸ್ಥಳಕ್ಕೆ ತಲುಪಿದವು. ಬಂದೂಕುಧಾರಿಗಳು ನಾಗರಿಕರ ಮೇಲೆ ಗುಂಡು ಹಾರಿಸಿದ ಹಿಂದಿನ ಉದ್ದೇಶ ಇನ್ನೂ ತಿಳಿದುಬಂದಿಲ್ಲ.
ಮತ್ತಷ್ಟು ಓದಿ: ಪಹಲ್ಗಾಮ್ ದಾಳಿಯಿಂದ ಹೆಚ್ಚಿದ ಉದ್ವಿಗ್ನತೆ; ರಾಜಸ್ಥಾನ ಗಡಿಯ ಬಂಕರ್ಗಳಲ್ಲಿ ಪಾಕಿಸ್ತಾನದ ಸೇನೆ ನಿಯೋಜನೆ
ಏಪ್ರಿಲ್ 22 ರಂದು ಪಹಲ್ಗಾಮ್‌ನಲ್ಲಿ ನಾಗರಿಕರ ಮೇಲೆ ನಡೆದ ದಾಳಿಯ ನಂತರ, 26 ಜನರು ಸಾವನ್ನಪ್ಪಿದ್ದರು. ಶುಕ್ರವಾರ, ದಕ್ಷಿಣ ಕಾಶ್ಮೀರದ ಕುಲ್ಗಮ್ ಜಿಲ್ಲೆಯ ಗುಡ್ಡಾರ್ ಅರಣ್ಯ ಪ್ರದೇಶದಲ್ಲಿ ಎನ್‌ಕೌಂಟರ್ ನಡೆಯಿತು . ಈ ಪ್ರದೇಶದಲ್ಲಿ ಭಯೋತ್ಪಾದಕರು ಇರುವ ಬಗ್ಗೆ ಗುಪ್ತಚರ ಮಾಹಿತಿ ಪಡೆದ ನಂತರ ಭದ್ರತಾ ಪಡೆಗಳು ಜಂಟಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದವು. ಕಾರ್ಯಾಚರಣೆ ಮುಂದುವರೆದಿದ್ದು, ಇಬ್ಬರು ಭಯೋತ್ಪಾದಕರು ಸಿಕ್ಕಿಬಿದ್ದಿರುವ ಶಂಕೆ ವ್ಯಕ್ತವಾಗಿದೆ.
ಗುರುವಾರ, ಬಂಡಿಪೋರಾದ ಚೆಕ್‌ಪಾಯಿಂಟ್‌ನಲ್ಲಿ ಪಾಕಿಸ್ತಾನ ಮೂಲದ ಲಷ್ಕರ್-ಎ-ತೈಬಾ (ಎಲ್‌ಇಟಿ) ಜೊತೆ ಸಂಪರ್ಕ ಹೊಂದಿರುವ ಮೂವರು ಭಯೋತ್ಪಾದಕ ಸಹಚರರನ್ನು ಬಂಧಿಸಲಾಯಿತು. ಗರೂರಾ ಹಾಜಿನ್ ಪ್ರದೇಶದಲ್ಲಿ ಭದ್ರತಾ ಸಿಬ್ಬಂದಿ ಅವರಿಂದ ಒಂದು ಚೀನೀ ಪಿಸ್ತೂಲ್, ಎರಡು ಮ್ಯಾಗಜೀನ್‌ಗಳು, ಹಲವಾರು ಸುತ್ತುಗಳು ಮತ್ತು ಹ್ಯಾಂಡ್ ಗ್ರೆನೇಡ್‌ಗಳನ್ನು ವಶಪಡಿಸಿಕೊಂಡಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 7:46 am, Sun, 27 April 25