AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ಯಾಚಾರ ಯತ್ನ ವಿಫಲ, ಕೋಪದಲ್ಲಿ ಬಾಲಕಿಯ ಖಾಸಗಿ ಭಾಗಕ್ಕೆ ರಾಡ್ ಹಾಕಿದ ವ್ಯಕ್ತಿ

ವ್ಯಕ್ತಿಯೊಬ್ಬ ಆರು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ಗುಜರಾತ್​ನ ರಾಜ್​ಕೋಟ್​ನಲ್ಲಿ ನಡೆದಿದೆ. ಆರು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ನಂತರ ಕ್ರೂರವಾಗಿ ಹಲ್ಲೆ ನಡೆಸಲಾಗಿದೆ. ಕೊನೆಗೂ ಪೊಲೀಸರು ಹುಡುಕಾಟ ನಡೆಸಿ 35 ವರ್ಷದ ವ್ಯಕ್ತಿಯನ್ನು ಬಂಧಿಸಿದ್ದಾರೆ. ದಾಹೋದ್ ಜಿಲ್ಲೆಯ ಒಂದು ಕುಟುಂಬ ಕೃಷಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಅಟ್ಕೋಟ್‌ನಲ್ಲಿ ಈ ಘಟನೆ ನಡೆದಿತ್ತು.

ಅತ್ಯಾಚಾರ ಯತ್ನ ವಿಫಲ, ಕೋಪದಲ್ಲಿ ಬಾಲಕಿಯ ಖಾಸಗಿ ಭಾಗಕ್ಕೆ ರಾಡ್ ಹಾಕಿದ ವ್ಯಕ್ತಿ
ಕ್ರೈಂImage Credit source: The Hindu
ನಯನಾ ರಾಜೀವ್
|

Updated on: Dec 10, 2025 | 8:54 AM

Share

ರಾಜ್​ಕೋಟ್​, ಡಿಸೆಂಬರ್ 10: ಅತ್ಯಾಚಾರ(Rape) ಯತ್ನ ವಿಫಲವಾಗಿದ್ದಕ್ಕೆ ಕೋಪಗೊಂಡ ಆರೋಪಿ ಬಾಲಕಿಯ ಖಾಸಗಿ ಭಾಗಕ್ಕೆ ರಾಡ್ ಹಾಕಿರುವ ಅಮಾನವೀಯ ಘಟನೆ ಗುಜರಾತ್​ನ ರಾಜ್​ಕೋಟ್​ನಲ್ಲಿ ನಡೆದಿದೆ. ಆರು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ನಂತರ ಕ್ರೂರವಾಗಿ ಹಲ್ಲೆ ನಡೆಸಲಾಗಿದೆ. ಕೊನೆಗೂ ಪೊಲೀಸರು ಹುಡುಕಾಟ ನಡೆಸಿ 35 ವರ್ಷದ ವ್ಯಕ್ತಿಯನ್ನು ಬಂಧಿಸಿದ್ದಾರೆ. ದಾಹೋದ್ ಜಿಲ್ಲೆಯ ಒಂದು ಕುಟುಂಬ ಕೃಷಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಅಟ್ಕೋಟ್‌ನಲ್ಲಿ ಈ ಘಟನೆ ನಡೆದಿತ್ತು.

ಡಿಸೆಂಬರ್ 4 ರಂದು ಮಗು ಹೊಲದ ಬಳಿ ಆಟವಾಡುತ್ತಿದ್ದಾಗ ಆಕೆಯ ಪೋಷಕರು ಹತ್ತಿರದಲ್ಲೇ ಕೆಲಸ ಮಾಡುತ್ತಿದ್ದರು. ಅಪರಿಚಿತ ವ್ಯಕ್ತಿಯೊಬ್ಬರು ಆಕೆಯನ್ನು ಅಪಹರಿಸಿ ಅತ್ಯಾಚಾರಕ್ಕೆ ಯತ್ನಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಮಗು ಕಿರುಚಿದಾಗ, ದಾಳಿಕೋರನು ಲೋಹದ ರಾಡ್ ಅನ್ನು ಆಕೆಯ ಖಾಸಗಿ ಭಾಗಗಳಿಗೆ ತುರುಕಿ ತೀವ್ರ ರಕ್ತಸ್ರಾವ ಉಂಟುಮಾಡಿ ಸ್ಥಳದಿಂದ ಪರಾರಿಯಾಗಿದ್ದ ಎನ್ನಲಾಗಿದೆ.

ಕುಟುಂಬವು ಆಕೆಯನ್ನು ಹುಡುಕಲು ಪ್ರಾರಂಭಿಸಿದಾಗ ಆಕೆ ಹೊಲದ ಮಧ್ಯೆ ಬಿದ್ದಿರುವುದನ್ನು ನೋಡಿದ್ದಾರೆ.ತೀವ್ರ ರಕ್ತಸ್ರಾವವಾಗುತ್ತಿದ್ದ ಆಕೆಯನ್ನು ರಾಜ್‌ಕೋಟ್‌ನ ಜನ್ನಾ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆಸ್ಪತ್ರೆಯ ಮೂಲಗಳ ಪ್ರಕಾರ, ಆಕೆಯ ಸ್ಥಿತಿ ಪ್ರಸ್ತುತ ಸ್ಥಿರವಾಗಿದ್ದು, ಮುಂದಿನ ಎರಡು ಮೂರು ದಿನಗಳಲ್ಲಿ ಆಕೆಯನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡುವ ಸಾಧ್ಯತೆಯಿದೆ.

ಮತ್ತಷ್ಟು ಓದಿ: ಕೌಟುಂಬಿಕ ನ್ಯಾಯಾಲಯದ ಆವರಣದಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ

ರಾಜ್‌ಕೋಟ್ ಗ್ರಾಮೀಣ ಪೊಲೀಸ್ ವರಿಷ್ಠಾಧಿಕಾರಿ ವಿಜಯಸಿಂಹ ಗುರ್ಜರ್ ಮಾತನಾಡಿ, ಪೊಲೀಸರು ತೀವ್ರ ಶೋಧ ಕಾರ್ಯಾಚರಣೆ ನಡೆಸಿ, ಸುಮಾರು 10 ತಂಡಗಳನ್ನು ರಚಿಸಿ, ಸುಮಾರು 100 ಶಂಕಿತರನ್ನು ವಿಚಾರಣೆ ನಡೆಸಿದ್ದಾರೆ. ಗುರುತಿನ ಪ್ರಕ್ರಿಯೆಯ ಭಾಗವಾಗಿ, ಅಧಿಕಾರಿಗಳು ಮಕ್ಕಳ ತಜ್ಞರ ಸಮ್ಮುಖದಲ್ಲಿ ಸುಮಾರು 10 ವ್ಯಕ್ತಿಗಳನ್ನು ಮಗುವಿನ ಮುಂದೆ ಹಾಜರುಪಡಿಸಿದರು.

ಮಧ್ಯಪ್ರದೇಶದ ಅಲಿರಾಜ್‌ಪುರ ಜಿಲ್ಲೆಯ ಕೃಷಿ ಕೆಲಸಗಾರ ರಾಮಸಿಂಗ್ ತೆರಾಸಿಂಗ್ ದದ್ವೇಜರ್ ಅವರನ್ನು ಹಲ್ಲೆಕೋರ ಎಂದು ಹುಡುಗಿ ಗುರುತಿಸಿದ್ದಾಳೆ. ವಿವಾಹಿತ ಮತ್ತು ಮೂವರು ಮಕ್ಕಳಿರುವ ದದ್ವೇಜರ್ ಅವರನ್ನು ಅಪರಾಧ ಸ್ಥಳದ ಪಕ್ಕದ ಹೊಲದಿಂದ ಬಂಧಿಸಲಾಗಿದೆ ಎಂದು ಗುರ್ಜರ್ ದೃಢಪಡಿಸಿದ್ದಾರೆ.

ತನಿಖೆಯಲ್ಲಿ ಆತನನ್ನು ಬಿಟ್ಟು ಬೇರೆ ಯಾರೂ ಭಾಗಿಯಾಗಿರುವ ಕುರಿತು ಮಾಹಿತಿ ಲಭ್ಯವಾಗಿಲ್ಲ. ಆರೋಪಿಯ ವಿರುದ್ಧ ಮುಂದಿನ ಕಾನೂನು ಕ್ರಮ ಕೈಗೊಳ್ಳುವುದರ ಜೊತೆಗೆ ಪೊಲೀಸರು ಬಾಲಕಿಯ ಆರೋಗ್ಯದ ಮೇಲೆ ನಿಗಾ ಇಡಲಿದ್ದಾರೆ.

ರಾಷ್ಟ್ರಿಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ