Ludhiana Blast: ಲೂಧಿಯಾನಾ ಕೋರ್ಟ್ ದಾಳಿ ನಡೆಸಿದ್ದು ಒಬ್ಬ ಮಾಜಿ ಪೊಲೀಸ್; ಶಂಕಿತ ಆರೋಪಿಯ ಸಹೋದರ ವಶಕ್ಕೆ: ವರದಿ

ಪಂಜಾಬ್​ನ ಲೂಧಿಯಾನಾದ ಕೋರ್ಟ್ ಆವರಣದಲ್ಲಿ ಸ್ಫೋಟಕ್ಕೆ ಕಾರಣನಾದ ವ್ಯಕ್ತಿಯನ್ನು ಗುರುತಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಅಚ್ಚರಿಯ ಸಂಗತಿಯೆಂದರೆ ಆತ ಮಾಜಿ ಪೊಲೀಸ್ ಆಗಿದ್ದ ಎಂದು ಹೇಳಲಾಗಿದೆ.

Ludhiana Blast: ಲೂಧಿಯಾನಾ ಕೋರ್ಟ್ ದಾಳಿ ನಡೆಸಿದ್ದು ಒಬ್ಬ ಮಾಜಿ ಪೊಲೀಸ್; ಶಂಕಿತ ಆರೋಪಿಯ ಸಹೋದರ ವಶಕ್ಕೆ: ವರದಿ
ಸ್ಫೋಟಕ್ಕೆ ಕಾರಣ ಎಂದು ಶಂಕಿಸಲಾಗಿರುವ ಗಗನ್​ದೀಪ್ ಸಿಂಗ್ (ಎಡ), ಸ್ಫೋಟದ ದಿನ ಲೂಧಿಯಾನ ಕೋರ್ಟ್ ಆವರಣ (ಬಲ)
Follow us
TV9 Web
| Updated By: shivaprasad.hs

Updated on:Dec 25, 2021 | 10:23 AM

ಪಂಜಾಬ್‌ನ ಲೂಧಿಯಾನದ ನ್ಯಾಯಾಲಯದಲ್ಲಿ (Ludhiana Court) ನಡೆದ ಸ್ಫೋಟದಲ್ಲಿ ಸಾವನ್ನಪ್ಪಿದ ವ್ಯಕ್ತಿಯ ಗುರುತು ಪತ್ತೆ ಹಚ್ಚಲಾಗಿದೆ. ಆತನೇ ಬಾಂಬರ್ ಎಂದು ಶಂಕಿಸಲಾಗಿದ್ದು, ಅಚ್ಚರಿಯೆಂಬಂತೆ ಆತ ಮಾಜಿ ಪೊಲೀಸ್ (Ex Cop) ಅಧಿಕಾರಿಯಾಗಿದ್ದ ಎಂದು ಮೂಲಗಳು ತಿಳಿಸಿದ್ದನ್ನು ಎನ್​ಡಿಟಿವಿ ಉಲ್ಲೇಖಿಸಿದೆ. ಬಾಂಬರ್‌ನ ದೇಹವನ್ನು ಮಾಜಿ ಪೊಲೀಸ್ ಗಗನ್‌ದೀಪ್ ಸಿಂಗ್ ಎಂದು ಗುರುತಿಸಲಾಗಿದೆ. ಹೆಡ್ ಕಾನ್‌ಸ್ಟೆಬಲ್ ಆಗಿದ್ದ ಆತನನ್ನು 2019 ರಲ್ಲಿ ಸೇವೆಯಿಂದ ವಜಾಗೊಳಿಸಲಾಗಿತ್ತು. ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿತಸಲ್ಪಟ್ಟಿದ ಆತ ನಂತರ ಎರಡು ವರ್ಷಗಳ ಕಾಲ ಜೈಲಿನಲ್ಲಿದ್ದ. ಸೆಪ್ಟೆಂಬರ್​ನಲ್ಲಿ ಬಿಡುಗಡೆ ಮಾಡಲಾಗಿತ್ತು ಎಂದು ಹೇಳಲಾಗಿದೆ. ಗಗನ್​ದೀಪ್ ಸಿಂಗ್​ನ ಸಿಮ್ ಕಾರ್ಡ್ ಮತ್ತು ವೈರ್‌ಲೆಸ್ ಡಾಂಗಲ್ ಮೂಲಕ ಆತನ ಗುರುತು ಪತ್ತೆಹಚ್ಚಲು ಸಾಧ್ಯವಾಯಿತು ಎಂದು ಹೇಳಲಾಗಿದೆ. ಕುಟುಂಬಸ್ಥರೂ ಕೂಡ ದೇಹ ಗಗನ್​ದೀಪ್​ದೇ ಎಂದು ಖಚಿತಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಆರೋಪಿಯ ಸಹೋದರ ವಶಕ್ಕೆ: ಡಿ.23ರಂದು ಲೂಧಿಯಾನ ಕೋರ್ಟ್‌ ಕಾಂಪ್ಲೆಕ್ಸ್‌ನಲ್ಲಿ ನಡೆದಿದ್ದ ಸ್ಫೋಟಕ್ಕೆ ಸಂಬಂಧಪಟ್ಟಂತೆ ಮೃತಪಟ್ಟ ಶಂಕಿತ ಆರೋಪಿಯ ಸಹೋದರನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಲ್ಯಾಪ್​ಟಾಪ್ ಹಾಗೂ ಮೊಬೈಲ್ ವಶಪಡಿಸಿಕೊಳ್ಳಲಾಗಿದೆ. ಸ್ಫೋಟದಲ್ಲಿ ಆರ್​ಡಿಎಕ್ಸ್ ಬಳಸಿರುವುದು ಪತ್ತೆಯಾಗಿದೆ.

ಭಯೋತ್ಪಾದಕರ ಕೈವಾಡ ಅಲ್ಲಗಳೆದಿದ್ದ ಪಂಜಾಬ್ ಮುಖ್ಯಮಂತ್ರಿ: ಪಂಜಾಬ್ ಮುಖ್ಯಮಂತ್ರಿ ಚರಣ್​ಜಿತ್ ಸಿಂಗ್ ಚನ್ನಿ ಸ್ಫೋಟದಲ್ಲಿ ಪಾಕಿಸ್ತಾನಿ ಏಜೆನ್ಸಿಗಳು ಅಥವಾ ಖಲಿಸ್ತಾನಿ ಗುಂಪುಗಳು ಭಾಗಿಯಾಗಿರುವ ಬಗ್ಗೆ ಯಾವುದೇ ಪುರಾವೆಗಳಿಲ್ಲ ಎಂದು ಹೇಳಿಕೆ ನೀಡಿದ್ದರು. ಅಲ್ಲದೇ ಈ ಪ್ರಕರಣದಲ್ಲಿ ಮಾಜಿ ಸಚಿವ ಬಿಕ್ರಮ್ ಮಜಿಥಿಯಾ ಅವರ ಡ್ರಗ್ಸ್ ಪ್ರಕರಣಕ್ಕೆ ಥಳಕು ಹಾಕಿಕೊಂಡಿರುವ ಸಾಧ್ಯತೆ ಇದೆ ಎಂದು ಅವರು ಹೇಳಿದ್ದರು. ಅಲ್ಲದೇ ಇದೊಂದು ಸಾಧ್ಯತೆ ಎಂದು ಪರಿಗಣಿಸಲಾಗಿದೆ ಎಂದಿದ್ದ ಚನ್ನಿ, ಇದಕ್ಕೆ ಪೂರಕವಾಗಿ ವಾದವೊಂದನ್ನು ಮುಂದಿಟ್ಟಿದ್ದರು. ಮೊಹಾಲಿಯಲ್ಲಿ ಮಜಿಥಿಯಾ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗಲೇ ಲೂಧಿಯಾನಾದಲ್ಲಿ ಸ್ಫೋಟ ಸಂಭವಿಸಿದೆ. ಈ ಕುರಿತು ಮತ್ತಷ್ಟು ತನಿಖೆಯ ಅಗತ್ಯವಿದೆ ಎಂದಿದ್ದರು.

ಅಕಾಲಿದಳದ ನಾಯಕ ಬಿಕ್ರಮ್ ಮಜಿಥಿಯಾ ಅವರು ತಮ್ಮ ಆಸ್ತಿಯ ಮೂಲಕ ಮಾದಕ ವಸ್ತು ಕಳ್ಳಸಾಗಣೆಗೆ ಅವಕಾಶ ಮಾಡಿಕೊಟ್ಟಿದ್ದ ಕ್ರಿಮಿನಲ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಜಿಥಿಯಾ ನಿರೀಕ್ಷಣಾ ಜಾಮೀನು ಕೋರಿದ್ದರು. ಅದರ ವಿಚಾರಣೆ ಮೊಹಾಲಿಯಲ್ಲಿ ನಡೆಯುತ್ತಿತ್ತು.

ಪ್ರಕರಣದಲ್ಲಿ ಭಯೋತ್ಪಾದಕರ ಕೈವಾಡವನ್ನು ಅಲ್ಲಗಳೆದಿದ್ದಕ್ಕಾಗಿ ಚನ್ನಿ ಅವರನ್ನು ಅಮರಿಂದರ್ ಸಿಂಗ್ ಸೇರಿದಂತೆ ಹಲವು ನಾಯಕರು ಟೀಕಿಸಿದ್ದರು. ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಭಾರತದ ಒಳಗೆ ಅಥವಾ ಹೊರಗೆ ಕಾರ್ಯನಿರ್ವಹಿಸುತ್ತಿರುವ ಶಕ್ತಿಗಳಿಂದ ಪಂಜಾಬ್​ಅನ್ನು ಅಸ್ಥಿರಗೊಳಿಸಲು ಬಿಡುವುದಿಲ್ಲ ಎಂದು ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು.

ಇದನ್ನೂ ಓದಿ:

ಕಪುರ್ತಲಾದಲ್ಲಿ ಹತ್ಯೆಗೀಡಾದ ಯುವಕ ಅಪಚಾರವೆಸಗಿಲ್ಲ: ಪಂಜಾಬ್ ಸಿಎಂ ಚರಣ್​​​​ಜಿತ್ ಸಿಂಗ್ ಚನ್ನಿ

Omicron: ಭಾರತದಲ್ಲಿ ಒಮಿಕ್ರಾನ್ ಕೇಸ್ ಎರಡೇ ತಿಂಗಳಲ್ಲಿ 10 ಲಕ್ಷಕ್ಕೇರುವ ಸಾಧ್ಯತೆ; ಇದನ್ನು ನಿಯಂತ್ರಿಸಲು ತಿಂಗಳ ಸಮಯವೂ ಉಳಿದಿಲ್ಲ: ಡಾ.ಅನೀಶ್

Published On - 9:38 am, Sat, 25 December 21

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್