ಸೋಷಿಯಲ್ ಮೀಡಿಯಾ ಬಳಸಿದ್ದಕ್ಕಾಗಿ ಹೆಂಡತಿಯನ್ನೇ ಕೊಂದ ಗಂಡ

|

Updated on: Sep 14, 2024 | 4:38 PM

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ರಜಾಪುರ ಪ್ರದೇಶದಲ್ಲಿ ಸಾಮಾಜಿಕ ಜಾಲತಾಣವನ್ನು ಬಳಸಿದ್ದಕ್ಕೆ ಗಂಡನೇ ತನ್ನ ಪತ್ನಿಯನ್ನು ಕೊಲೆ ಮಾಡಿದ್ದಾನೆ. ಈ ಘಟನೆ ಸುತ್ತಮುತ್ತಲೂ ಆತಂಕ ಸೃಷ್ಟಿಸಿದೆ ಮತ್ತು ತೀವ್ರ ಚರ್ಚೆ ಹುಟ್ಟುಹಾಕಿದೆ.

ಸೋಷಿಯಲ್ ಮೀಡಿಯಾ ಬಳಸಿದ್ದಕ್ಕಾಗಿ ಹೆಂಡತಿಯನ್ನೇ ಕೊಂದ ಗಂಡ
ಸಾಂದರ್ಭಿಕ ಚಿತ್ರ
Follow us on

ನವದೆಹಲಿ: ದೆಹಲಿಯಲ್ಲಿ ಸಾಮಾಜಿಕ ಮಾಧ್ಯಮವನ್ನು ಬಳಸಿದ್ದಕ್ಕಾಗಿ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಕತ್ತು ಹಿಸುಕಿ ಕೊಂದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯನ್ನು ದೆಹಲಿಯ ರಾಜಾಪುರ ಪ್ರದೇಶದ ನಿವಾಸಿ 33 ವರ್ಷದ ರಾಮ್ ಕುಮಾರ್ ಎಂದು ಗುರುತಿಸಲಾಗಿದೆ.

ಈ ವಿಷಯದ ಬಗ್ಗೆ ಹೆಚ್ಚಿನ ವಿಚಾರಣೆ ನಡೆಸಿದ ನಂತರ, ಅವರ ಪತ್ನಿ ಸಾಮಾಜಿಕ ಮಾಧ್ಯಮದಲ್ಲಿ ಹೆಚ್ಚು ಸಕ್ರಿಯರಾಗಿದ್ದರು ಎಂದು ತಿಳಿದುಬಂದಿದೆ. ಇದೇ ಜಗಳಕ್ಕೆ ಕಾರಣವಾಯಿತು, ಬಳಿಕ ಕೊಲೆ ನಡೆಯಿತು ಎನ್ನಲಾಗಿದೆ.

ಇದನ್ನೂ ಓದಿ: ವೈದ್ಯೆಯ ಅತ್ಯಾಚಾರ, ಕೊಲೆ ಪ್ರಕರಣ; ಜನರಿಗಾಗಿ ರಾಜೀನಾಮೆ ನೀಡಲು ಮುಂದಾದ ಮಮತಾ ಬ್ಯಾನರ್ಜಿ

ರೋಹಿಣಿ ಹೆಚ್ಚುವರಿ ಉಪ ಪೊಲೀಸ್ ಆಯುಕ್ತ (ಡಿಸಿಪಿ) ಪಂಕಜ್ ಕುಮಾರ್ ಈ ಬಗ್ಗೆ ಮಾಹಿತಿ ನೀಡಿದ್ದು, ಪ್ರಶಾಂತ್ ವಿಹಾರದಲ್ಲಿ ಕೊಲೆ ಪ್ರಕರಣ ವರದಿಯಾಗಿದೆ. ಇದರಲ್ಲಿ ರಜಾಪುರದ 33 ವರ್ಷದ ರಾಮ್ ಕುಮಾರ್ ಎಂಬ ವ್ಯಕ್ತಿ ತನ್ನನ್ನು ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಹೆಂಡತಿಯನ್ನು ಕತ್ತು ಹಿಸುಕಿ ಕೊಂದಿದ್ದಾನೆ ಎಂದಿದ್ದಾರೆ.

ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ