AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯಪ್ರದೇಶ: ಪತ್ನಿಯ ಕೊಂದು ಆತ್ಮಹತ್ಯೆ ಮಾಡಿಕೊಂಡ ಪತಿ, ಮೊಮ್ಮಗನ ಚಿತೆಗೆ ಹಾರಿ ಪ್ರಾಣಬಿಟ್ಟ ಅಜ್ಜ

ಅಜ್ಜ ಮೊಮ್ಮಗನ ಚಿತೆಗೆ ಹಾರಿ ಪ್ರಾಣಬಿಟ್ಟಿರುವ ಘಟನೆ ಮಧ್ಯಪ್ರದೇಶದ ಸಿಧಿಯಲ್ಲಿ ನಡೆದಿದೆ. ವ್ಯಕ್ತಿಯೊಬ್ಬ ತನ್ನ ಪತ್ನಿಯ ಕೊಂದು ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಧ್ಯಪ್ರದೇಶದ ಸಿಧಿ ಜಿಲ್ಲೆಯಲ್ಲಿ ನಡೆದಿದೆ. ಕೊನೆಗೆ ಆ ವ್ಯಕ್ತಿಯ ಅಂತ್ಯ ಸಂಸ್ಕಾರ ನಡೆಯುವ ಸಂದರ್ಭದಲ್ಲಿ ಮೊಮ್ಮಗನ ಚಿತೆಗೆ ಅಜ್ಜ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬಹ್ರಿ ಪೊಲೀಸ್ ಠಾಣೆ ವ್ಯಾಪ್ತಿಯ ಸಿಹೋಲಿಯಾ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಮಧ್ಯಪ್ರದೇಶ: ಪತ್ನಿಯ ಕೊಂದು ಆತ್ಮಹತ್ಯೆ ಮಾಡಿಕೊಂಡ ಪತಿ, ಮೊಮ್ಮಗನ ಚಿತೆಗೆ ಹಾರಿ ಪ್ರಾಣಬಿಟ್ಟ ಅಜ್ಜ
ಬೆಂಕಿImage Credit source: Business Standard
ನಯನಾ ರಾಜೀವ್
|

Updated on: Mar 09, 2025 | 7:47 AM

Share

ಮಧ್ಯಪ್ರದೇಶ, ಮಾರ್ಚ್​ 9: ವ್ಯಕ್ತಿಯೊಬ್ಬ ತನ್ನ ಪತ್ನಿಯ ಕೊಂದು ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಧ್ಯಪ್ರದೇಶದ ಸಿಧಿ ಜಿಲ್ಲೆಯಲ್ಲಿ ನಡೆದಿದೆ. ಕೊನೆಗೆ ಆ ವ್ಯಕ್ತಿಯ ಅಂತ್ಯ ಸಂಸ್ಕಾರ ನಡೆಯುವ ಸಂದರ್ಭದಲ್ಲಿ ಮೊಮ್ಮಗನ ಚಿತೆಗೆ ಅಜ್ಜ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬಹ್ರಿ ಪೊಲೀಸ್ ಠಾಣೆ ವ್ಯಾಪ್ತಿಯ ಸಿಹೋಲಿಯಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಅಭಯ್ ರಾಜ್ ಯಾದವ್ ಶುಕ್ರವಾರ ತನ್ನ ಪತ್ನಿ ಸವಿತಾ ಯಾದವ್ ಅವರನ್ನು ಕೊಡಲಿಯಿಂದ ಕೊಂದು ನಂತರ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದ.

ಅದೇ ಸಂಜೆ ಅವರ ಅಂತ್ಯಕ್ರಿಯೆಗಳನ್ನು ನಡೆಸಲಾಯಿತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಅಂತ್ಯಕ್ರಿಯೆಯ ಸಮಯದಲ್ಲಿ ಅವರ ಅಜ್ಜ ರಾಮಾವತಾರ್ ಯಾದವ್ ಮನೆಯಲ್ಲಿದ್ದರು, ತಡರಾತ್ರಿ ಅವರು ಕಾಣೆಯಾಗಿದ್ದರು. ಶನಿವಾರ ಬೆಳಗ್ಗೆ, ಕುಟುಂಬ ಸದಸ್ಯರು ಅವರನ್ನು ತುಂಬಾ ಹುಡುಕಿದರು. ಸಿಗದಿದ್ದಾಗ, ಅವರು ಅಂತ್ಯಕ್ರಿಯೆಯ ಸ್ಥಳಕ್ಕೆ ಹೋದರು.

ಅಲ್ಲಿ ಅವರ ಅರೆಬೆಂದ ಶವ ಕಂಡಿತ್ತು, ಪೊಲೀಸರು ಬರುವ ಹೊತ್ತಿಗೆ, ದೇಹವು ಸಂಪೂರ್ಣವಾಗಿ ಸುಟ್ಟುಹೋಗಿತ್ತು ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ಗಾಯತ್ರಿ ತ್ರಿಪಾಠಿ ಹೇಳಿದ್ದಾರೆ. ಸವಿತಾ ಯಾದವ್ ಹತ್ಯೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ
Image
ಹೈದರಾಬಾದ್: ಪತ್ನಿ, ಮಗನಿಂದ ವೈದ್ಯನ ಹತ್ಯೆ
Image
ಬೆಂಗಳೂರಿನಲ್ಲಿ ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ
Image
ಒಂದೇ ರಾತ್ರಿ 2 ಕೊಲೆ, 1 ಅನುಮಾನಸ್ಪದ ಶವ ಪತ್ತೆ: ಬೆಚ್ಚಿಬಿದ್ದ ಜನ

ಮತ್ತಷ್ಟು ಓದಿ: ಮೈಸೂರು ಜಿಲ್ಲೆಯಲ್ಲಿ ಜೋಡಿ ಕೊಲೆ: ಒಳಕಲ್ಲಿನಿಂದ ಜಜ್ಜಿ ವೃದ್ಧ ದಂಪತಿಯ ಹತ್ಯೆ

ಅಜ್ಜ ಮೊಮ್ಮಗನನ್ನು ತುಂಬಾ ಪ್ರೀತಿಸುತ್ತಿದ್ದರು ಎಂದು ಹೇಳಲಾಗುತ್ತಿದ್ದು, ಆತ ಇನ್ನಿಲ್ಲ ಎಂಬುದನ್ನು ಸಹಿಸಿಕೊಳ್ಳಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ