ಚಾಕೋಲೇಟ್ ಆಸೆ ತೋರಿಸಿ ರೈಲ್ವೆ ಸ್ಟೇಷನ್​​ನಲ್ಲೇ 4 ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ

ಮಹಾರಾಷ್ಟ್ರದ ಪುಣೆ ರೈಲ್ವೆ ನಿಲ್ದಾಣದಲ್ಲಿ 4 ವರ್ಷದ ಮಗುವಿಗೆ ಚಾಕೊಲೇಟ್ ನೀಡುವ ಆಮಿಷ ಒಡ್ಡಿದ 25 ವರ್ಷದ ಯುವಕ ಆ ಮಗುವಿನ ಮೇಲೆ ಅತ್ಯಾಚಾರ ಎಸಗಿದ್ದಾನೆ. ರೈಲ್ವೆ ನಿಲ್ದಾಣದ ಸಿಸಿಟಿವಿ ದೃಶ್ಯವನ್ನು ಪರಿಶೀಲಿಸಿದ ಪೊಲೀಸರು ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಆತನನ್ನು ಬಂಧಿಸಿದ್ದಾರೆ. ಕೂಲಿ ಕೆಲಸದವರ ಮಗಳಾದ 4 ವರ್ಷದ ಬಾಲಕಿ ರೈಲ್ವೆ ನಿಲ್ದಾಣದಲ್ಲಿ ರೈಲಿಗಾಗಿ ಕಾಯುತ್ತಿದ್ದಾಗ ಈ ಘಟನೆ ನಡೆದಿದೆ.

ಚಾಕೋಲೇಟ್ ಆಸೆ ತೋರಿಸಿ ರೈಲ್ವೆ ಸ್ಟೇಷನ್​​ನಲ್ಲೇ 4 ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ
Child Abuse

Updated on: Feb 21, 2026 | 11:07 PM

ಪುಣೆ, ಫೆಬ್ರವರಿ, 21: ಪುಣೆಯಲ್ಲಿ 4 ವರ್ಷದ ಬಾಲಕಿಯ ಮೇಲೆ ಪುಣೆ ರೈಲು ನಿಲ್ದಾಣದ ಆವರಣದಲ್ಲಿ ಅತ್ಯಾಚಾರ ನಡೆಸಲಾಗಿದೆ. 25 ವರ್ಷದ ಆರೋಪಿಯು ಆ ಮಗುವಿಗೆ ಚಾಕೊಲೇಟ್ ಮತ್ತು ಬಿಸ್ಕತ್ತುಗಳನ್ನು ಕೊಡಿಸುವ ಆಸೆ ತೋರಿಸಿ, ಆಕೆಯನ್ನು ರೈಲ್ವೆ ನಿಲ್ದಾಣದ ಬದಿಗೆ ಕರೆದುಕೊಂಡು ಹೋಗಿ ಅಲ್ಲೇ ಅತ್ಯಾಚಾರ (Child Harassment) ನಡೆಸಿದ್ದಾನೆ. ಮಧ್ಯಪ್ರದೇಶದ ಕೂಲಿ ಕಾರ್ಮಿಕರ ಮಗಳಾದ ಆ ಬಾಲಕಿ ತನ್ನ ತಂದೆಯ ಜೊತೆ ನಿನ್ನೆ ರಾತ್ರಿ ರೈಲಿಗಾಗಿ ಕಾಯುತ್ತಿದ್ದಾಗ ಈ ಘಟನೆ ನಡೆದಿದೆ. ಪ್ಲಾಟ್​​ಫಾರ್ಮ್​ನಲ್ಲೇ ಕುಳಿತು ಊಟ ಮಾಡಿದ್ದ ಅಪ್ಪ-ಮಗಳು ರೈಲಿಗಾಗಿ ಕಾಯುತ್ತಿದ್ದರು. ಆಗ ಅಪ್ಪ ಟಾಯ್ಲೆಟ್​​ಗೆ ಹೋಗಿ ಬರುವಾಗ ಮಗಳು ಕಾಣೆಯಾಗಿರುವುದು ಗಮನಕ್ಕೆ ಬಂದಿತು. ಮಗಳು ಎಲ್ಲೂ ಕಾಣದಿದ್ದಾಗ ಇಂದು ಬೆಳಗಿನ ಜಾವ 3 ಗಂಟೆಗೆ ಪೊಲೀಸರಿಗೆ ಮಾಹಿತಿ ನೀಡಿದ್ದರು.

ಪೊಲೀಸರು ರೈಲ್ವೆ ನಿಲ್ದಾಣದ ಸಿಸಿಟಿವಿ ಪರಿಶೀಲಿಸಿದಾಗ ಒಬ್ಬ ವ್ಯಕ್ತಿ ಆ ಬಾಲಕಿಯನ್ನು ಕರೆದುಕೊಂಡು ಹೋಗುತ್ತಿರುವುದು ರೆಕಾರ್ಡ್ ಆಗಿತ್ತು. ಆಕೆ ಆತನ ಕೈ ಹಿಡಿದುಕೊಂಡು ಹೋಗುತ್ತಿದ್ದಳು. ಆದರೆ, ಆತ ಯಾರೆಂದು ಆ ಮಗುವಿನ ಅಪ್ಪ-ಅಮ್ಮನಿಗೆ ಗೊತ್ತಿರಲಿಲ್ಲ. ಕೊನೆಗೂ ಆಕೆ ಸಿಕ್ಕಿದ್ದು, ಆಕೆಯ ಮೇಲೆ ಅತ್ಯಾಚಾರ ನಡೆಸಿರುವುದು ಗೊತ್ತಾಗುತ್ತಿದ್ದಂತೆ ಪೊಲೀಸರು ಆತನನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: 3 ವರ್ಷದ ಮಗುವಿನ ಮೇಲೆ ಅಪ್ಪನ ಗೆಳೆಯನಿಂದಲೇ ಅತ್ಯಾಚಾರ

ಆರೋಪಿಯು ಬಾಲಕಿಯನ್ನು ರೈಲ್ವೆ ನಿಲ್ದಾಣದ ಆವರಣದೊಳಗಿನ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಮಗು ನೀಡಿದ ವಿವರಣೆಯ ಮೇರೆಗೆ ತನಿಖೆ ಆರಂಭಿಸಿದ ಪೊಲೀಸರು ತನಿಖೆ ಆರಂಭಿಸಿ ಆರೋಪಿಯನ್ನು ಗುರುತಿಸಿದರು. ಪೊಲೀಸರು ಈ ಘಟನೆ ನಡೆದ 4 ಗಂಟೆಗಳಲ್ಲಿ ಆತನನ್ನು ಬಂಧಿಸಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
Loading...
Unable to load recommendations.
Follow Us