ಉತ್ತರ ಪ್ರದೇಶ: ಪೊಲೀಸ್ ವಾಹನದ ಜತೆ ಇನ್‌ಸ್ಟಾಗ್ರಾಂ ರೀಲ್ಸ್ ಮಾಡಿದ್ದ ವ್ಯಕ್ತಿಯ ಬಂಧನ
ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ಯುವಕನೊಬ್ಬ ಪೊಲೀಸ್ ವಾಹನವನ್ನು ಬಳಸಿಕೊಂಡು ಇನ್‌ಸ್ಟಾಗ್ರಾಂ ರೀಲ್ ವಿಡಿಯೋ ಮಾಡಿ ಸಂಕಷ್ಟಕ್ಕೆ ಸಿಲುಕಿದ್ದಾನೆ. ವಿಡಿಯೋ ವೈರಲ್ ಆದ ನಂತರ ಪೊಲೀಸರು ಆತನನ್ನು ಬಂಧಿಸಿದ್ದಾರೆ.
ಪೊಲೀಸ್ ವಾಹನವನ್ನು ಬಳಕೆ ಮಾಡಿಕೊಂಡು ರೀಲ್ಸ್ ಮಾಡಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ನಡೆದಿದೆ. ಇಂದಿರಾಪುರಂ ಪ್ರದೇಶದಲ್ಲಿ ಅಧಿಕಾರಿಗಳು ಟ್ರಾಫಿಕ್ ಕ್ಲಿಯರ್ ಮಾಡುವಲ್ಲಿ ನಿರತರಾಗಿದ್ದಾಗ ಮೊಯಿನ್ ಖಾನ್ ಪೊಲೀಸ್ ವಾಹನ ಬಳಸಿ ವಿಡಿಯೋ ಮಾಡಿದ್ದಾರೆ.
ಯುವಕ ವಾಹನದ ಚಾಲಕನ ಸೀಟಿನಿಂದ ಹೊರಬರುತ್ತಿರುವುದನ್ನು ವೀಡಿಯೊದಲ್ಲಿ ಕಾಣಬಹುದು. ಹಿನ್ನೆಲೆಯಲ್ಲಿ ಸಂಗೀತವು ಪ್ಲೇ ಆಗುತ್ತಿರುತ್ತದೆ. ಫೆಬ್ರವರಿ 15 ರಂದು ಪೋಸ್ಟ್ ಮಾಡಲಾದ ವೈರಲ್ ರೀಲ್‌ನ ಎರಡನೇ ಭಾಗವು ಕೈಯಲ್ಲಿ ತಂಪು ಪಾನೀಯದೊಂದಿಗೆ ಮಹೀಂದ್ರಾ ಬೊಲೆರೊದ ಪಕ್ಕದ ಮೆಟ್ಟಿಲಿನಿಂದ ಕೆಳಗೆ ಬರುತ್ತಿರುವುದನ್ನು ಕಾಣಬಹುದು.
ಅಧಿಕಾರಿಗಳ ಪ್ರಕಾರ, ಇಂದಿರಾಪುರಂನ ಕಣವಾಣಿ ಸೇತುವೆಯ ಬಳಿ ಟ್ರಾಫಿಕ್ ಜಾಮ್ ತೆರವುಗೊಳಿಸಲು ತೊಡಗಿದ್ದಾಗ, ಖಾಲಿ ಪೊಲೀಸ್ ವಾಹನವನ್ನು ಗಮನಿಸಿದ ಯುವಕರು ಅದನ್ನು ಬಳಸಿ ರೀಲ್ ಮಾಡಲು ನಿರ್ಧರಿಸಿದರು. ವಿಡಿಯೋ ವ್ಯಾಪಕ ಗಮನ ಸೆಳೆದ ನಂತರ ಅಧಿಕಾರಿಗಳು ಕ್ರಮ ಕೈಗೊಂಡು ವ್ಯಕ್ತಿಯನ್ನು ಬಂಧಿಸಿದ್ದಾರೆ.
ಮತ್ತಷ್ಟು ಓದಿ: Tech Tips: ಇನ್ಸ್ಟಾಗ್ರಾಮ್ನಲ್ಲಿ ವೈರಲ್ ಆಗಲು ದಿನಕ್ಕೆ ಎಷ್ಟು ರೀಲ್ಸ್ ಹಾಕಬೇಕು?: ತಜ್ಞರ ಟಿಪ್ಸ್ ಇಲ್ಲಿದೆ
ರೀಲ್ಸ್ ಹುಚ್ಚು! ಚೆಕ್ ಡ್ಯಾಂ ರೀಲ್ಸ್ ಮಾಡುವಾಗ ಇಬ್ಬರು ಯುವಕರು ನೀರುಪಾಲು ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಹರಗನಹಳ್ಳಿ ಚೆಕ್ ಡ್ಯಾಂ ನಲ್ಲಿ ಮುಳುಗಿ ಇಬ್ಬರು ಯುವಕರು ಜಲಸಮಾಧಿಯಾಗಿರುವ ದುರ್ಘಟನೆ ನಡೆದಿದೆ. ಹರಿಹರ ನಗರದ ಆಶ್ರಯ ಬಡಾವಣೆಯ ಪವನ್ (25) ಮತ್ತು ಪ್ರಕಾಶ್ (24) ಎಂಬ ಸ್ನೇಹಿತರಿಬ್ಬರು ಸಾವನ್ನಪ್ಪಿದ್ದಾರೆ. ಪ್ರಕಾಶ ರೀಲ್ಸ್ ಮಾಡಲು ಹೋಗಿ ನೀರಲ್ಲಿ ಬಿದ್ದಿದ್ದಾನೆ. ಅವನನ್ನ ರಕ್ಷಿಸಲು ಹೋದ ಪವನ್ ಸಹ ನೀರಲ್ಲಿ ಮುಳುಗಿ ಕಣ್ಮರೆಯಾಗಿದ್ದಾನೆ. ಹರಿಹರದ ರಾಘವೇಂದ್ರ ಮಠದ ಬಳಿ ತುಂಗಭದ್ರ ನದಿಯಲ್ಲಿ ಓರ್ವನ ಶವ ಪತ್ತೆಯಾಗಿದೆ. ಇನ್ನೊಬ್ಬನ ಶವಕ್ಕಾಗಿ ಶೋಧ ನಡೆದಿದೆ.
ಕಳೆದ ಮೂರು ದಿನಗಳ ಹಿಂದೆ ಯುವಕರಿಬ್ಬರೂ ನೀರಲ್ಲಿ ಮುಳುಗಿದ್ದಾರೆ. ಮತ್ತೊಬ್ಬ ಸ್ನೇಹಿತ, ದೃಶ್ಯ ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಅಗ್ನಿಶಾಮಕ ದಳ ಹಾಗು ಪೊಲೀಸರಿಂದ ಮೃತದೇಹಕ್ಕಾಗಿ ಶೋಧ ಮುಂದುವರಿದಿದೆ. ಹರಿಹರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ರೀಲ್ಸ್ ಎಂಬ ಮಾಯೆಯ ಬೆನ್ನುಹತ್ತಿ ಅನೇಕರು ತಮ್ಮ ಜೀವನಗಳನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ಉತ್ತರ ಪ್ರದೇಶದಲ್ಲಿಯೂ ಇಂತಹುದೇ ರೀಲ್ಸ್ ಹಾವಳಿಗೆ 6 ಮಹಿಳಾ ಪೊಲೀಸ್ ಸಿಬ್ಬಂದಿ ಸೀದಾ ಮನೆಗೆ ಹೋಗಿದ್ದಾರೆ. ರೀಲ್ಸ್ ಮಾಡುತ್ತಿದ್ದ 6 ಪೊಲೀಸ್ ಸಿಬ್ಬಂದಿಯನ್ನು ಉತ್ತರ ಪ್ರದೇಶದ ಪೊಲೀಸ್ ಮಹಾನಿರ್ದೇಶಕ (ಡಿಜಿ & ಐಜಿಪಿ) ಸಸ್ಪೆಂಡ್ ಮಾಡಿ ಆದೇಶ ನೀಡಿದ್ದಾರೆ. ಉಳಿದ ಅಧಿಕಾರಿಗಳು, ಸಿಬ್ಬಂದಿ ರೀಲ್ಸ್ ಮಾಡದಂತೆ ಡಿಜಿ & ಐಜಿಪಿ ಖಡಕ್ ಆದೇಶ ಹೊರಡಿಸಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ