AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನಾ ವೇಷ, ಬ್ಯಾಂಕ್​ಗೆ ವಂಚಿಸಿ 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

ಬ್ಯಾಂಕ್​ಗೆ ವಂಚನೆ ಮಾಡಿ ತಲೆಮರೆಸಿಕೊಂಡಿದ್ದ ವ್ಯಕ್ತಿಯನ್ನು ಪೊಲೀಸರು ತಮಿಳುನಾಡಿನಲ್ಲಿ ಬಂಧಿಸಿದ್ದಾರೆ. ಬ್ಯಾಂಕ್​ವೊಂದರಲ್ಲಿ ಕಂಪ್ಯೂಟರ್​ ಆಪರೇಟರ್​ ಆಗಿ ಕೆಲಸ ಮಾಡುತ್ತಿದ್ದ ಛಲಪತಿ ಎಂಬಾತ 50 ಲಕ್ಷ ವಂಚಿಸಿ ಓಡಿ ಹೋಗಿದ್ದರು.

ನಾನಾ ವೇಷ, ಬ್ಯಾಂಕ್​ಗೆ ವಂಚಿಸಿ 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
ಸಿಬಿಐ
ನಯನಾ ರಾಜೀವ್
|

Updated on: Aug 06, 2024 | 10:33 AM

Share

ಬ್ಯಾಂಕ್​ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯನ್ನು ಕೇಂದ್ರ ತನಿಖಾ ದಳ(ಸಿಬಿಐ) ಬಂಧಿಸಿದೆ. ಆರೋಪಿಯಾಗಿರುವ ವಿ ಛಲಪತಿ ರಾವ್ ತನ್ನ ಗುರುತು, ಸ್ಥಳವನ್ನು ಮರೆಮಾಚಿ ಜೀವನ ನಡೆಸುತ್ತಿದ್ದ, ಕಂಪ್ಯೂಟರ್​ ಆಪರೇಟರ್​ನಿಂದ ಹಿಡಿದು ಸ್ವಾಮೀಜಿಯವರೆಗೂ ನಾನಾ ವೇಷ ಧರಿಸಿದ್ದರೂ ಸಿಬಿಐ ಕೊನೆಗೂ ಆತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

2002ರಲ್ಲಿ ಹೈದಾರಾಬಾದ್​ನ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಚಂದುಲಾಲ್ ಬಿರಾದಾಋಇ ಶಾಖೆಯಲ್ಲಿ ಕಂಪ್ಯೂಟರ್ ಆಪರೇಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಆ ಸಮಯದಲ್ಲಿ ಅವರು ಬ್ಯಾಂಕ್​ಗೆ 50 ಲಕ್ಷ ರೂ. ವಂಚಿಸಿದ್ದರು. 2006ರಲ್ಲಿ ಸಿಬಿಐ ಎರಡು ಚಾರ್ಜ್​ಶೀಟ್​ಗಳನ್ನು ಸಲ್ಲಿಸಿತ್ತು, ಪ್ರಕರಣದಲ್ಲಿ ಆರೋಪಿಯಾಗಿರುವ ಛಲಪತಿ ಪತ್ನಿ ಕಾಪಾಟಿಪುರ ಪೊಲೀಸ್​ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದಾರೆ.

ಏಳು ವರ್ಷಗಳ ನಂತರ ಅವರು ಪತಿ ಮೃತಪಟ್ಟಿದ್ದಾರೆಂದು ಹೇಳಿ ಸಿವಿಲ್ ನ್ಯಾಯಾಲಯದಲ್ಲಿ ಅರ್ಜಿಸಲ್ಲಿಸಿದ್ದರು. ಹೈದರಾಬಾದ್ ನ್ಯಾಯಾಲಯ ಅವರ ಪರವಾಗಿ ಆದೇಶವನ್ನು ನೀಡಿತ್ತು. ತನ್ನ ಪತಿಯ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ತೆಲಂಗಾಣ ಹೈಕೋರ್ಟ್​ನಿಂದ ತಡೆಯಾಜ್ಞೆ ಪಡೆದಿದ್ದರು.

ಮತ್ತಷ್ಟು ಓದಿ: ಬ್ಯಾಂಕ್​ಗೆ ವಂಚನೆ: ಬೆಂಗಳೂರಿನ ಕಂಪನಿಯೊಂದರ 105.5 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು

2013ರಲ್ಲಿ ಸಿಬಿಐ ನ್ಯಾಯಾಲಯ ಛಲಪತಿಯನ್ನು ಘೋಷಿತ ಅಪರಾಧಿ ಎಂದು ಘೋಷಿಸಿತು. ಛಲಪತಿ ಸೇಲಂಗೆ ಓಡಿಹೋಗಿ ತನ್ನ ಹೆಸರನ್ನು ಎಂ ವಿನೀತ್ ಕುಮಾರ್ ಎಂದು ಬದಲಾಯಿಸಿ, ಆಧಾರ್ ಸಂಖ್ಯೆಯನ್ನು ಪಡೆದುಕೊಂಡರು. 2007ರಲ್ಲಿ ಬೇರೊಬ್ಬ ಮಹಿಳೆಯನ್ನು ಮದುವೆಯಾಗಿದ್ದ, ಆದರೆ ಮೊದಲ ಮಗನ ಜತೆ ಸಂಪರ್ಕವನ್ನು ಹೊಂದಿದ್ದ ಎಂದು ಎರಡನೇ ಪತ್ನಿ ತಿಳಿಸಿದ್ದಾರೆ.

ಸಿಬಿಐ ಅವರನ್ನು ಪತ್ತೆಹಚ್ಚಲು ಪ್ರಯತ್ನಿಸಿದಾಗ, ಚಲಪತಿ ಅವರು 2014 ರಲ್ಲಿ ಸೇಲಂನಿಂದ ಪಲಾಯನ ಮಾಡಿದರು ಮತ್ತು ಭೋಪಾಲ್​ಗೆ ತೆರಳಿ ಅಲ್ಲಿ ಸಾಲ ವಸೂಲಾತಿ ಏಜೆಂಟ್ ಆಗಿ ಕೆಲಸ ಮಾಡಿದರು. ಉತ್ತರಾಖಂಡದ ರುದ್ರಪುರಕ್ಕೆ ಶಾಲೆಯೊಂದರಲ್ಲಿ ಕೆಲಸ ಮಾಡಲು ಶುರುಮಾಡಿದರು. 2016 ರಲ್ಲಿ ಔರಂಗಾಬಾದ್‌ನ ಆಶ್ರಮಕ್ಕೆ ತೆರಳಿದರು, ಅಲ್ಲಿ ಅವರು ತಮ್ಮ ಹೆಸರನ್ನು ಸ್ವಾಮಿ ವಿಧಿತಾತ್ಮಾನಂದ ತೀರ್ಥ ಎಂದು ಬದಲಾಯಿಸಿಕೊಂಡರು ಮತ್ತು ಮತ್ತೊಂದು ಆಧಾರ್ ಕಾರ್ಡ್ ಪಡೆದರು.

2021 ರಲ್ಲಿ ಪಲಾಯನ ಮಾಡುವ ಮೊದಲು ಅವರು ಆಶ್ರಮಕ್ಕೆ 70 ಲಕ್ಷ ರೂಪಾಯಿಗಳನ್ನು ವಂಚಿಸಿದ್ದರು ಎಂಬುದು ನಂತರ ಗೊತ್ತಾಗಿದೆ. ತನಿಖೆಯ ವೇಳೆ, ಸಿಬಿಐ ತಮಿಳುನಾಡಿನ ತಿರುನಲ್ವೇಲಿಯ ನರಸಿಂಗನಲ್ಲೂರು ಗ್ರಾಮದಲ್ಲಿ ಅವರನ್ನು ಪತ್ತೆ ಮಾಡಿದೆ. ಲಪತಿ ಅವರನ್ನು ಹೈದರಾಬಾದ್‌ನಲ್ಲಿರುವ ಸಿಬಿಐ ಪ್ರಕರಣಗಳ ವಿಶೇಷ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದ್ದು, ಆಗಸ್ಟ್ 16 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ