Delhi: ಆಸ್ತಿ ಮುಟ್ಟುಗೋಲಿಗೆ ಕೋರ್ಟ್​ನಿಂದ ನೋಟಿಸ್, ಬೆಂಕಿ ಹಚ್ಚಿಕೊಂಡು ವ್ಯಕ್ತಿ ಆತ್ಮಹತ್ಯೆ

|

Updated on: Feb 26, 2023 | 7:54 AM

ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ನ್ಯಾಯಾಲಯದಿಂದ ನೋಟಿಸ್​ ಬಂದ ಕಾರಣ ವ್ಯಕ್ತಿಯೊಬ್ಬ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೆಹಲಿಯ ಗೋಕಲ್ಪುರಿ ಗ್ರಾಮದಲ್ಲಿ ನಡೆದಿದೆ.

Delhi: ಆಸ್ತಿ ಮುಟ್ಟುಗೋಲಿಗೆ ಕೋರ್ಟ್​ನಿಂದ ನೋಟಿಸ್, ಬೆಂಕಿ ಹಚ್ಚಿಕೊಂಡು ವ್ಯಕ್ತಿ ಆತ್ಮಹತ್ಯೆ
ಪೊಲೀಸ್
Follow us on

ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ನ್ಯಾಯಾಲಯದಿಂದ ನೋಟಿಸ್​ ಬಂದ ಕಾರಣ ವ್ಯಕ್ತಿಯೊಬ್ಬ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೆಹಲಿಯ ಗೋಕಲ್ಪುರಿ ಗ್ರಾಮದಲ್ಲಿ ನಡೆದಿದೆ. ದೆಹಲಿ ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ವಂಶಿಕಾ ಕಲೆಕ್ಷನ್ಸ್ ಮಾಲೀಕ ಕಪಿಲ್ ಕುಮಾರ್(33) ಅವರು ನ್ಯಾಯಾಲಯದಿಂದ ಆಸ್ತಿ ಜಪ್ತಿ ನೋಟಿಸ್ ಪಡೆದ ಬಳಿಕ ಮನನೊಂದು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಶನಿವಾರ ಬೆಳಗ್ಗೆ 3.45ರ ಸುಮಾರಿಗೆ ಸಾವನ್ನಪ್ಪಿದ್ದಾರೆ. ಕೆಲವು ಅಧಿಕಾರಿಗಳು ಗೋಕಲ್​ಪುರಿ ಪೊಲೀಸ್ ಠಾಣೆಗೆ ಆಗಮಿಸಿದ್ದಾರೆ, ಹಾಗೆಯೇ ಆಸ್ತಿಯನ್ನು ಸ್ವಾಧೀನಪಡಿಸಿಕೊಳ್ಳಲು ಪೊಲೀಸರ ಸಹಾಯವನ್ನು ಕೋರಿದರು ಜತೆಗೆ ನ್ಯಾಯಾಲಯದ ಆದೇಶವನ್ನು ಕೂಡ ಹಾಜರುಪಡಿಸಿದರು.

ಮತ್ತಷ್ಟು ಓದಿ: ಬಾಗಲಕೋಟೆಯಲ್ಲಿ ಮತ್ತೊಂದು ಸಾಮೂಹಿಕ ಆತ್ಮಹತ್ಯೆ: ಇಬ್ಬರು ಪುತ್ರಿಯರ ಜತೆ ನದಿಗೆ ಹಾರಿದ ತಾಯಿ

ಈ ವಿಷಯ ತಿಳಿದ ವ್ಯಕ್ತಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಳ್ಳಲು ಯತ್ನಿಸಿದ್ದಾನೆ, ಬಳಿಕ ಪೊಲೀಸರು ಬೆಂಕಿ ನಂದಿಸಲು ಪ್ರಯತ್ನಿಸಿದರು. ತಕ್ಷಣ ಅವರನ್ನು ಪೊಲೀಸ್ ಸಿಬ್ಬಂದಿ ಜಿಟಿಬಿ ಆಸ್ಪತ್ರೆಗೆ ರವಾನಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಈ ಕುರಿತು ಗೋಕಲ್ ಪುರಿ ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 306 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಮತ್ತು ತನಿಖೆ ನಡೆಯುತ್ತಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಯಾಕಾಗಿ ನ್ಯಾಯಾಲಯವು ಅವರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ಆದೇಶ ನೀಡಿತ್ತು ಎಂಬುದರ ಕುರಿತು ಇನ್ನೂ ಮಾಹಿತಿ ಲಭ್ಯವಾಗಬೇಕಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ