AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾರಾಣಸಿಯಲ್ಲಿ ಬುಲ್ಡೋಜರ್ ದಾಳಿ ಖಂಡಿಸಿ ತನ್ನ ಅಂಗಡಿಗೆ ತಾನೇ ಬೆಂಕಿ ಹಚ್ಚಿದ ವ್ಯಾಪಾರಿ

ವಾರಾಣಸಿಯಲ್ಲಿ ಬುಲ್ಡೋಜರ್ ಕಾರ್ಯಾಚರಣೆಯ ನಡುವೆ ವ್ಯಕ್ತಿ ಅಂಗಡಿಗೆ ಬೆಂಕಿ ಹಚ್ಚಿ, ಪೆಟ್ರೋಲ್ ಸುರಿದುಕೊಂಡ ಘಟನೆ ನಡೆದಿದೆ. ಇಂದು ವಾರಾಣಸಿಯ ದಾಲ್ಮಂಡಿ ಪ್ರದೇಶದಲ್ಲಿ ರಸ್ತೆ ಅಗಲೀಕರಣಕ್ಕಾಗಿ ದೊಡ್ಡ ಪ್ರಮಾಣದ ಕಟ್ಟಡ ಕೆಡವುವ ಕಾರ್ಯಾಚರಣೆ ಆರಂಭವಾದಾಗ ಉದ್ವಿಗ್ನತೆ ಭುಗಿಲೆದ್ದಿತು. ಈ ಸಂದರ್ಭದಲ್ಲಿ ಆಡಳಿತದ ಕ್ರಮವನ್ನು ವಿರೋಧಿಸಿ ವ್ಯಕ್ತಿಯೊಬ್ಬರು ತಮ್ಮ ಅಂಗಡಿಗೆ ಬೆಂಕಿ ಹಚ್ಚಿ ತಮ್ಮ ಮೈಗೂ ಪೆಟ್ರೋಲ್ ಸುರಿದುಕೊಂಡಿದ್ದಾರೆ. ಅಸುರಕ್ಷಿತ ಮತ್ತು ಅಗಲೀಕರಣ ಯೋಜನೆಗೆ ಅಡ್ಡಿಯುಂಟುಮಾಡುವ 21 ಕಟ್ಟಡಗಳನ್ನು ಕೆಡವಲಾಯಿತು.

ವಾರಾಣಸಿಯಲ್ಲಿ ಬುಲ್ಡೋಜರ್ ದಾಳಿ ಖಂಡಿಸಿ ತನ್ನ ಅಂಗಡಿಗೆ ತಾನೇ ಬೆಂಕಿ ಹಚ್ಚಿದ ವ್ಯಾಪಾರಿ
Varanasi Man Sets Shop Ablaze
ಸುಷ್ಮಾ ಚಕ್ರೆ
|

Updated on: Feb 09, 2026 | 8:00 PM

Share

ವಾರಾಣಸಿ, ಫೆಬ್ರವರಿ 9: ಉತ್ತರ ಪ್ರದೇಶದ ವಾರಾಣಸಿಯ (Varanasi) ದಾಲ್ಮಂಡಿಯಲ್ಲಿ ರಸ್ತೆ ಅಗಲೀಕರಣಕ್ಕಾಗಿ ಸರ್ಕಾರ ಬುಲ್ಡೋಜರ್ ಬಳಸಿ ಮನೆಗಳನ್ನು ಕೆಡವಲು ಪ್ರಾರಂಭಿಸಿದೆ. ಇಂದು, ಪುರಸಭೆ ಗುರುತಿಸಿದ ಶಿಥಿಲಗೊಂಡ ಮನೆಗಳಲ್ಲಿ 21 ಮನೆಗಳನ್ನು ನೆಲಸಮ ಮಾಡಲಾಗಿದೆ. ಇದು ಒಂದೇ ದಿನದಲ್ಲಿ ದಾಲ್ಮಂಡಿಯಲ್ಲಿ ನಡೆದ ಅತಿದೊಡ್ಡ ಕಾರ್ಯಾಚರಣೆಯಾಗಿದೆ. ಇದನ್ನು ಖಂಡಿಸಿ ಸ್ಥಳೀಯ ಅಂಗಡಿಯವರು ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಅವರು ಆಡಳಿತ ಅಧಿಕಾರಿಗಳಿಂದ 10 ದಿನಗಳ ಕಾಲಾವಕಾಶ ಕೋರುತ್ತಿದ್ದಾರೆ. ಆದರೂ ಅಧಿಕಾರಿಗಳು ಯಾರ ಮಾತನ್ನೂ ಕೇಳುತ್ತಿಲ್ಲ. ಹೀಗಾಗಿ, ಕಾರ್ಯಾಚರಣೆಯ ಸಮಯದಲ್ಲಿ ಅಂಗಡಿ ಮಾಲೀಕರೊಬ್ಬರು ತಮ್ಮ ಮೇಲೆ ಪೆಟ್ರೋಲ್ ಸುರಿದುಕೊಂಡು, ಮನೆಗೂ ಬೆಂಕಿ ಹಚ್ಚಿದ್ದಾರೆ. ತಮ್ಮ ಮೈಗೂ ಬೆಂಕಿ ಹಚ್ಚಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾರೆ.

ನಮ್ಮ ತಪ್ಪೇನು? ನೀವು ನಮ್ಮನ್ನು ಕೊಲ್ಲುತ್ತೀರಾ? ನೀವು ರಸ್ತೆ ಅಗಲೀಕರಣ ಮಾಡಲು ಬಯಸಿದರೆ ನೀವು ಜನರ ಜೀವನವನ್ನು ನಾಶ ಮಾಡುತ್ತೀರಾ? ಸರ್ಕಾರ ನಮ್ಮನ್ನು ನಾಶ ಮಾಡುತ್ತಿದೆ. ಅವರು ನಮ್ಮ ಜೀವನಕ್ಕೆ ಆಧಾರವಾಗಿದ್ದ ಅಂಗಡಿಯನ್ನೇ ಕಸಿದುಕೊಂಡಿದೆ. ನಮಗೆ ಸರ್ಕಾರ ಯಾವುದೇ ಸೂಚನೆ ನೀಡಿಲ್ಲ ಎಂದು ಆ ವ್ಯಾಪಾರಿ ಅಳುತ್ತಾ ಕಿರುಚಾಡಿದ್ದಾರೆ. ಜನರೆಲ್ಲ ಅವರನ್ನು ಕೆಳಗಿಳಿಯಲು ಎಷ್ಟೇ ಬೇಡಿಕೊಂಡರೂ ಅವರು ಕೆಳಗೆ ಇಳಿಯಲಿಲ್ಲ.

ಇದನ್ನೂ ಓದಿ: ಕಾಲೇಜಿನೊಳಗೇ ಯುವತಿಯನ್ನು ಕೊಂದು, ತಾನೂ ಶೂಟ್ ಮಾಡಿಕೊಂಡ ಪಂಜಾಬ್​​ನ ಕಾನೂನು ವಿದ್ಯಾರ್ಥಿ

ಗಲಾಟೆಯ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು 4 ಪೊಲೀಸ್ ಠಾಣೆಗಳ ಪಡೆಗಳನ್ನು ನಿಯೋಜಿಸಿದೆ. ಅಲ್ಲಿ ಮಹಿಳಾ ಸಿಬ್ಬಂದಿ ಸೇರಿದಂತೆ 500 ಪೊಲೀಸ್ ಸಿಬ್ಬಂದಿ ಇದ್ದಾರೆ. ಪರಿಸ್ಥಿತಿಯನ್ನು ಡ್ರೋನ್‌ಗಳ ಮೂಲಕವೂ ಮೇಲ್ವಿಚಾರಣೆ ಮಾಡಲಾಗುತ್ತಿದೆ. ಇದಕ್ಕೂ ಮೊದಲು, ಜನವರಿ 21ರಂದು 8 ಮನೆಗಳನ್ನು ಒಟ್ಟಿಗೆ ಕೆಡವಲಾಗಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ