AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Andhra Pradesh: ಜಮೀನು ವಿವಾದ, ತಂದೆಗೆ ಹೊಡೆದು, ತಾಯಿಯ ಕೂದಲೆಳೆದು ಮೃಗನಂತೆ ವರ್ತಿಸಿದ ಮಗ

ಮಗನೊಬ್ಬ ಮೃಗನಂತೆ ವರ್ತಿಸಿದ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ, ತನ್ನ ಸಹೋದರನಿಗೆ 3 ಎಕರೆ ಜಮೀನು ಕೊಟ್ಟಿದ್ದಕ್ಕಾಗಿ ಕೋಪಗೊಂಡ ಆತ ತಾಯಿಯ ಕೂದಲನ್ನು ಹಿಡಿದೆಳೆದಿದ್ದಾನೆ ಅಷ್ಟೇ ಅಲ್ಲದೆ ತಂದೆಗೂ ಕಪಾಳಮೋಕ್ಷ ಮಾಡಿದ್ದಾನೆ, ಇದೀಗ ಆರೋಪಿಯನ್ನು ಬಂಧಿಸಲಾಗಿದ್ದು, ವಿಚಾರಣೆ ನಡೆಯುತ್ತಿದೆ.

Andhra Pradesh: ಜಮೀನು ವಿವಾದ, ತಂದೆಗೆ ಹೊಡೆದು, ತಾಯಿಯ ಕೂದಲೆಳೆದು ಮೃಗನಂತೆ ವರ್ತಿಸಿದ ಮಗ
Image Credit source: Bharat Times
ನಯನಾ ರಾಜೀವ್
|

Updated on: Mar 04, 2024 | 9:33 AM

Share

ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬ ತನ್ನ ಪೋಷಕರಿಗೆ ಥಳಿಸಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ತಾಯಿಯ ಕೂದಲು ಎಳೆದು ಮಗ ಮೃತನಂತೆ ವರ್ತಿಸಿದ ಅಮಾನವೀಯ ಘಟನೆ ವರದಿಯಾಗಿದೆ. ತಾಯಿಯನ್ನು ತಳ್ಳಿ ನೆಲದ ಮೇಲೆ ಬೀಳಿಸಿ, ಬಳಿಕ ತಂದೆಗೂ ಕಪಾಳಕ್ಕೆ ಹೊಡೆದಿದ್ದಾನೆ. ಆ ಸಂದರ್ಭದಲ್ಲಿ ಚಿಕ್ಕ ಹುಡುಗಿಯೂ ಅಲ್ಲಿದ್ದಳು, ಯಾರೂ ಮುಂದೆ ಬಂದು ಘಟನೆಯನ್ನು ತಡೆಯಲು ಪ್ರಯತ್ನ ನಡೆಸಲಿಲ್ಲ.

ಆರೋಪಿಯನ್ನು ಶ್ರೀನಿವಾಸುಲು ರೆಡ್ಡಿ ಎಂದು ಗುರುತಿಸಲಾಗಿದೆ. ಪೊಲೀಸರು ಆತನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ವಶಕ್ಕೆ ಪಡೆದಿದ್ದಾರೆ. ವಾಸ್ತವವಾಗಿ, ಆರೋಪಿಯು ತನ್ನ ಹೆತ್ತವರು ತನ್ನ ಅಣ್ಣನಿಗೆ ಭೂಮಿಯನ್ನು ನೀಡಿದ್ದರಿಂದ ಈತ ಕೋಪಗೊಂಡಿದ್ದ. ನಿರ್ಧಾರವನ್ನು ಬದಲಾಯಿಸುವಂತೆ ಅವನು ಪದೇ ಪದೇ ಒತ್ತಾಯಿಸುತ್ತಿದ್ದ.

ಈ ಕುರಿತು ಸ್ಥಳೀಯ ಪೊಲೀಸ್ ಯುವರಾಜು ಮಾತನಾಡಿ, ತಂದೆ-ತಾಯಿಯೊಂದಿಗೆ ಅನುಚಿತವಾಗಿ ವರ್ತಿಸುವವರಿಗೆ ಶಿಕ್ಷೆಯಾಗಲಿದೆ. ಇಂತಹ ದೌರ್ಜನ್ಯದ ಬಗ್ಗೆ ಪೋಷಕರು ದೂರು ದಾಖಲಿಸಬೇಕು ಎಂದು ಅವರು ಹೇಳಿದರು.

ಶನಿವಾರ ಅನ್ನಮಯ್ಯ ಜಿಲ್ಲೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಶ್ರೀನಿವಾಸಲು ರೆಡ್ಡಿ ಎಂದು ಗುರುತಿಸಲಾದ ವ್ಯಕ್ತಿಯನ್ನು ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಬಂಧಿಸಲಾಗಿದೆ. ಶ್ರೀನಿವಾಸುಲು ತನ್ನ ಅಣ್ಣ ಮನೋಹರ್ ರೆಡ್ಡಿಗೆ ನೀಡಿದ ಮೂರು ಎಕರೆ ಜಮೀನಿನ ಬಗ್ಗೆ ಅತೃಪ್ತಿ ಹೊಂದಿದ್ದ, ಹಾಗಾಗಿ ಅದನ್ನು ಬದಲಾಯಿಸಬೇಕೆಂದು ಆತನ ಪೋಷಕರಾದ ಲಕ್ಷ್ಮಮ್ಮ ಮತ್ತು ವೆಂಕಟ್ರಮಣ ಬಯಸಿದ್ದರು.

ಆತ ಕೇಳಿದಾಗ ಸಹಿ ಹಾಕಲು ಒಪ್ಪಿದ ನಂತರವೂ ಮೇಲೆ ಹಲ್ಲೆ ಮುಂದುವರಿಸಿದ್ದಾನೆ ಎಂದು ದಂಪತಿ ಪೊಲೀಸರಿಗೆ ತಿಳಿಸಿದ್ದಾರೆ.

ಮತ್ತಷ್ಟು ಓದಿ:ಮರುಕಳಿಸಿದ ವಂಟಮೂರಿ ಘಟನೆ; ಒತ್ತುವರಿ ಪ್ರಶ್ನಿಸಿದ್ದಕ್ಕೆ ವಿವಸ್ತ್ರಗೊಳಿಸಿ ಮಹಿಳೆ ಮೇಲೆ ಹಲ್ಲೆ?

ಮತ್ತೊಂದು ಘಟನೆ

ಬೆಂಗಳೂರಿನಲ್ಲೊಂದು ಅಮಾನುಷ ಕೃತ್ಯ, ಹೆತ್ತ ತಾಯಿಯಿಂದಲೇ ಮಗುವಿನ ಮೇಲೆ ಹಲ್ಲೆ ಲಾಲನೆ ಪಾಲನೆ ಮಾಡಬೇಕಾದವಳೇ ತನ್ನ ಮಗುವನ್ನು ಮನೆಯಲ್ಲಿ ಕೂಡಿ ಹಾಕಿ, ಮನಬಂದಂತೆ ಹೊಡೆದು ಬಡಿದು ಹಲ್ಲೆ ಮಾಡಿದ್ದಾಳೆ. ಗಂಡನಿಂದ ವಿಚ್ಛೇದನೆ ಪಡೆದುಕೊಂಡಿರುವ ಸ್ಟ್ಯಾಲಿನ್ ಎನ್ನುವ ಮಹಿಳೆ ತನ್ನ ಪ್ರಿಯಕರನ ಜೊತೆ ಸೇರಿ ಎರಡ್ಮೂರು ವರ್ಷದ ಮಗುವಿನ ಮೇಲೆ ಹಲ್ಲೆ ಮಾಡಿದ್ದಾಳೆ.

ಈ ಹಿನ್ನೆಲೆಯಲ್ಲಿ ಮಗುವಿನ ಮೈತುಂಬ ಗಾಯಗಳಾಗಿವೆ. ಈ ಅಮಾನುಷ್ಯ ಕೃತ್ಯ ಬೆಂಗಳೂರಿನ(Bengaluru) ವೀರಭದ್ರ ನಗರದಲ್ಲಿ ನಡೆದಿದೆ. 2-3 ವರ್ಷದ ಮಗುವು ತೊದಲನುಡಿಯಲ್ಲೇ ತನಗೆ ಹೇಗೆಲ್ಲ ಹೊಡೆದು ಹಿಂಸೆ ಕೊಟ್ಟರು ಎಂಬುದನ್ನು ತಿಳಿಸಿದೆ.

ಮನೆಗೆ ಬಂದ ಅಂಕಲ್‌ವೊಬ್ಬರ್‌ ಕುಕ್ಕರ್‌ನಿಂದ ತಲೆಗೆ ಹೊಡೆದರಂತೆ. ಅಮ್ಮ ಕೂಡ ನೀನು ಬೇಡ ಮನೆ ಬಿಟ್ಟು ಹೋಗು ಎಂದು ಕಾಲಲ್ಲಿ ಒದ್ದರಂತೆ. ಇದೆಲ್ಲವನ್ನೂ ಮಗುವು ಸ್ಥಳೀಯರೊಬ್ಬರ ಬಳಿ ಹೇಳಿಕೊಂಡಿದೆ.

ಬೆಳಗ್ಗೆ ಕೆಲಸಕ್ಕೆ ಹೋಗುವಾಗ ಮನೆಗೆ ಬೀಗ ಹಾಕಿ ಹೋದರೆ ರಾತ್ರಿ ಬರುವವರೆಗೂ ಬಾಗಿಲು ತೆಗಯದೆ ಕೂಡಿಹಾಕುತ್ತಾಳೆ. ಈ ವಿಷಯ ತಿಳಿಯುತ್ತಿದ್ದಂತೆ ಸಂಘಟನೆಯೊಂದು ಮಗುವಿನ ರಕ್ಷಣೆಗೆ ಬಂದಿದೆ. ಪಾಪಿ ತಾಯಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಮನೆಯಲ್ಲಿ ಕೂಡಿ ಹಾಕಿದ್ದ ಮಗುವನ್ನು ರಕ್ಷಿಸಿ, ಗೃಹ ಬಂಧನಕ್ಕೆ ಮುಕ್ತಿಕೊಟ್ಟಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ