Kerala: ಸೊಸೆಯ ಕತ್ತು ಸೀಳಿ ಬಳಿಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಮಾವ

ಮಾವನೊಬ್ಬ ಸೊಸೆಯ ಕತ್ತು ಸೀಳಿ ಬಳಿಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೇರಳದಲ್ಲಿ ನಡೆದಿದೆ. ಕೌಟುಂಬಿಕ ಕಲಹ ತಾರಕಕ್ಕೇರಿ ಸೆಬಾಸ್ಟಿಯನ್ ಎಂಬ ವ್ಯಕ್ತಿ ತನ್ನ ಸೊಸೆ ಮೇಲೆ ಹಲ್ಲೆ ನಡೆಸಿದ್ದರು. ಕೇರಳದ ವಡಕೇಕರ ಎಂಬ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಕುತ್ತಿಗೆಯನ್ನು ಸೀಳಿದ್ದ ಪರಿಣಾಮ ಶಾನು ಕುತ್ತಿಗಿಂತ ರಕ್ತ ಸುರಿಯುತ್ತಿತ್ತು. ತಕ್ಷಣವೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

Kerala: ಸೊಸೆಯ ಕತ್ತು ಸೀಳಿ ಬಳಿಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಮಾವ
ಪೊಲೀಸ್

Updated on: Mar 22, 2024 | 10:27 AM

ಮಾವನೊಬ್ಬ ಸೊಸೆಯ ಕತ್ತು ಸೀಳಿ ಬಳಿಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೇರಳದಲ್ಲಿ ನಡೆದಿದೆ. ಕೌಟುಂಬಿಕ ಕಲಹ ತಾರಕಕ್ಕೇರಿ ಸೆಬಾಸ್ಟಿಯನ್ ಎಂಬ ವ್ಯಕ್ತಿ ತನ್ನ ಸೊಸೆ ಮೇಲೆ ಹಲ್ಲೆ ನಡೆಸಿದ್ದರು. ಕೇರಳದ ವಡಕೇಕರ ಎಂಬ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಕುತ್ತಿಗೆಯನ್ನು ಸೀಳಿದ್ದ ಪರಿಣಾಮ ಶಾನು ಕುತ್ತಿಗಿಂತ ರಕ್ತ ಸುರಿಯುತ್ತಿತ್ತು. ತಕ್ಷಣವೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಮನೆಗೆ ಬಂದು ನೋಡುವಷ್ಟರಲ್ಲಿ ಮಾವ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿದ್ದರು. ಜನರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಸೆಬಾಸ್ಟಿಯನ್ ಶವವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಮತ್ತೊಂದೆಡೆ ಸೊಸೆಯ ಸ್ಥಿತಿ ಚಿಂತಾಜನಕವಾಗಿದೆ. ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಅಕ್ಕಪಕ್ಕದ ಮನೆಯವರನ್ನು ವಿಚಾರಿಸಿದಾಗ ಸೆಬಾಸ್ಟಿಯನ್ ಮತ್ತು ಶಾನು ನಡುವೆ ಯಾವಾಗಲೂ ಜಗಳಗಳು ನಡೆಯುತ್ತಿತ್ತು ಎಂದು ತಿಳಿಸಿದ್ದಾರೆ. ಘಟನೆ ನಡೆದ ದಿನ ಶಾನು ಅವರ ಪತಿ ಕೆಲಸದ ನಿಮಿತ್ತ ಹೊರಗೆ ಹೋಗಿದ್ದರು. ಶಾನು ಕಿರುಚಾಟ ಕೇಳಿದಾಗ ಅಕ್ಕಪಕ್ಕದ ಮನೆಯವರು ತಕ್ಷಣವೇ ಸ್ಥಳಕ್ಕೆ ಬಂದಿದ್ದರು. ಆಕೆಯ ಗಂಟಲನ್ನು ಸೀಳಲಾಗಿತ್ತು.

ಮತ್ತಷ್ಟು ಓದಿ: ಅನೈತಿಕ ಸಂಬಂಧಕ್ಕೆ ಅಡ್ಡಿ; ಗಂಡನಿಗೆ ಮದ್ಯಪಾನ ಮಾಡಿಸಿ ಉಸಿರು ಗಟ್ಟಿಸಿ ಕೊಂದ ಪತ್ನಿ!

ಮೆದು ಧ್ವನಿಯಲ್ಲಿ ಮಾವ ತನ್ನ ಮೇಲೆ ಹಲ್ಲೆ ನಡೆಸಿರುವುದಾಗಿ ಆಕೆ ಹೇಳಿದ್ದಳು. ಕೂಡಲೇ ಪತಿ ಆಸ್ಪತ್ರೆಗೆ ಆಗಮಿಸಿದ್ದಾರೆ, ಆಕೆಯ ಸ್ಥಿತಿ ಚಿಂತಾಜನಕವಾಗಿದ್ದು, ಸ್ಥಿತಿ ಸುಧಾರಿಸಿದ ಬಳಿಕವೇ ಹೇಳಿಕೆ ತೆಗೆದುಕೊಳ್ಳಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us