ಕಳ್ಳತನ ಮಾಡಲೆಂದೇ ವರ್ಷದಲ್ಲಿ ಸುಮಾರು 200 ಬಾರಿ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿ

ವರ್ಷಪೂರ್ತಿ ವಿಮಾನದಲ್ಲಿ ಕಳ್ಳತನ ಮಾಡುವುದನ್ನೇ ಕಸುಬಾಗಿಸಿಕೊಂಡಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಒಂದು ವರ್ಷದಲ್ಲಿ 200 ಬಾರಿ ವಿಮಾನಗಳಲ್ಲಿ ಪ್ರಯಾಣಿಸಿ ಪ್ರಯಾಣಿಕರ ಬೆಲೆ ಬಾಳುವ ವಸ್ತುಗಳನ್ನು ಕದ್ದಿದ್ದ ದೆಹಲಿ ಮೂಲದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಕಳ್ಳತನ ಮಾಡಲೆಂದೇ ವರ್ಷದಲ್ಲಿ ಸುಮಾರು 200 ಬಾರಿ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿ
ಏರ್​ಪೋರ್ಟ್​
Follow us
|

Updated on: May 14, 2024 | 9:54 AM

ಕಳ್ಳತನ ಮಾಡಲೆಂದೇ ವರ್ಷದಲ್ಲಿ 200ಕ್ಕೂ ಅಧಿಕ ಬಾರಿ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಒಂದು ವರ್ಷದಲ್ಲಿ 200 ಬಾರಿ ವಿಮಾನಗಳಲ್ಲಿ ಪ್ರಯಾಣಿಸಿ ಪ್ರಯಾಣಿಕರ ಬೆಲೆ ಬಾಳುವ ವಸ್ತುಗಳನ್ನು ಕದ್ದಿದ್ದ ದೆಹಲಿ ಮೂಲದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ರಾಜೇಶ್​ ಕಪೂರ್ ಎಂಬಾತ ಕಳ್ಳತನ ಮಾಡಲೆಂದೇ ಕನಿಷ್ಠ 200 ಬಾರಿ ವಿಮಾನದಲ್ಲಿ ಸುಮಾರು 110 ದಿನಗಳ ಕಾಲ ಪ್ರಯಾಣಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಐಜಿಐ ಉಷಾ ರಂಗ್ನಾನಿ ಮಾತನಾಡಿ, ಕಪೂರ್ ಅವರನ್ನು ಪಹರ್‌ಗಂಜ್‌ನಲ್ಲಿ ಕದ್ದ ಆಭರಣಗಳ ಜತೆ ಬಂಧಿಸಲಾಗಿದೆ ಎಂದು ಹೇಳಿದರು.

ಈ ಆಭರಣಗಳನ್ನು ಕರೋಲ್ ಬಾಗ್‌ನಿಂದ ಬಂಧಿಸಲ್ಪಟ್ಟ ಶರದ್ ಜೈನ್‌ಗೆ ಮಾರಾಟ ಮಾಡಲು ಯೋಜನೆ ರೂಪಿಸಿದ್ದ ಎಂದು ಅವರು ಹೇಳಿದರು. ಕಳೆದ ಮೂರು ತಿಂಗಳಲ್ಲಿ ಪ್ರತ್ಯೇಕ ವಿಮಾನಗಳಲ್ಲಿ ಎರಡು ಪ್ರತ್ಯೇಕ ಕಳ್ಳತನ ಪ್ರಕರಣಗಳು ವರದಿಯಾಗಿವೆ ಎಂದು ರಂಗಾನಿ ಹೇಳಿದ್ದಾರೆ. ನಂತರ ಐಜಿಐ ವಿಮಾನ ನಿಲ್ದಾಣದಿಂದ ಅಪರಾಧಿಗಳನ್ನು ಹಿಡಿಯಲು ವಿಶೇಷ ತಂಡವನ್ನು ರಚಿಸಲಾಗಿದೆ.

ಏಪ್ರಿಲ್ 11 ರಂದು ಹೈದರಾಬಾದ್‌ನಿಂದ ದೆಹಲಿಗೆ ಪ್ರಯಾಣಿಸುತ್ತಿದ್ದಾಗ ಪ್ರಯಾಣಿಕರೊಬ್ಬರು 7 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಕಳೆದುಕೊಂಡಿದ್ದರು. ಫೆಬ್ರವರಿ 2 ರಂದು ಮತ್ತೊಂದು ಕಳ್ಳತನ ವರದಿಯಾಗಿದ್ದು, ಅಮೃತಸರದಿಂದ ದೆಹಲಿಗೆ ಪ್ರಯಾಣಿಸುತ್ತಿದ್ದಾಗ ಪ್ರಯಾಣಿಕರೊಬ್ಬರು 20 ಲಕ್ಷ ರೂಪಾಯಿ ಮೌಲ್ಯದ ಆಭರಣಗಳನ್ನು ಕಳೆದುಕೊಂಡಿದ್ದರು.

ತನಿಖೆಯ ಸಂದರ್ಭದಲ್ಲಿ ದೆಹಲಿ ಮತ್ತು ಅಮೃತಸರ ವಿಮಾನ ನಿಲ್ದಾಣಗಳ ಸಿಸಿಟಿವಿ ದೃಶ್ಯಾವಳಿಗಳು ಮತ್ತು ವಿಮಾನದ ಮ್ಯಾನಿಫೆಸ್ಟ್‌ಗಳನ್ನು ವಿಶ್ಲೇಷಿಸಲಾಗಿದೆ ಎಂದು ರಂಗಾನಿ ಹೇಳಿದರು. ಕಳ್ಳತನದ ಘಟನೆಗಳು ವರದಿಯಾದ ಎರಡೂ ವಿಮಾನಗಳಲ್ಲಿ ಕಾಣಿಸಿಕೊಂಡಿದ್ದರಿಂದ ಶಂಕಿತನನ್ನು ಶಾರ್ಟ್‌ಲಿಸ್ಟ್ ಮಾಡಲಾಗಿತ್ತು ಎಂದು ಅವರು ಹೇಳಿದರು.

ಮತ್ತಷ್ಟು ಓದಿ: ಏರ್​ಇಂಡಿಯಾ ವಿಮಾನದಿಂದ ಕೆಳಗೆ ಹಾರುತ್ತೇನೆ ಎಂದು ಬೆದರಿಕೆಯೊಡ್ಡಿದ್ದ ವ್ಯಕ್ತಿಯ ಬಂಧನ

ಶಂಕಿತ ಪ್ರಯಾಣಿಕರ ಫೋನ್ ಸಂಖ್ಯೆಯನ್ನು ಸಂಬಂಧಪಟ್ಟ ವಿಮಾನಯಾನ ಸಂಸ್ಥೆಗಳಿಂದ ಪಡೆಯಲಾಗಿದೆ, ಆದರೆ ಬುಕ್ಕಿಂಗ್ ಸಮಯದಲ್ಲಿ ಅವರು ನಕಲಿ ಸಂಖ್ಯೆಯನ್ನು ಕೊಟ್ಟಿದ್ದರು ಎಂದು ಅಧಿಕಾರಿ ಹೇಳಿದರು.

ತಾಂತ್ರಿಕ ಕಣ್ಗಾವಲು ನಂತರ, ಕಪೂರ್ ಅವರ ಮೂಲ ಫೋನ್ ಸಂಖ್ಯೆಯನ್ನು ಪತ್ತೆಹಚ್ಚಲಾಯಿತು ಮತ್ತು ಅವರು ಸಿಕ್ಕಿಬಿದ್ದರು. ನಿರಂತರ ವಿಚಾರಣೆಯಲ್ಲಿ, ಹೈದರಾಬಾದ್‌ನ ಒಂದು ಪ್ರಕರಣ ಸೇರಿದಂತೆ ಐದು ಪ್ರಕರಣಗಳಲ್ಲಿ ಭಾಗಿಯಾಗಿರುವುದಾಗಿ ಆತ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಅವರು ಹೆಚ್ಚಿನ ಹಣವನ್ನು ಆನ್‌ಲೈನ್ ಮತ್ತು ಆಫ್‌ಲೈನ್ ಜೂಜಿಗೆ ಖರ್ಚು ಮಾಡಿದ್ದಾರೆ ಎಂಬುದನ್ನು ಬಹಿರಂಗಪಡಿಸಿದ್ದಾರೆ. ಕಪೂರ್ ದುರ್ಬಲ ಪ್ರಯಾಣಿಕರನ್ನು, ವಿಶೇಷವಾಗಿ ಅಂತಾರಾಷ್ಟ್ರೀಯವಾಗಿ ಪ್ರಯಾಣಿಸುವ ವಯಸ್ಸಾದ ಮಹಿಳೆಯರನ್ನು ಗುರಿಯಾಗಿಸುತ್ತಿದ್ದ. ಅಂತಹ ಪ್ರಯಾಣಿಕರು ತಮ್ಮ ಕೈಚೀಲಗಳನ್ನು  ತಾನು ಹಿಡಿದುಕೊಂಡು ಒಳ್ಳೆಯವನು ಎನಿಸಿಕೊಂಡು ಕಳ್ಳತನ ಮಾಡುತ್ತಿದ್ದ ಎಂದು ಪೊಲೀಸರು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ತಾಜಾ ಸುದ್ದಿ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ