AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಚ್ಛೇದನ ಕೇಳಿದ್ದಕ್ಕೆ ಪತ್ನಿ ಮುಖಕ್ಕೆ ಆ್ಯಸಿಡ್ ಎರಚಿದ ಪತಿ

ತನ್ನ ಪತಿಗೆ ಬೇರೊಂದು ಮಹಿಳೆ ಜತೆಗೆ ಅಕ್ರಮ ಸಂಬಂಧವಿರುವ ಕುರಿತು ತಿಳಿದು ಆಘಾತಕ್ಕೊಳಗಾಗಿ ವಿಚ್ಛೇದನ ಕೇಳಿದ್ದಕ್ಕೆ ವ್ಯಕ್ತಿ ಆಕೆಗೆ ಆ್ಯಸಿಡ್ ಎರಚಿರುವ ಘಟನೆ ಮುಂಬೈನಲ್ಲಿ ನಡೆದಿದೆ. 27 ವರ್ಷದ ಮಹಿಳೆ ಮಲಾಡ್‌ನಲ್ಲಿರುವ ತನ್ನ ತಾಯಿಯ ನಿವಾಸದಲ್ಲಿದ್ದಾಗ ಆರೋಪಿ ಬುಧವಾರ ಬೆಳಗ್ಗೆ ಆಕೆಯ ಮೇಲೆ ಆ್ಯಸಿಡ್ ಎರಚಿದ್ದಾನೆ. ಆಕೆಗೆ ಸುಟ್ಟಗಾಯಗಳು ಮತ್ತು ಮುಖದ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾ

ವಿಚ್ಛೇದನ ಕೇಳಿದ್ದಕ್ಕೆ ಪತ್ನಿ ಮುಖಕ್ಕೆ ಆ್ಯಸಿಡ್ ಎರಚಿದ ಪತಿ
ಆ್ಯಸಿಡ್ ದಾಳಿImage Credit source: The Leaflet
ನಯನಾ ರಾಜೀವ್
|

Updated on: Sep 27, 2024 | 11:30 AM

Share

ತನ್ನ ಪತಿಗೆ ಬೇರೊಂದು ಮಹಿಳೆ ಜತೆಗೆ ಅಕ್ರಮ ಸಂಬಂಧವಿರುವ ಕುರಿತು ತಿಳಿದು ಆಘಾತಕ್ಕೊಳಗಾಗಿ ವಿಚ್ಛೇದನ ಕೇಳಿದ್ದಕ್ಕೆ ವ್ಯಕ್ತಿ ಆಕೆಗೆ ಆ್ಯಸಿಡ್ ಎರಚಿರುವ ಘಟನೆ ಮುಂಬೈನಲ್ಲಿ ನಡೆದಿದೆ. 27 ವರ್ಷದ ಮಹಿಳೆ ಮಲಾಡ್‌ನಲ್ಲಿರುವ ತನ್ನ ತಾಯಿಯ ನಿವಾಸದಲ್ಲಿದ್ದಾಗ ಆರೋಪಿ ಬುಧವಾರ ಬೆಳಗ್ಗೆ ಆಕೆಯ ಮೇಲೆ ಆ್ಯಸಿಡ್ ಎರಚಿದ್ದಾನೆ. ಆಕೆಗೆ ಸುಟ್ಟಗಾಯಗಳು ಮತ್ತು ಮುಖದ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

2019ರಲ್ಲಿ ಪ್ರೇಮವಿವಾಹ ಮಾಡಿಕೊಂಡಿದ್ದ ಮಹಿಳೆ, ಗಂಡನ ಅನೈತಿಕ ಸಂಬಂಧದ ವಿಚಾರ ತಿಳಿದು ಕಳೆದ ಮೂರು ತಿಂಗಳಿಂದ ತಾಯಿಯೊಂದಿಗೆ ವಾಸವಾಗಿದ್ದಳು. ಆತ ನಿರುದ್ಯೋಗಿಯಾಗಿದ್ದು ಜತೆಗೆ ಮಾದಕವ್ಯಸನಿಯೂ ಆಗಿದ್ದಾನೆ.

ಪೊಲೀಸರು ಆಕೆಯ ಪತಿ ವಿರುದ್ಧ ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್ 124 (2) (ಹಾನಿ ಮಾಡುವ ಉದ್ದೇಶದಿಂದ ವ್ಯಕ್ತಿಯ ಮೇಲೆ ಆ್ಯಸಿಡ್ ಎರಚುವುದು), 311 (ಗಾಯ ಅಥವಾ ಕೊಲೆ ಪ್ರಯತ್ನ) ಅಡಿಯಲ್ಲಿ ದೂರು ದಾಖಲಿಸಿದ್ದಾರೆ. ಮತ್ತೊಂದು ಘಟನೆ

ಆ್ಯಸಿಡ್‌ ಎರಚಿ ಪರಾರಿಯಾದ ಆರೋಪಿಗಾಗಿ ಪೊಲೀಸರ ಹುಡುಕಾಟ ಖಾಸಗಿ ಕಂಪನಿಯ ನೌಕರನ ಮೇಲೆ ಆ್ಯಸಿಡ್‌ ಎರಚಿ ಪರಾರಿಯಾಗಿರುವ ಆರೋಪಿಗಾಗಿ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಆ್ಯಸಿಡ್ ದಾಳಿಯಿಂದ ಗಾಯಗೊಂಡಿರುವ ಮೂಲತ ಕಲ್ಬುರ್ಗಿಯ ನಾಗೇಶ್ ವಿಕ್ಟೋರಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ.

ಮತ್ತಷ್ಟು ಓದಿ:Kamakshipalya: ಬೆಂಗಳೂರಿನಲ್ಲಿ ಯುವಕನ ಮೇಲೆ ಆ್ಯಸಿಡ್​​ ದಾಳಿ

ಪೊಲೀಸರ ಪ್ರಾಥಮಿಕ ತನಿಖೆಯಿಂದ ಹುಡುಗಿ ವಿಚಾರದಲ್ಲಿ ಆತನ ಸ್ನೇಹಿತನೇ ನಾಗೇಶ್‌ ಮೇಲೆ ಆ್ಯಸಿಡ್‌ ಎರಚಿ ಪರಾರಿಯಾಗಿದ್ದಾನೆ. ಹಾಗಾಗಿ ಪೊಲೀಸರು ಆತನಿಗೆ ಹುಡುಕಾಟ ನಡೆಸುತ್ತಿದ್ದಾರೆ. ಕೃತ್ಯ ನಡೆದ ಸ್ಥಳದಲ್ಲಿ ದೊರೆತಿರುವಂತಹ ಆ್ಯಸಿಡ್‌ ಬಾಟಲಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಹೆಚ್ಚಿನ ತನಿಖೆಗಾಗಿ ಅದನ್ನು ಎಫ್‌ಎಸ್‌‍ಎಲ್‌ಗೆ ಕಳುಹಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ