AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಗರ್ಭಿಣಿ ಪ್ರೇಯಸಿಯನ್ನು ಚಲಿಸುವ ಕಾರಿನಿಂದ ತಳ್ಳಿದ ಯುವಕ

2 ವರ್ಷಗಳಿಂದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ ಯುವಕ ಆಕೆಯೊಂದಿಗೆ ದೈಹಿಕ ಸಂಬಂಧವನ್ನೂ ಇಟ್ಟುಕೊಂಡಿದ್ದ. ಆಕೆ ಗರ್ಭಿಣಿಯಾಗಿದ್ದಳು. ಮದುವೆಯ ವಿಚಾರಕ್ಕೆ ಇಬ್ಬರ ನಡುವೆ ಆಗಾಗ ಜಗಳವಾಗುತ್ತಲೇ ಇತ್ತು. ಆದರೆ, ಆಕೆಯನ್ನು ಕಾರಿನಲ್ಲಿ ಕರೆದುಕೊಂಡು ಹೋಗುತ್ತಿದ್ದ ಯುವಕ ಆಕೆಯನ್ನು ಚಲಿಸುವ ಕಾರಿನಿಂದ ಕೆಳಗೆ ತಳ್ಳಿದ್ದಾನೆ. ಉತ್ತರ ಪ್ರದೇಶದಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. ಆತ ಹೀಗೆ ಮಾಡಿದ್ದೇಕೆ? ಎಂಬ ಮಾಹಿತಿ ಇಲ್ಲಿದೆ.

Viral News: ಗರ್ಭಿಣಿ ಪ್ರೇಯಸಿಯನ್ನು ಚಲಿಸುವ ಕಾರಿನಿಂದ ತಳ್ಳಿದ ಯುವಕ
Pregnant WomanImage Credit source: iStock
ಸುಷ್ಮಾ ಚಕ್ರೆ
|

Updated on:Feb 06, 2026 | 10:49 PM

Share

ನವದೆಹಲಿ, ಫೆಬ್ರವರಿ 6: ಉತ್ತರ ಪ್ರದೇಶದಲ್ಲಿ ಚಲಿಸುವ ಕಾರಿನಿಂದ ತನ್ನ ಪ್ರೇಯಸಿಯನ್ನು ತಳ್ಳಿರುವ ಯುವಕ ಇದೀಗ ಪೊಲೀಸರ ವಶದಲ್ಲಿದ್ದಾನೆ. ಗರ್ಭಪಾತ (Abortion) ಮಾಡಿಸಿಕೊಳ್ಳಲು ನಿರಾಕರಿಸಿದ್ದಕ್ಕಾಗಿ 19 ವರ್ಷದ ಯುವತಿಯನ್ನು ಆಕೆಯ ಪ್ರೇಮಿ ಹೆದ್ದಾರಿಯಲ್ಲಿ ಚಲಿಸುವ ಕಾರಿನಿಂದ ಹೊರಗೆ ತಳ್ಳಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ತುರ್ಕಪಟ್ಟಿ ಪೊಲೀಸ್ ಠಾಣೆ ವ್ಯಾಪ್ತಿಯ ಮಧುರಿಯಾ ಇಂಟರ್ ಕಾಲೇಜು ಬಳಿ ಇಂದು ಸಂಜೆ ಈ ಘಟನೆ ನಡೆದಿದೆ. ಕೊಲ್ಕತ್ತಾ ಮೂಲದ ಯುವತಿ ಅಮ್ಜದ್ ಅಲಿ ಎಂಬಾತನನ್ನು ಪ್ರೀತಿಸುತ್ತಿದ್ದಳು. ಆತ ಆಕೆಯೊಂದಿಗೆ ಜಗಳವಾಡಿ, ತನ್ನ ಸ್ನೇಹಿತನ ಸಹಾಯದಿಂದ ಆಕೆಯನ್ನು ಕಾರಿನಿಂದ ಹೊರಗೆಸೆದಿದ್ದಾನೆ.

ಇದನ್ನೂ ಓದಿ: ಹೆತ್ತ ಮಗಳ ಮೇಲೆ ಅತ್ಯಾಚಾರವೆಸಗಿ ಗರ್ಭಿಣಿ ಮಾಡಿದ ಅಪ್ಪ; ಡಿಎನ್​ಎ ಪರೀಕ್ಷೆಯಲ್ಲಿ ಸತ್ಯ ಬಯಲು

“ಆರೋಪಿಯೊಂದಿಗೆ ಸುಮಾರು 2 ವರ್ಷಗಳಿಂದ ಸಂಬಂಧ ಹೊಂದಿರುವುದಾಗಿ ಯುವತಿ ತಿಳಿಸಿದ್ದಾಳೆ. ಆಕೆ 2 ತಿಂಗಳ ಗರ್ಭಿಣಿಯಾಗಿದ್ದಳು. ಆರೋಪಿಯು ಗರ್ಭಪಾತ ಮಾಡಿಸಿಕೊಳ್ಳುವಂತೆ ಆಕೆಯ ಮೇಲೆ ಒತ್ತಡ ಹೇರುತ್ತಿದ್ದನು” ಎಂದು ಪೊಲೀಸರು ಹೇಳಿದ್ದಾರೆ.

ಆ ಯುವತಿ ಆರ್ಕೆಸ್ಟ್ರಾ ಗುಂಪಿನೊಂದಿಗೆ ಕೆಲಸ ಮಾಡಲು ಉತ್ತರ ಪ್ರದೇಶದ ಕುಶಿನಗರಕ್ಕೆ ಬಂದಿದ್ದಳು. ಆ ಅವಧಿಯಲ್ಲಿ ಅಮ್ಜದ್ ಎಂಬ ಯುವಕನನ್ನು ಭೇಟಿಯಾಗಿದ್ದಳು. ಇಬ್ಬರ ನಡುವೆ ದೈಹಿಕ ಸಂಬಂಧ ಏರ್ಪಟ್ಟಿತ್ತು. ಗರ್ಭಪಾತಕ್ಕಾಗಿ ಒತ್ತಾಯಿಸುತ್ತಿದ್ದ ಆತ ಆಕೆಯನ್ನು ಕಾರಿನಲ್ಲಿ ಫಾಜಿಲ್‌ನಗರಕ್ಕೆ ಕರೆದೊಯ್ಯುತ್ತಿದ್ದಾಗ ಆಕೆ ಗಲಾಟೆ ಮಾಡಿದ್ದಳು. ಹೀಗಾಗಿ ಆಕೆಯ ಮೇಲೆ ಹಲ್ಲೆ ನಡೆಸಿ ಚಲಿಸುತ್ತಿದ್ದ ಕಾರಿನಿಂದ ಹೊರಗೆ ತಳ್ಳಲಾಯಿತು.

ಇದನ್ನೂ ಓದಿ: ಹಸಿವಿನಿಂದ ಅಳುತ್ತಿದ್ದ 5 ವರ್ಷದ ಮಗಳಿಗೆ ಹೆಂಡ ಕುಡಿಸಿ, ಕತ್ತು ಹಿಸುಕಿ ಕೊಂದ ಕುಡುಕ!

“ಆಕೆಗೆ ಯಾವುದೇ ಗಂಭೀರ ಗಾಯಗಳಾಗಿಲ್ಲ. ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ” ಎಂದು ಪೊಲೀಸರು ಹೇಳಿದ್ದಾರೆ. ತನಿಖೆಯ ನಂತರ ದೂರಿನ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:43 pm, Fri, 6 February 26

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?