ರೈಲ್ವೆ ಪ್ರಯಾಣಿಕರ ಕೈಲಿದ್ದ ಮೊಬೈಲ್ ಕದಿಯಲು ರೈಲಿನ ಬಾಗಿಲು ಬಳಿ ಕಲ್ಲು ತೂರಾಟ ನಡೆಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಆತ ನಿತ್ಯ ರೈಲು ಬರುವ ವೇಳೆ ರೈಲಿನ ಬಾಗಿಲುಗಳ ಬಳಿ ನಿಂತವರ ಮೇಲೆ ಕಲ್ಲು ಎಸೆಯುತ್ತಿದ್ದ ಪರಿಣಾಮ ಪ್ರಯಾಣಿಕರ ಕೈಯಿಂದ ಮೊಬೈಲ್ ಬೀಳುತ್ತಿದ್ದಂತೆ ಕದ್ದು ಪರಾರಿಯಾಗುತ್ತಿದ್ದ ಎನ್ನಲಾಗಿದೆ.
ಉತ್ತರಪ್ರದೇಶದಲ್ಲಿ ಸೀಮಾಂಚಲ್ ಎಕ್ಸ್‌ಪ್ರೆಸ್‌ಗೆ ಕಲ್ಲು ತೂರಾಟ ನಡೆಸಿದ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. ಮೊಹಮ್ಮದ್ ಶಮೀಮ್ ಅಲಿಯಾಸ್ ಗೋಲು ಎಂದು ಗುರುತಿಸಲಾದ ವ್ಯಕ್ತಿಯನ್ನು ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್) ಮತ್ತು ಸರ್ಕಾರಿ ರೈಲ್ವೆ ಪೊಲೀಸರು (ಜಿಆರ್‌ಪಿ) ಜಂಟಿ ಕಾರ್ಯಾಚರಣೆಯಲ್ಲಿ ಬಂಧಿಸಿದ್ದಾರೆ.
ಮೊಹಮ್ಮದ್ ಶಮೀಮ್ ಸೋಮವಾರ ಯಮುನಾ ಸೇತುವೆಯ ಬಳಿ ರೈಲಿನಲ್ಲಿ ಪ್ರಯಾಣಿಕರ ಮೇಲೆ ಕಲ್ಲು ಎಸೆದರು, ಒಬ್ಬ ವ್ಯಕ್ತಿ ಗಾಯಗೊಂಡಿದ್ದರು. ರೈಲ್ವೆ ಕಾಯ್ದೆಯ ಸೆಕ್ಷನ್ 153 ಮತ್ತು 147 ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅವರು ಹೇಳಿದರು.
ಮತ್ತಷ್ಟು ಓದಿ: Viral Video: ರೈಲಿನಲ್ಲಿ ಮೊಬೈಲ್ ಕಳ್ಳತನಕ್ಕೆ ಯತ್ನಿಸಿದ ಖತರ್ನಾಕ್ ಕಳ್ಳನಿಗೆ ಪ್ರಯಾಣಿಕರು ನೀಡಿದ ಶಿಕ್ಷೆ ಏನು ಗೊತ್ತಾ?
ಶಮೀಮ್ ರೈಲಿನ ಬಾಗಿಲಿನ ಬಳಿ ಕುಳಿತಿದ್ದ ಪ್ರಯಾಣಿಕರನ್ನು ಗುರಿಯಾಗಿಸಿಕೊಂಡು ಅವರ ಮೊಬೈಲ್ ಫೋನ್ ಕದಿಯುವ ಉದ್ದೇಶದಿಂದ ಈ ಕೆಲಸ ಮಾಡುತ್ತಿದ್ದೆ ಎಂದು ತಪ್ಪೊಪ್ಪಿಕೊಂಡಿದ್ದಾನೆ.
ಕಾನೂನು ಪ್ರಕ್ರಿಯೆ ಆರಂಭಿಸಲಾಗಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪ್ರಯಾಗ್ರಾಜ್ ನಿವಾಸಿಯಾಗಿದ್ದು, ಆತನ ವಿರುದ್ಧ ಜಿಆರ್‌ಪಿ ಠಾಣೆಯಲ್ಲಿ ಹಲವು ಪ್ರಕರಣಗಳು ದಾಖಲಾಗಿವೆ ಎಂದು ಅಧಿಕಾರಿ ತಿಳಿಸಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ