ಮಂಗಳೂರಲ್ಲಿ ಸತ್ತ ವ್ಯಕ್ತಿ ಕೇರಳದಲ್ಲಿ ಬದುಕಿ ಬಂದ್ರು
ಕೇರಳದ ವ್ಯಕ್ತಿ ಸಾವಿನ ದವಡೆಯಿಂದ ಬದುಕಿ ಬಂದಿರುವ ಅಚ್ಚರಿಯ ಘಟನೆ ಕೇರಳದಲ್ಲಿ ನಡೆದಿದೆ. ಪಾರ್ಶ್ವವಾಯು ಸೇರಿದಂತೆ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಪವಿತ್ರನ್ ಎಂಬುವವರು ಮಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಸೋಮವಾರ ತಡರಾತ್ರಿ ಕಣ್ಣೂರಿನ ಶವಾಗಾರದಲ್ಲಿ ಜೀವಂತವಾಗಿ ಪತ್ತೆಯಾಗಿದ್ದಾರೆ.ಸಂಜೆ 6.30ರ ಸುಮಾರಿಗೆ ಅವರನ್ನು ಆಂಬ್ಯುಲೆನ್ಸ್ನಲ್ಲಿ ಕಣ್ಣೂರಿಗೆ ಕಳುಹಿಸಲಾಯಿತು. ರಾತ್ರಿ ತುಂಬಾ ತಡವಾದ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲು ಕುಟುಂಬಸ್ಥರು ನಿರ್ಧರಿಸಿದ್ದರು.
ಮಂಗಳೂರಿನಲ್ಲಿ ಸತ್ತವರು ಕೇರಳದಲ್ಲಿ ಬದುಕಿಬಂದಿರುವ ಘಟನೆ ನಡೆದಿದೆ. ಕೇರಳದ ಕಣ್ಣೂರಿನ 67 ವರ್ಷದ ವ್ಯಕ್ತಿಯೊಬ್ಬರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಅವರು ಮೃತಪಟ್ಟಿದ್ದಾರೆಂದು ಘೋಷಿಸಲಾಗಿತ್ತು. ಆದರೆ ಸೋಮವಾರ ತಡರಾತ್ರಿ ಕಣ್ಣೂರಿನ ಶವಾಗಾರದಲ್ಲಿ ಜೀವಂತವಾಗಿ ಪತ್ತೆಯಾಗಿದ್ದಾರೆ.
ಕಣ್ಣೂರಿನ ಪಚ್ಚಪೊಯಿಕಾ ಮೂಲದ ವೆಳ್ಳುವಕ್ಕಂಡಿ ಪವಿತ್ರನ್ ಎಂದು ಗುರುತಿಸಲಾದ ವ್ಯಕ್ತಿಯನ್ನು ಪಾರ್ಶ್ವವಾಯು ಮತ್ತು ಉಸಿರಾಟದ ಸಮಸ್ಯೆಗಳ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಮುಂಜಾನೆ ದಾಖಲಿಸಲಾಗಿತ್ತು. ವೆಂಟಿಲೇಟರ್‌ನಲ್ಲಿ ಇರಿಸಲಾಗಿದ್ದರೂ, ಅವರ ಸ್ಥಿತಿಯು ಹದಗೆಟ್ಟಿತ್ತು, ಯಾವುದೇ ಸುಧಾರಣೆ ಕಂಡುಬರುತ್ತಿಲ್ಲ, ವೆಂಟಿಲೇಟರ್ನಿಂದ ತೆಗೆದುಬಿಡುವುದೇ ಒಳ್ಳೆಯದು ಎಂದು ವೈದ್ಯರು ಅಭಿಪ್ರಾಯಪಟ್ಟು ಕುಟುಂಬದವರಿಗೆ ತಿಳಿಸಿದರು. ಸಂಜೆಯ ಹೊತ್ತಿಗೆ ಅವರು ಮೃತಪಟ್ಟಿದ್ದಾರೆಂದು ಘೋಷಿಸಲಾಯಿತು. ದೇಹವನ್ನು ಊರಿಗೆ ಸಾಗಿಸಲು ವ್ಯವಸ್ಥೆ ಮಾಡಲಾಯಿತು.
ಸಂಜೆ 6.30ರ ಸುಮಾರಿಗೆ ಅವರನ್ನು ಆಂಬ್ಯುಲೆನ್ಸ್ನಲ್ಲಿ ಕಣ್ಣೂರಿಗೆ ಕಳುಹಿಸಲಾಯಿತು. ರಾತ್ರಿ ತುಂಬಾ ತಡವಾದ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲು ಕುಟುಂಬಸ್ಥರು ನಿರ್ಧರಿಸಿದ್ದರು. ರಿಸುಮಾರು ರಾತ್ರಿ 11.30 ಕ್ಕೆ, ಶವವನ್ನು ಶವಾಗಾರಕ್ಕೆ ಸ್ಥಳಾಂತರಿಸುವಾಗ, ಕರ್ತವ್ಯದಲ್ಲಿದ್ದ ಅಟೆಂಡರ್ ಜಯನ್ ಅವರು ಅಸಹಜವಾದದ್ದನ್ನು ಗಮನಿಸಿದರು.
ಆಂಬ್ಯುಲೆನ್ಸ್ ತೆರೆದಾಗ ಅವರ ಕೈಗಳು ಚಲಿಸುತ್ತಿದ್ದಂತೆ ಭಾಸವಾಗಿತ್ತು. ತಕ್ಷಣ ಶವಾಗಾರವನ್ನು ತೆರೆಯುವ ವ್ಯಕ್ತಿ ಅನೂಪ್ಗೆ ನನಗೆ ಅನುಮಾನವಿದೆ ಎಂಬುದನ್ನು ತಿಳಿಸಿದೆ. ಎಕೆಜಿ ಆಸ್ಪತ್ರೆಯ ವೈದ್ಯಕೀಯ ತಂಡ ತಕ್ಷಣ ಮಧ್ಯ ಪ್ರವೇಶಿಸಿ ಪವಿತ್ರನ್ ಬದುಕಿರುವುದನ್ನು ಖಚಿತಪಡಿಸಿದರು.
ಮತ್ತಷ್ಟು ಓದಿ: ಮಗು ಹುಟ್ಟಿದ ಮರುದಿನವೇ ಹೆರಿಗೆ ಆಸ್ಪತ್ರೆ ಎದುರು ತಂದೆಯ ಸಾವು
ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ತಕ್ಷಣ ತೀವ್ರ ನಿಗಾ ಘಟಕಕ್ಕೆ ಸ್ಥಳಾಂತರಿಸಲಾಯಿತು. ಈ ಘಟನೆಯಿಂದ ಪವಿತ್ರನ್ ಅವರ ಕುಟುಂಬ ಮತ್ತು ಆಸ್ಪತ್ರೆ ಸಿಬ್ಬಂದಿ ಆಘಾತಕ್ಕೊಳಗಾಗಿದ್ದಾರೆ. ಎಕೆಜಿ ಆಸ್ಪತ್ರೆಯ ವೈದ್ಯರು ಅವರ ಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ, ಆದರೆ ಮಂಗಳೂರಿನ ಖಾಸಗಿ ಆಸ್ಪತ್ರೆಯವರು ಮಾಡಿದ ಸಾವಿನ ದೃಢೀಕರಣದ ನಿಖರತೆಯ ಬಗ್ಗೆ ಪ್ರಶ್ನೆಗಳು ಎದ್ದಿವೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ