ಸಂಸತ್ತಿನ ಬಳಿ ಬೆಂಕಿ ಹಚ್ಚಿಕೊಂಡಿದ್ದ 26 ವರ್ಷದ ಯುವಕ ಆರ್‌ಎಂಎಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ವೇಳೆ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಡಿಸೆಂಬರ್ 25ರಂದು ಸಂಸತ್ತಿನ ಬಳಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದ.ಬುಧವಾರ ಉತ್ತರ ಪ್ರದೇಶದ ಬಾಗ್‌ಪತ್‌ನ ಜಿತೇಂದ್ರ ಹೊಸ ಸಂಸತ್ ಕಟ್ಟಡದ ಬಳಿ ಪೆಟ್ರೋಲ್ ಮೈಮೇಲೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ.
ಸಂಸತ್ತಿನ ಬಳಿ ನಿಯೋಜಿಸಲಾಗಿದ್ದ ಭದ್ರತಾ ಸಿಬ್ಬಂದಿಯ ಸಹಾಯದಿಂದ ಬೆಂಕಿಯನ್ನು ನಂದಿಸಲಾಯಿತು. ನಂತರ ಅವರನ್ನು ಆರ್‌ಎಂಎಲ್ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಮೈತುಂಬಾ ಸುಟ್ಟ ಗಾಯಗಳಾಗಿದ್ದವು.
ಆರಂಭಿಕ ತನಿಖೆಗಳ ಪ್ರಕಾರ, ಬಾಗ್‌ಪತ್‌ನಲ್ಲಿ ಮನೆಯಲ್ಲಿ ವಿವಾದದ ಕಾರಣದಿಂದ ವ್ಯಕ್ತಿ ಈ ನಿರ್ಧಾರಕ್ಕೆ ಬಂದಿದ್ದ ಎನ್ನಲಾಗಿದೆ.
ಮತ್ತಷ್ಟು ಓದಿ: ಸಂಸತ್ ಭವನದ ಮುಂದೆ ಬೆಂಕಿ ಹಚ್ಚಿಕೊಂಡು ವ್ಯಕ್ತಿ
ಅವರ ಕುಟುಂಬವು ಆ ಗ್ರಾಮದಲ್ಲೇ ಎರಡು ಹಲ್ಲೆ ಪ್ರಕರಣವನ್ನು ಎದುರಿಸುತ್ತಿದೆ. ಆಸ್ಪತ್ರೆ ವೈದ್ಯರ ಪ್ರಕಾರ ದೇಹವು ಶೇ.95ರಷ್ಟು ಭಾಗ ಸುಟ್ಟು ಹೋಗಿತ್ತು. ಇಂದು ಬೆಳಗಿನ ಜಾವ ಸಾವನ್ನಪ್ಪಿದ್ದಾನೆ, ಮರಣೋತ್ತರ ಪರೀಕ್ಷೆಯ ನಂತರ ಜಿತೇಂದ್ರ ಅವರ ದೇಹವನ್ನು ಅವರ ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ