ಹಿಮಾಚಲ ಪ್ರದೇಶದಲ್ಲಿ ಭೂಕುಸಿತಕ್ಕೆ ಮಾಂಸ ಸೇವನೆ ಕಾರಣವೆಂದ ಐಐಟಿ ನಿರ್ದೇಶಕ!
ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಭೂಕುಸಿತಗಳು, ಮೇಘಸ್ಫೋಟಗಳು ಮತ್ತು ಇತರ ಹಲವು ಸಂಗತಿಗಳು ಮತ್ತೆ ಮತ್ತೆ ಘಟಿಸುತ್ತಿವೆ. ಇವೆಲ್ಲವೂ ಪ್ರಾಣಿಗಳ ಮೇಲಿನ ಕ್ರೌರ್ಯದ ಪರಿಣಾಮಗಳು. ಜನರು ಮಾಂಸವನ್ನು ತಿನ್ನುತ್ತಾರೆ ಎಂದು ಹೇಳಿದ್ದಾರೆ. ಬೆಹೆರಾ ಹೇಳಿಕೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.

ನವದೆಹಲಿ, ಸೆಪ್ಟೆಂಬರ್ 7: ಪ್ರಾಣಿಗಳ ಮೇಲಿನ ಕ್ರೌರ್ಯದಿಂದಾಗಿ ಹಿಮಾಚಲ ಪ್ರದೇಶದಲ್ಲಿ ಭೂಕುಸಿತಗಳು ಮತ್ತು ಮೇಘಸ್ಫೋಟಗಳು ಸಂಭವಿಸುತ್ತಿವೆ ಎಂದು ಐಐಟಿ ಮಂಡಿ ನಿರ್ದೇಶಕ (IIT Mandi Director) ಲಕ್ಷ್ಮೀಧರ್ ಬೆಹೆರಾ (Laxmidhar Behera) ಹೇಳಿದ್ದಾರೆ. ಅಲ್ಲದೆ, ಮಾಂಸ ತಿನ್ನುವುದಿಲ್ಲ ಎಂದು ಪ್ರತಿಜ್ಞೆ ಮಾಡುವಂತೆ ವಿದ್ಯಾರ್ಥಿಗಳಿಗೆ ಸೂಚಿಸಿದ್ದಾರೆ. ಇದು ವಿವಾದಕ್ಕೆ ಕಾರಣವಾಗಿದೆ. ಪ್ರಾಣಿಗಳನ್ನು ಕಡಿಯುವುದನ್ನು ನಿಲ್ಲಿಸಬೇಡಿ. ನೀವು ಅಲ್ಲಿ ಮುಗ್ಧ ಪ್ರಾಣಿಗಳನ್ನು ಕಡಿಯುತ್ತಿದ್ದೀರಿ. ಅವುಗಳು ಸಹಜೀವನದ ಸಂಬಂಧವನ್ನು ಹೊಂದಿದ್ದು, ಅವುಗಳ ಹತ್ಯೆಯಿಂದ ಪರಿಸರದ ಅವನತಿಯಾಗುತ್ತಿದೆ. ನಾವು ಹೀಗಿಯೇ ಮಾಡಿದರೆ, ಹಿಮಾಚಲ ಪ್ರದೇಶವು ಗಮನಾರ್ಹವಾದ ಅವನತಿ ಹೊಂದಲಿದೆ ಎಂದು ಲಕ್ಷ್ಮೀಧರ್ ಬೆಹೆರಾ ಹೇಳಿದ್ದಾರೆ.
ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಭೂಕುಸಿತಗಳು, ಮೇಘಸ್ಫೋಟಗಳು ಮತ್ತು ಇತರ ಹಲವು ಸಂಗತಿಗಳು ಮತ್ತೆ ಮತ್ತೆ ಘಟಿಸುತ್ತಿವೆ. ಇವೆಲ್ಲವೂ ಪ್ರಾಣಿಗಳ ಮೇಲಿನ ಕ್ರೌರ್ಯದ ಪರಿಣಾಮಗಳು. ಜನರು ಮಾಂಸವನ್ನು ತಿನ್ನುತ್ತಾರೆ ಎಂದು ಹೇಳಿದ್ದಾರೆ. ಬೆಹೆರಾ ಹೇಳಿಕೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.
ಒಳ್ಳೆಯ ಮನುಷ್ಯರಾಗಲು, ನೀವು ಏನು ಮಾಡಬೇಕು? ಮಾಂಸ ತಿನ್ನುವುದು ಬೇಡ ಎಂದು ಅವರು ಹೇಳಿದ್ದಾರೆ. ಮುಂದುವರಿದು, ಮಾಂಸವನ್ನು ತಿನ್ನುವುದಿಲ್ಲ ಎಂದು ಪ್ರತಿಜ್ಞೆ ಮಾಡಲು ವಿದ್ಯಾರ್ಥಿಗಳಿಗೆ ಸಲಹೆ ನೀಡಿದ್ದಾರೆ.
ವಿವಾದದ ಬಗ್ಗೆ ಬೆಹೆರಾ ಅವರು ಈವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ‘ಎನ್ಡಿಟಿವಿ’ ವರದಿ ಮಾಡಿದೆ.
ಬೆಹೆರಾ ಹೇಳಿಕೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ಷೇಪಗಳು ವ್ಯಕ್ತವಾಗಿವೆ.
‘ಕುಸಿತವು ಪೂರ್ಣಗೊಂಡಿದೆ. ಈ ಮೂಢನಂಬಿಕೆಯ ಮೂರ್ಖರು 70 ವರ್ಷಗಳಲ್ಲಿ ಕಡಿಮೆ ಪ್ರಮಾಣದಲ್ಲಿ ನಿರ್ಮಾಣ ಮಾಡಿದ್ದನ್ನೂ ನಾಶಪಡಿಸುತ್ತಾರೆ’ ಎಂದು ಉದ್ಯಮಿ ಮತ್ತು ಐಐಟಿ ದೆಹಲಿಯ ಹಳೆಯ ವಿದ್ಯಾರ್ಥಿಯಾದ ಸಂದೀಪ್ ಮನುಧಾನೆ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ಇದನ್ನೂ ಓದಿ: G20ಗಾಗಿ ದೆಹಲಿಯ ಬೀದಿಗಳಲ್ಲಿ ಚಿತ್ರ ಬಿಡಿಸಿ ಚಂದಗಾಣಿಸಿದ ಕಲಾವಿದ ಯೋಗೇಶ್ ಸೈನಿ ಪರಿಚಯ ಇಲ್ಲಿದೆ
ಬೆಹೆರಾ ಅವರು ತಮ್ಮ ವಿವಾದಾತ್ಮಕ ಹೇಳಿಕೆಗಳಿಂದ ಸುದ್ದಿಯಾಗುತ್ತಿರುವುದು ಇದೇ ಮೊದಲಲ್ಲ. ಕಳೆದ ವರ್ಷ, ಅವರು ‘ಪವಿತ್ರ ಮಂತ್ರಗಳನ್ನು’ ಪಠಿಸುವ ಮೂಲಕ ತನ್ನ ಸ್ನೇಹಿತನ ಅಪಾರ್ಟ್ಮೆಂಟ್ನಿಂದ ಭೂತೋಚ್ಚಾಟನೆ ಮಾಡಿ ‘ದುಷ್ಟಶಕ್ತಿಗಳನ್ನು’ ನಿರ್ಮೂಲನಗೊಳಿಸುವ ಕ್ರಿಯೆಯಲ್ಲಿ ತೊಡಗಿಸಿಕೊಂಡಿದ್ದೆ ಎಂದು ಹೇಳಿಕೊಂಡಿದ್ದು ಸುದ್ದಿಯಾಗಿತ್ತು.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ